ಅಂಬಿಗರ ಸಮಾಜಕ್ಕೆ ಎಸ್ ಟಿ ಮೀಸಲಾತಿ ನೀಡಲು ಆಗ್ರಹ
ಯುವ ಭಾರತ ಸುದ್ದಿ ಬೆಳಗಾವಿ : ಅಂಬಿಗರ ಸಮಾಜಕ್ಕೆ ಎಸ್ ಟಿ ಮೀಸಲಾತಿ ನೀಡಲು ನಿಜಶರಣ ಅಂಬಿಗರ ಚೌಡಯ್ಯನವರ ಗುರುಪೀಠ ಜಗದ್ಗುರು
ಶಾಂತಭೀಷ್ಮಚೌಡಯ್ಯ ಸ್ವಾಮೀಜಿ ಒತ್ತಾಯಿಸಿದ್ದಾರೆ.
ಬೆಳಗಾವಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಅವರು ಈ ವಿಚಾರವಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಲಾಗಿದ್ದು,ಅವರು ಮೀಸಲಾತಿ ಕೊಡುವ ನಿಟ್ಟಿನಲ್ಲಿ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಹೇಳಿದರು.
ಜನೆವರಿ 14, 15 ರಂದುಅಂಬಿಗರ 5ನೇ ಶರಣ ಸಂಸ್ಕೃತಿ ಉತ್ಸವ ನಡೆಯಲಿದೆ. ಶಾಂತಮುನಿ ಸ್ವಾಮೀಜಿ 7 ನೇ ಜಯಂತ್ಯುತ್ಸವ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಸಿದ್ದರಾಮಯ್ಯ ಭಾಗವಹಿಸುತ್ತಾರೆ. ಕಲಬುರ್ಗಿಯ ಚೌಡಯ್ಯಪುರದಲ್ಲಿ ಅಂಬಿಗರ ಪೀಠ ಸ್ಥಾಪನೆ ಮಾಡ್ತಿದ್ದೇವೆ. ಇದಕ್ಕಾಗಿ 15 ಎಕರೆ ಜಮೀನು ಖರೀದಿಸಲಾಗಿದೆ ಎಂದು ತಿಳಿಸಿದರು.
ಅಂಬಿಗರ ಸಮಾಜ ಹಿಂದುಳಿದ ವರ್ಗಕ್ಕೆ ಸೇರಿದ್ದು, ನಮ್ಮ ಸಮಾಜಕ್ಕೆ ಎಸ್ ಟಿ ಮೀಸಲಾತಿ ನೀಡಬೇಕು.ಬಿಜೆಪಿ ಸರ್ಕಾರ ಕೊಟ್ಟ ಮಾತಿನಂತೆ ಎಸ್ ಟಿ ಮೀಸಲಾತಿ ನೀಡಬೇಕು. ಮುಂಬರುವ ಚುನಾವಣೆಯಲ್ಲಿ ಅಂಬಿಗರ ಸಮಾಜದ ಮುಖಂಡರಿಗೆ ಟಿಕೆಟ್ ಕೊಡಬೇಕು. ಸರ್ಕಾರ ನಮ್ಮ ಸಮಾಜಕ್ಕೆ ಎಸ್ ಟಿ ಮೀಸಲಾತಿ ಕೊಡದಿದ್ದರೆ ಮುಂದೆ ಹೋರಾಟದ ರೂಪಿಸುತ್ತೇವೆ ಎಂದು ಶ್ರೀಗಳು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.
ಅಂಬಿಗರ ಉತ್ಸವದಲ್ಲಿ ಮೀಸಲಾತಿ ಕುರಿತು ಸಿಎಂ ಅವರಿಗೆ ಒತ್ತಾಯ ಮಾಡುತ್ತೇವೆ. ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮಕ್ಕೆ ಸರ್ಕಾರದಿಂದ ಅನುದಾನ ಕೊಡುತ್ತಿಲ್ಲ. ಇದರ ಬಗ್ಗೆ ನಮಗೆ ಬೇಸರವಿದೆ. ಸರ್ಕಾರ ಆದಷ್ಟು ಬೇಗ ನಿಗಮ ಮಂಡಳಿಗೆ ಅನುದಾನ ಕೊಡಬೇಕು.ನಮ್ಮ ಸಮಾಜದ ಶಾಸಕರಿಗೆ ಸಚಿವ ಸ್ಥಾನ ನೀಡಬೇಕು ಎಂದು ಶ್ರೀಗಳು ಒತ್ತಾಯಿಸಿದರು. ಪತ್ರಿಕಾಗೋಷ್ಠಿಯಲ್ಲಿ ಗಂಗಾಮತಸ್ಥರ ಸಮಾಜದ ಮುಖಂಡರು ಉಪಸ್ಥಿತರಿದ್ದರು.