ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಕ್ಯಾಲೆಂಡರ್ ಬಿಡುಗಡೆ ಮಾಡಿದ ಡಿಸಿ ನಿತೇಶ ಪಾಟೀಲ

ಯುವ ಭಾರತ ಸುದ್ದಿ ಬೆಳಗಾವಿ :
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಬೆಳಗಾವಿ ಇವರು ಮುದ್ರಿಸಿರುವ 2023 ರ ನೂತನ ವರ್ಷದ ಕ್ಯಾಲೆಂಡರ್‌ನ್ನು ಬೆಳಗಾವಿ ಜಿಲ್ಲಾಧಿಕಾರಿ ನಿತೇಶ ಪಾಟೀಲ ಅವರು ತಮ್ಮ ಕಚೇರಿಯಲ್ಲಿ ಶುಕ್ರವಾರ ಬಿಡುಗಡೆಗೊಳಿಸಿದರು.
ಬೆಳಗಾವಿ ಜಿಲ್ಲಾ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಬಸವರಾಜ ತಾ. ರಾಯವ್ವಗೋಳ, ಜಿಲ್ಲಾ ಕಾರ್ಯದರ್ಶಿ ಶಂಕರ ಎಸ್.ಗೋಕಾವಿ, ಖಜಾಂಚಿ ಶ್ರವಣ ಗು.ರಾಣವ್ವಗೋಳ, ಸಂಘಟನಾ ಕಾರ್ಯದರ್ಶಿ ಬಸವರಾಜ ನಾರಾಯಣಪುರ, ಹಿರಿಯ ಉಪಾಧ್ಯಕ್ಷ ಮಹಾಂತೇಶ ಬಿ.ಪುಡಕಲಕಟ್ಟಿ, ಸಹ ಕಾರ್ಯದರ್ಶಿ ಶ್ರೀಧರ ಸರದಾರ, ನವೀನ ಪಾಟೀಲ, ಜಂಟಿ ಕಾರ್ಯದರ್ಶಿ ಅಸೀಫ್ ಡಿ.ಅತ್ತಾರ ಸೇರಿದಂತೆ ಇತರರು ಉಪಸ್ಥಿತರಿದ್ದರು.
YuvaBharataha Latest Kannada News