ಮುಂಬೈಯಲ್ಲಿ ಬೆಳಗಾವಿ, ನಿಪ್ಪಾಣಿಗಾಗಿ ಬೃಹತ್ ಪ್ರತಿಭಟನೆ !

ಯುವ ಭಾರತ ಸುದ್ದಿ ಮುಂಬೈ :
ಬೆಳಗಾವಿ, ಕಾರವಾರ, ನಿಪ್ಪಾಣಿ ಸೇರಿದಂತೆ ಮರಾಠಿ ಪ್ರದೇಶಗಳನ್ನು ಒಳಗೊಂಡ ಅಖಂಡ ಮಹಾರಾಷ್ಟ್ರ ರಚನೆ ಶೀಘ್ರವೇ ಆಗಬೇಕು ಎಂದು ಒತ್ತಾಯಿಸಿ ರಾಷ್ಟ್ರವಾದಿ ಕಾಂಗ್ರೆಸ್ ಪಕ್ಷ, ಕಾಂಗ್ರೆಸ್ ಮತ್ತು ಉದ್ದವ ಠಾಕ್ರೆ ನೇತೃತ್ವದ ಶಿವಸೇನೆ (ಮಹಾ ವಿಕಾಸ ಅಘಾಡಿ ಮೈತ್ರಿಕೂಟ) ಮುಂಬೈಯಲ್ಲಿ ಬೃಹತ್ ಪ್ರತಿಭಟನೆ ನಡೆಸಿದೆ.
ಶನಿವಾರ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಉದ್ದವ ಠಾಕ್ರೆ, ಬೆಳಗಾವಿ, ಕಾರವಾರ, ನಿಪ್ಪಾಣಿ ಸೇರಿದಂತೆ ಕರ್ನಾಟಕದ ಅನೇಕ ಗ್ರಾಮಗಳನ್ನು ಮಹಾರಾಷ್ಟ್ರದಲ್ಲಿ ವಿಲೀನಗೊಳಿಸುವ ಮೂಲಕ ಸಂಯುಕ್ತ ಮಹಾರಾಷ್ಟ್ರ ಕನಸು ನನಸಾಗಿಸಬೇಕು ಎಂದು ಕರೆ ನೀಡಿದರು. ಏಕನಾಥ ಶಿಂಧೆ ಮತ್ತು ದೇವೇಂದ್ರ ಫಡ್ನವಿಸ್ ನೇತ್ರತ್ವದ ಶಿವಸೇನೆ ಹಾಗೂ ಬಿಜೆಪಿ ಸರಕಾರ ಗಡಿಭಾಗದ ಮರಾಠಿ ಜನರ ಅಸ್ಮಿತೆಯನ್ನು ಮರೆತಿದೆ ಎಂದು ಮೂರೂ ಪಕ್ಷಗಳ ನಾಯಕರು ವಾಗ್ದಾಳಿ ನಡೆಸಿದರು.
YuvaBharataha Latest Kannada News