ಇಂಡಿ ಮತಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು ನಿಶ್ಚಿತ
ಯುವ ಭಾರತ ಸುದ್ದಿ ಇಂಡಿ:
ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ,ರಾಜ್ಯಾಧ್ಯಕ್ಷ ಡಿ.ಕೆ.ಶಿವಕುಮಾರ,ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತ್ರತ್ವದಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವುದು ಶತಸಿದ್ದ,ಶಾಸಕ ಯಶವಂತರಾಯಗೌಡ ಪಾಟೀಲ ಅವರ ಅಭಿವೃದ್ದಿ ಕಾರ್ಯಗಳಿಂದ ಇಂಡಿ ಮತಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು ನಿಶ್ಚೀತ ಎಂದು ಕಾಂಗ್ರೆಸ್ ಯುವ ಘಟಕದ ತಾಲೂಕು ಅಧ್ಯಕ್ಷ ಅವಿನಾಶ ಬಗಲಿ ತಿಳಿಸಿದ್ದಾರೆ.
ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಸರ್ವರಿಗೂ ಸಮಪಾಲು,ಸಮಬಾಳು ತತ್ವ ಸಿದ್ದಾಂತದ ಮೇಲೆ ಆಡಳಿತ ನಡೆಸುವ ಕಾಂಗ್ರೆಸ್ ಪಕ್ಷದ ಕಡೆಗೆ ದೇಶ,ರಾಜ್ಯದ ಜನತೆ ಬರುತ್ತಿದ್ದಾರೆ. ಬಿಜೆಪಿಯ ಸುಳ್ಳು ಭರವಸೆಯಿಂದ ಜನರು ಬೆಸತ್ತಿದ್ದಾರೆ ಎಂದು ಆರೋಪಿಸಿದ ಅವರು,ಇಂಡಿಯಲ್ಲಿ ಶಾಸಕ ಯಶವಂತರಾಯಗೌಡ ಪಾಟೀಲ ಅವರು ಹ್ಯಾಟ್ರೀಕ್ ಗೆಲುವು ಸಾಧಿಸಲಿದ್ದು,ತಾಲೂಕಿನ ವಿವಿಧ ಗ್ರಾಮಗಳಲ್ಲಿ ,ಪಟ್ಟದಲ್ಲಿ ಹಮ್ಮಿಕೊಂಡ ಅಭಿವೃದ್ದಿ ಕಾಮಗಾರಿಗಳು,ಸರ್ವಜನಾಂಗದ ಜೊತೆ ಒಳ್ಳೆಯ ಒಡನಾಟ ಹಾಗೂ ಸರ್ವಜನಾಂಗದ ಒಳಿತು ಬಯಸುವುದರಿಂದ ಕಾಂಗ್ರೆಸ್ ಗೆಲುವು ನಿಶ್ಚೀತ ಎಂದು ಹೇಳಿದರು.
ಪಟ್ಟಣದಲ್ಲಿ ಫೆಬ್ರುವರಿ ತಿಂಗಳಲ್ಲಿ ಕಾಂಗ್ರೆಸ್ ಯುವ ಘಟಕದ ವತಿಯಿಂದ ಯುವ ಸಮುದಾಯದ ಬೃಹತ್ ಸಮಾವೇಶ ಹಮ್ಮಿಕೊಳ್ಳಲಾಗುವುದು,ಈಗಾಗಲೆ ಯುವ ಸಮುದಾಯದ ಸಂಘಟನೆ ನಡೆದಿದೆ.ಯುವಕರು ಕಾಂಗ್ರೆಸ್ ಪಕ್ಷದ ಸಂಘಟನೆಯಲ್ಲಿ ಸಕ್ರೀಯವಾಗಿ ತೊಡಗಿಕೊಂಡಿದ್ದಾರೆ ಎಂದು ಹೇಳಿದರು.