Breaking News

ಅಹಿಂದ ಸ್ವಾಮಿಜಿಗಳಿಂದ ಸಾಹುಕಾರ್ ಮನೆಯಲ್ಲಿ ಶಕ್ತಿ ಪ್ರದರ್ಶನ.!

Spread the love

ಅಹಿಂದ ಸ್ವಾಮಿಜಿಗಳಿಂದ ಸಾಹುಕಾರ್ ಮನೆಯಲ್ಲಿ ಶಕ್ತಿ ಪ್ರದರ್ಶನ.!

ಬೆಳಗಾವಿ: ಎಸ್ ಸಿ, ಎಸ್ ಟಿ‌ ಸಮುದಾಯದ ವಿವಿಧ ಪೀಠಗಳ ಏಳು ಜನ ಮಠಾಧೀಶರು ಬೆಳಗಾವಿಯ ವಿದ್ಯಾನಗರದಲ್ಲಿರುವ ಗೋಕಾಕ ಶಾಸಕ ರಮೇಶ ಜಾರಕಿಹೊಳಿ ಹಾಗೂ ವಿಧಾನಪರಿಷತ್ ಸದಸ್ಯ ಲಖನ್ ಜಾರಕಿಹೊಳಿ ಅವರ ನಿವಾಸಕ್ಕೆ ಸೋಮವಾರ ಭೇಟಿ ನೀಡಿ ಗೌಪ್ಯ ಸಭೆ ನಡೆಸಿದರು.

ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಜಗದ್ಗುರು ವಾಲ್ಮೀಕಿ ಶ್ರೀ ಪ್ರಸನ್ನಾನಂದ ಸ್ವಾಮೀಜಿ, ಚಿತ್ರದುರ್ಗ ಶಿವಶರಣ ಮಾದಾರಚನ್ನಯ್ಯ ಗುರುಪೀಠದ ಶ್ರೀ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ, ಮೈಸೂರು ಉರಿಲಿಂಗ ಪೆದ್ದಿಮಠದ ಶ್ರೀ ಜ್ಞಾನ ಪ್ರಕಾಶ ಸ್ವಾಮೀಜಿ, ಚಿತ್ರದುರ್ಗ ಬಂಜಾರಾ ಗುರುಪೀಠದ ಸಂತ ಸೇವಾಲಾಲ ಸ್ವಾಮೀಜಿ, ಚಿತ್ರದುರ್ಗ ಮೇದಾರ ಕೇತೇಶ್ವರ ಗುರುಪೀಠದ ಶ್ರೀ ಬಸವಪ್ರಭು ಇಮ್ಮಡಿ ಕೇತೇಶ್ವರ ಸ್ವಾಮೀಜಿ, ಚಿತ್ರದುರ್ಗ ಛಲವಾದಿ ಗುರುಪೀಠದ ಶ್ರೀ ಬಸವನಾಗಿದೇವ ಸ್ವಾಮೀಜಿ, ಶ್ರೀ ಸಿದ್ದರಾಮೇಶ್ವರ ಸ್ವಾಮೀಜಿ ಭೇಟಿ ನೀಡಿದರು.

ಜಾರಕಿಹೊಳಿ ಅವರ ಮನೆಗೆ ಆಗಮಿಸಿದ ಮಠಾಧೀಶರನ್ನು ರಮೇಶ್ ಜಾರಕಿಹೊಳಿ ಹಾಗೂ ಲಕನ್ ಜಾರಕಿಹೊಳಿ ಸಾಲುಹರಿಸಿ ಅನ್ನು ಹಂಪಲು ನೀಡಿ ಸನ್ಮಾನಿಸಿದರು. ಜಾರಕಿಹೊಳಿ ಸಹೋದರರು ಆಶೀರ್ವಾದ ಪಡೆದು ಗೌಪ್ಯ ಸಭೆ ನಡೆಸಿದರು. ಮಾಧ್ಯಮದವರನ್ನು ಹೊರಗೆ ಕಳುಹಿಸಿ ಗೌಪ್ಯ ಸಭೆ ನಡೆಸುವ ಮೂಲಕ ಒಗ್ಗಟ್ಟು ಪ್ರದರ್ಶಿಸಿದರು.


Spread the love

About Yuva Bharatha

Check Also

ಗೋಕಾಕನಲ್ಲಿ ಬಿಜೆಪಿಯಿಂದ ಕಾಂಗ್ರೇಸ್ ವಿರುದ್ಧ ಪ್ರತಿಭಟನೆ.!

Spread the loveಗೋಕಾಕನಲ್ಲಿ ಬಿಜೆಪಿಯಿಂದ ಕಾಂಗ್ರೇಸ್ ವಿರುದ್ಧ ಪ್ರತಿಭಟನೆ.! ಗೋಕಾಕ: ವಿಜಯಪುರ ಸೇರಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿಯ ಹಿಂದು ಧಾರ್ಮಿಕ …

Leave a Reply

Your email address will not be published. Required fields are marked *

9 + 20 =