ಸಿದ್ಧೇಶ್ವರ ಸ್ವಾಮೀಜಿಯವರ ಜೀವನಗಾಥೆ ಪಠ್ಯದಲ್ಲಿ ಸೇರಿಸಲಾಗುವುದು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಯುವ ಭಾರತ ಸುದ್ದಿ ಬೆಂಗಳೂರು:
ವಿಜಯಪುರದ ಜ್ಞಾನ ಯೋಗಾಶ್ರಮದ ಸಿದ್ಧೇಶ್ವರ ಸ್ವಾಮೀಜಿಯವರ ಜೀವನಗಾಥೆಯನ್ನು ಶಾಲಾ ಪಠ್ಯದಲ್ಲಿ ಸೇರಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
‘ಪೂಜ್ಯ ಶ್ರೀ ಸಿದ್ದೇಶ್ವರ ಸ್ವಾಮೀಜಿಯವರ ಜೀವನಗಾಥೆಯನ್ನು ಶಾಲಾ ಪಠ್ಯದಲ್ಲಿ ಸೇರಿಸುವ ಬಗ್ಗೆ ಅವರ ಉಯಿಲಿನಲ್ಲಿರುವ ಆಶಯದಂತೆ ಕ್ರಮ ಕೈಗೊಳ್ಳಲಾಗುವುದು’ ಎಂದು ಟ್ವೀಟ್ ಮಾಡಿದ್ದಾರೆ.
YuvaBharataha Latest Kannada News