ಅಮಿತ್ ಶಾ ಭೇಟಿಗೆ ಸಮಯ ಕೋರಿದ ಸಾಹುಕಾರ್
ಯುವ ಭಾರತ ಸುದ್ದಿ ದೆಹಲಿ :
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಲು ಗೋಕಾಕ ಶಾಸಕ ರಮೇಶ ಜಾರಕಿಹೊಳಿ ಸಮಯ ಕೋರಿದ್ದಾರೆ. ತಮ್ಮ ಆಪ್ತರ ಜೊತೆ ಬುಧವಾರ ದೆಹಲಿಗೆ ತೆರಳಿರುವ ಅವರು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ವಿರುದ್ಧ ಕೆಲ ದಿನಗಳ ಹಿಂದೆ ಗಂಭೀರ ಆರೋಪ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಇದೀಗ ಅಮಿತ್ ಶಾ ಅವರನ್ನು ಮತ್ತೊಮ್ಮೆ ಭೇಟಿ ಮಾಡಿ ಡಿ.ಕೆ.ಶಿವಕುಮಾರ್ ಅವರನ್ನು ಸುತ್ತಿಕೊಂಡಿರುವ ಆರೋಪದ ಪ್ರಕರಣವನ್ನು ಸಿಬಿಐಗೆ ಒಪ್ಪಿಸುವಂತೆ ಮನವರಿಕೆ ಮಾಡಿಕೊಡುವ ಸಾಧ್ಯತೆ ಇದೆ ಎನ್ನಲಾಗಿದೆ.
YuvaBharataha Latest Kannada News
