ಕರ್ನಾಟಕಕ್ಕೆ ಭದ್ರಾ ಮೇಲ್ದಂಡೆ ಯೋಜನೆಗೆ 53೦೦ ಕೋಟಿ ಕೊಟ್ಟಿರುವುದನ್ನು ಸ್ವಾಗತಿಸುತ್ತೇನೆ-ರಮೇಶ ಜಾರಕಿಹೊಳಿ!
ಯುವ ಭಾರತ ಸುದ್ದಿ ಗೋಕಾಕ: ಬಹು ನಿರೀಕ್ಷಿತ ಕೇಂದ್ರ ಬಜೆಟ್ 2022 ಘೋಷಣೆಯಾಗಿದೆ. ಈ ಬಾರಿಯ ಬಜೆಟ್‌ನಲ್ಲಿ ಕೃಷಿ ಕ್ಷೇತ್ರಕ್ಕೂ ಅನುದಾನ ಘೋಷಿಸಲಾಗಿದ್ದು, ರೈತ ಮುಖದಲ್ಲಿ ಮಂದಹಾಸ ಮೂಡಿಸಿದೆ. ಕರ್ನಾಟಕಕ್ಕೆ ಭದ್ರಾ ಮೇಲ್ದಂಡೆ ಯೋಜನೆಗೆ 53೦೦ ಕೋಟಿ ಕೊಟ್ಟಿರುವುದನ್ನು ಸ್ವಾಗತಿಸುತ್ತೇನೆ ಎಂದು ಶಾಸಕ ರಮೇಶ ಜಾರಕಿಹೊಳಿ ತಿಳಿಸಿದ್ದಾರೆ.
ರೈಲ್ವೆಗೂ ಅನುದಾನ ಘೋಷಣೆ, ಹಿರಿಯ ನಾಗರಿಕರಿಗೆ ಸಿಹಿ ಸುದ್ದಿ ಕೊಟ್ಟಿದೆ. ಇನ್ನು ಮಧ್ಯಮ ವರ್ಗದ ಜನರ ಹೊರೆಯನ್ನು ಸರ್ಕಾರ ಕಡಿಮೆ ಮಾಡಿದ್ದು, ಆದಾಯ ತೆರಿಗೆ ಮಿತಿಯಲ್ಲಿ ರಿಯಾಯಿತಿ ನೀಡಲಾಗಿದೆ. ಹೊಸ ತೆರಿಗೆ ಪದ್ಧತಿ ಅನ್ವಯ ಇನ್ಮುಂದೆ ಏಳು ಲಕ್ಷದವರೆಗೆ ತೆರಿಗೆ ಪಾವತಿಸುವಂತಿಲ್ಲ. ಬಜೇಟ್ ಆರ್ಥಿಕ ಅಭಿವೃದ್ಧಿಗೆ ಬೂಸ್ಟರ್ ಡೋಸ್ ನೀಡಿದಂತಿದೆ ಎಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ ಮಂಡಿಸಿದ ಬಜೆಟ್ಗೆ ಶಾಸಕರು ಅಭಿನಂದನೆ ಸಲ್ಲಿಸಿದ್ದಾರೆ.