ಶಾಲೆಯಲ್ಲಿ ಬೆಳಗಿನ ಉಪಾಹಾರ ಆರಂಭ

ಯುವ ಭಾರತ ಸುದ್ದಿ ತಿರುವನಂತಪುರ :
ಕೇರಳದ ಕೊಚ್ಚಿಯಲ್ಲಿರುವ ಸರಕಾರಿ ಶಾಲೆಯಲ್ಲಿ ಇಂದಿನಿಂದ ವಿದ್ಯಾರ್ಥಿಗಳಿಗೆ ಬೆಳಗಿನ ಉಪಾಹಾರ ಯೋಜನೆ, ಪ್ರಾರಂಭಿಸಲಾಗುತ್ತಿದೆ.
8,9 ಮತ್ತು 10ನೇ ತರಗತಿಯ ವಿದ್ಯಾರ್ಥಿನಿಯರಿಗೆ ಬೆಳಗಿನ ಉಪಾಹಾರ ಸೌಲಭ್ಯ ದೊರೆಯಲಿದೆ. ಹೆಚ್ಚಿನ ವಿದ್ಯಾರ್ಥಿಗಳು ಮನೆಯಲ್ಲಿ ಉಪಹಾರ ಸೇವಿಸದೆ ಶಾಲೆಗೆ ಹಾಜರಾಗುತ್ತಿದ್ದರು. ಇದು ಅವರ ಆರೋಗ್ಯದ ಮೇಲೆ ಪರಿಣಾಮ ಬೀರಿದೆ. ಈ ಹಿನ್ನೆಲೆಯಲ್ಲಿ ಕೊಚ್ಚಿ ಮಹಾನಗರ ಪಾಲಿಕೆ ಮಕ್ಕಳಿಗೆ ಬೆಳಗಿನ ಉಪಾಹಾರ ಪೂರೈಸುವ ಜವಾಬ್ದಾರಿ ವಹಿಸಿಕೊಂಡಿದೆ.
YuvaBharataha Latest Kannada News