Breaking News

ಶಾಸಕ ರಮೇಶ ಜಾರಕಿಹೊಳಿ ಗೋಕಾಕ ಮತಕ್ಷೇತ್ರದ ಅಭಿವೃದ್ಧಿಗಾಗಿ ಶ್ರಮಿಸುತ್ತಿದ್ದಾರೆ- ಅಂಬಿರಾವ ಪಾಟೀಲ.!

Spread the love

ಶಾಸಕ ರಮೇಶ ಜಾರಕಿಹೊಳಿ ಗೋಕಾಕ ಮತಕ್ಷೇತ್ರದ ಅಭಿವೃದ್ಧಿಗಾಗಿ ಶ್ರಮಿಸುತ್ತಿದ್ದಾರೆ- ಅಂಬಿರಾವ ಪಾಟೀಲ.!

ಗೋಕಾಕ: ಶಾಸಕ ರಮೇಶ ಜಾರಕಿಹೊಳಿ ಅವರು ಗೋಕಾಕ ಮತಕ್ಷೇತ್ರದ ಅಭಿವೃದ್ಧಿಗಾಗಿ ಶ್ರಮಿಸುತ್ತಿದ್ದಾರೆ ಎಂದು ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಹೇಳಿದರು.
ಅವರು, ತಾಲೂಕಿನ ಕನಸಗೇರಿ, ತವಗ, ಕೈತನಾಳ, ಕೈ ಹೊಸೂರ, ತೆಳಗಿನಹಟ್ಟಿ, ಮದವಾಲ, ಅಕ್ಕತಂಗೇರಹಾಳ, ಡುಂ ಉರಬಿನಹಟ್ಟಿ ಗ್ರಾಮಗಳಲ್ಲಿ ಒಟ್ಟು 5೦ಕೋಟಿ ರೂ ಮೊತ್ತದ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿದರು.
ಗೋಕಾಕ ಮತಕ್ಷೇತ್ರದಲ್ಲಿ ಶಾಸಕ ರಮೇಶ ಜಾರಕಿಹೊಳಿ ಅವರು ಸಾರ್ವಜನಿಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ರಸ್ತೆಗಳ ಅಭಿವೃದ್ಧಿ ಸೇರಿದಂತೆ ಮೂಲಭೂತ ಸೌಕರ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಿದ್ದಾರೆ. ಗೋಕಾಕ ಮತಕ್ಷೇತ್ರ ಮಾದರಿ ಕ್ಷೇತ್ರವನ್ನಾಗಿ ಮಾಡಲು ಕ್ಷೇತ್ರದ ಜನತೆ ಶಾಸಕ ರಮೇಶ ಜಾರಕಿಹೊಳಿ ಅವರಿಗೆ ಸಹಕರಿಸುವಂತೆ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಶಾಸಕರ ಆಪ್ತ ಸಹಾಯಕ ಭೀಮಗೌಡ ಪೋಲಿಸಗೌಡ್ರ, ಗ್ರಾಪಂ, ತಾಪಂ ಸದಸ್ಯರು, ಕನಸಗೇರಿ, ತವಗ, ಕೈತನಾಳ, ಕೈ ಹೊಸೂರ, ತೆಳಗಿನಹಟ್ಟಿ, ಮದವಾಲ, ಅಕ್ಕತಂಗೇರಹಾಳ, ಡುಂ ಉರಬಿನಹಟ್ಟಿ ಗ್ರಾಮಗಳ ಹಿರಿಯರು, ಅಧಿಕಾರಿಗಳು ಉಪಸ್ಥಿತರಿದ್ದರು.


Spread the love

About Yuva Bharatha

Check Also

ಗೋಕಾಕನಲ್ಲಿ ಬಿಜೆಪಿಯಿಂದ ಕಾಂಗ್ರೇಸ್ ವಿರುದ್ಧ ಪ್ರತಿಭಟನೆ.!

Spread the loveಗೋಕಾಕನಲ್ಲಿ ಬಿಜೆಪಿಯಿಂದ ಕಾಂಗ್ರೇಸ್ ವಿರುದ್ಧ ಪ್ರತಿಭಟನೆ.! ಗೋಕಾಕ: ವಿಜಯಪುರ ಸೇರಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿಯ ಹಿಂದು ಧಾರ್ಮಿಕ …

Leave a Reply

Your email address will not be published. Required fields are marked *

9 + 13 =