ಕೆಎಲ್‌ಇ ಡಾ. ಪ್ರಭಾಕರ ಕೋರೆ ಆಸ್ಪತ್ರೆ ಹಾಗೂ ವೈದ್ಯಕೀಯ ಸಂಶೋಧನಾ ಕೇಂದ್ರದ ಮೂತ್ರಕೋಶ ವಿಭಾಗದಲ್ಲಿ ಮುಂದುವರೆದ ವೈದ್ಯಕೀಯ ಶಿಕ್ಷಣ ಕಾರ್ಯಾಗಾರ ಸಂಪನ್ನ

ಯುವ ಭಾರತ ಸುದ್ದಿ ಬೆಳಗಾವಿ :
ಇತ್ತೀಚಿನ ದಿನಗಳಲ್ಲಿ ವೈದ್ಯವಿಜ್ಞಾನ ಅಭಿವೃದ್ದಿ ಪಥದ ನಾಗಾಲೋಟದಲ್ಲಿ ಮುನ್ನಡೆಯುತ್ತಿದ್ದು, ಸಂಶೋಧನೆಗಳು ನಿರಂತರವಾಗಿ ನಡೆಯುತ್ತಿವೆ. ಅವುಗಳಿಂದ ಹೊರಬರುವ ಫಲಗಳು ಮದ್ಯಮ ವರ್ಗದ ಜನರಿಗೆ ಅನುಕೂಲ ಕಲ್ಪಿಸುವಂತಾಗಬೇಕು. ಕೈಗೆಟಕುವ ದರದಲ್ಲಿ ವೈದ್ಯಕೀಯ ಸೌಲಭ್ಯ ಹಾಗೂ ಗುಣಮಟ್ಟದ ಚಿಕಿತ್ಸೆ ಲಭಿಸುವಂತಾಗಬೇಕೆಂದು ಕೆಎಲ್‌ಇ ಸಂಸ್ಥೆಯ ಡಾ. ಪ್ರಭಾಕರ ಕೋರೆ ಆಸ್ಪತ್ರೆ ಹಾಗೂ ವೈದ್ಯಕೀಯ ಸಂಶೋಧನಾ ಕೇಂದ್ರದ ವೈದ್ಯಕೀಯ ನಿರ್ದೇಶಕರಾದ ಡಾ. (ಕರ್ನಲ್) ಎಂ ದಯಾನಂದ ಅವರಿಂದಿಲ್ಲಿ ಹೇಳಿದರು.
ಕೆಎಲ್‌ಇ ಸಂಸ್ಥೆಯ ಡಾ. ಪ್ರಭಾಕರ ಕೋರೆ ಆಸ್ಪತ್ರೆ ಹಾಗೂ ವೈದ್ಯಕೀಯ ಸಂಶೋಧನಾ ಕೇಂದ್ರದ ಮೂತ್ರಕೋಶ ವಿಭಾಗವು ಏರ್ಪಡಿಸಿದ್ದ ಮುಂದುವರೆದ ವೈದ್ಯಕೀಯ ಶಿಕ್ಷಣ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದ ಅವರು, ಕೈಗೆಟಕುವ ದರದಲ್ಲಿ ಚಿಕಿತ್ಸೆ ದೊರೆಯುವಂತೆ ವೈದ್ಯ ಸಂಶೋಧನೆಗಳಿಗೆ ಆದ್ಯತೆ ನೀಡಬೇಕು. ಇನ್ನೀತರ ವೈದ್ಯಕೀಯ ಸಂಸ್ಥೆಗಳೊಂದಿಗೆ ಒಡಗೂಡಿ ಸಂಶೋಧನೆ ಕೈಗೊಂಡರೆ ಇನ್ನೂ ಒಳ್ಳೆಯದು ಎಂದು ತಿಳಿಸಿದರು.
ಹಿರಿಯ ಯುರಾಲಾಜಿಸ್ಟ್ ಡಾ. ಆರ್ ಬಿ ನೇರಲಿ ಸ್ವಾಗತಿಸಿ ಪರಿಚಯಿಸಿದರು. ಡಾ. ಮಧುಕರ ಠಾಕೂರ, ಡಾ. ಗಿರಿಧರ ವೇದಾಂತಮ, ಡಾ. ಮದನ್ ಘೊಡಬೋಲೆ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು. ಡಾ. ಶಿಶಿರ ಡಿ ನಿರೂಪಿಸಿದರು.
YuvaBharataha Latest Kannada News