Breaking News

೧೮ನೇ ಶರಣ ಸಂಸ್ಕೃತಿ ಉತ್ಸವ ಕಾಯಕ ಶ್ರೀ ಪ್ರಶಸ್ತಿಗೆ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ಶ್ರೀ ಕಲ್ಪನ ಸರೋಜ ಆಯ್ಕೆ-ಶ್ರೀ ಮುರುಘರಾಜೇಂದ್ರ ಮಹಾಸ್ವಾಮಿಜಿ.!

Spread the love

೧೮ನೇ ಶರಣ ಸಂಸ್ಕೃತಿ ಉತ್ಸವ ಕಾಯಕ ಶ್ರೀ ಪ್ರಶಸ್ತಿಗೆ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ಶ್ರೀ ಕಲ್ಪನ ಸರೋಜ ಆಯ್ಕೆ-ಶ್ರೀ ಮುರುಘರಾಜೇಂದ್ರ ಮಹಾಸ್ವಾಮಿಜಿ.!

ಗೋಕಾಕ: ನಗರದ ಶ್ರೀ ಶೂನ್ಯ ಸಂಪಾದನ ಮಠದ ಹಿಂದಿನ ಪೀಠಾಧಿಪತಿ ಲಿಂಗೈಕ್ಯ ಪೂಜ್ಯ ಬಸವ ಮಹಾಸ್ವಾಮಿಜಿಯವರ ಪುಣ್ಯ ಸ್ಮರಣೆ ನಿಮಿತ್ಯ ಪ್ರತಿ ವರ್ಷ ಹಮ್ಮಿಕೊಳ್ಳುವ ಶರಣ ಸಂಸ್ಕೃತಿ ಉತ್ಸವವನ್ನು ಮಾರ್ಚ ೧ರಿಂದ ೪ರವರೆಗೆ ನಗರದ ಶ್ರೀ ಚನ್ನಬಸವೇಶ್ವರ ವಿದ್ಯಾ ಪೀಠದ ಆವರಣದಲ್ಲಿ ಹಮ್ಮಿಕೊಳ್ಳಲಾಗುವದೆಂದು ಪೀಠಾಧಿಪತಿ ಶ್ರೀ ಮುರುಘರಾಜೇಂದ್ರ ಮಹಾಸ್ವಾಮಿಗಳು ಹೇಳಿದರು.
ಅವರು, ಮಂಗಳವಾರದAದು ನಗರದ ಶೂನ್ಯ ಸಂಪಾದನ ಮಠದಲ್ಲಿ ನಡೆದ ಶರಣ ಸಂಸ್ಕೃತಿ ಉತ್ಸವದ ಪೂರ್ವಭಾವಿ ಸಭೆಯ ಸಾನಿಧ್ಯವನ್ನು ವಹಿಸಿ ಮಾತನಾಡುತ್ತ, ಮಾರ್ಚ ೧ರಂದು ಉದ್ಘಾಟನಾ ಸಮಾರಂಭ ಹಾಗೂ ಬಸವ ತತ್ವ ಸಮಾವೇಶ ನಡೆಯಲಿದೆ. ೨ನೇ ದಿನ ವೈದ್ಯರುಗಳ ಸಮಾವೇಶ, ೩ನೇ ದಿನ ಮಹಿಳಾ ಸಮಾವೇಶ ಹಾಗೂ ೪ನೇ ದಿನ ಯುವ ಸಮಾವೇಶ ನಡೆಯಲಿದೆ ಎಂದು ಮಾಹಿತಿ ನೀಡಿದರು.
ಈ ವರ್ಷದ ಪ್ರತಿಷ್ಠಿತ ಕಾಯಕ ಶ್ರೀ ಪ್ರಶಸ್ತಿಯನ್ನು ಮಹಾರಾಷ್ಟçದ ಸಾಧಕ ಮಹಿಳೆ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ಶ್ರೀ ಕಲ್ಪನ ಸರೋಜ ಅವರಿಗೆ ನೀಡಲಾಗುವದು. ಅವರು ಶೋಷಣೆ ವಿರುದ್ಧ ಹೋರಾಡಿ, ಆರ್ಥಿಕವಾಗಿ ಹಿಂದುಳಿದವರಿಗೆ ಆರ್ಥಿಕ ಸಹಾಯ ನೀಡುವದರೊಂದಿಗೆ ಅವರನ್ನು ಸ್ವಾವಲಂಭಿಗಳನ್ನಾಗಿ ಮಾಡಲು ಶ್ರಮಿಸುತ್ತಿದ್ದಾರೆ. ಅವರ ಸಮಾಜಮುಖಿ ಕಾರ್ಯಗಳು ಇಡಿ ಮನುಕುಲಕ್ಕೆ ಮಾದರಿಯಾಗಿ ರಾಷ್ಟç ಮಟ್ಟದಲ್ಲಿ ಬೆಳೆದಿದ್ದಾರೆ. ಅವರನ್ನು ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದರು.
ಇದೇ ಸಂದರ್ಭದಲ್ಲಿ ೧೮ನೇ ಶರಣ ಸಂಸ್ಕೃತಿ ಉತ್ಸವ ಸಮಿತಿ ಅಧ್ಯಕ್ಷರನ್ನಾಗಿ ಕೆಎಲ್‌ಇ ಸಂಸ್ಥೆಯ ನಿರ್ದೇಶಕ ಜಯಾನಂದ ಮುನವಳ್ಳಿ, ಪ್ರಧಾನ ಕಾರ್ಯದರ್ಶಿಯಾಗಿ ರಾಜು ಭೈರುಗೋಳ ಹಾಗೂ ಕೋಶಾಧ್ಯಕ್ಷರಾಗಿ ಸದಾಶಿವ ಗುದಗಗೋಳ ಅವರನ್ನು ಆಯ್ಕೆ ಮಾಡಲಾಯಿತು.


Spread the love

About Yuva Bharatha

Check Also

ಗೋಕಾಕ ಮತಕ್ಷೇತ್ರದಲ್ಲಿ ಝಣಝಣ ಕಾಂಚಾಣ ಸದ್ದು, ಕಾಂಗ್ರೇಸ್ ಅಭ್ಯರ್ಥಿಯಿಂದ ಮತದಾರರಿಗೆ ಹಣದ ಆಮಿಷ.!

Spread the loveಗೋಕಾಕನಲ್ಲಿ ಪ್ರತಿ ಮನೆಗೆ 1000, ಅಲ್ಪಸಂಖ್ಯಾತರಿಗೆ 500 ಕಾಂಗ್ರೇಸ್ ಕಾಂಚಾಣ ಸದ್ದು.! ಗೋಕಾಕ: ಲೋಕಸಭಾ ಚುನಾವಣೆ ಇನ್ನು …

Leave a Reply

Your email address will not be published. Required fields are marked *

eight − one =