Breaking News

ಆಂಧ್ರಪ್ರದೇಶ ರಾಜ್ಯಪಾಲರಾಗಿ ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ದಕ್ಷಿಣ ಕನ್ನಡದ ಎಸ್.ಅಬ್ದುಲ್ ನಜೀರ್ ನೇಮಕ !

Spread the love

ಆಂಧ್ರಪ್ರದೇಶ ರಾಜ್ಯಪಾಲರಾಗಿ ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ದಕ್ಷಿಣ ಕನ್ನಡದ ಎಸ್.ಅಬ್ದುಲ್ ನಜೀರ್ ನೇಮಕ !

ಯುವ ಭಾರತ ಸುದ್ದಿ ದೆಹಲಿ :
ಕರ್ನಾಟಕದ ದಕ್ಷಿಣ ಕನ್ನಡ ಜಿಲ್ಲೆಯ ಬೆಳುವಾಯಿ ಮೂಲದವರಾದ ಕೆಲ ದಿನಗಳ ಹಿಂದಷ್ಟೇ ನಿವೃತ್ತರಾಗಿದ್ದ ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ಎಸ್. ಅಬ್ದುಲ್ ನಜೀರ್ ಅವರನ್ನು ಆಂಧ್ರಪ್ರದೇಶದ ರಾಜ್ಯಪಾಲರನ್ನಾಗಿ ನೇಮಕ ಮಾಡಲಾಗಿದೆ. 1958ರ ಜನವರಿ 5ರಂದು ಜನಿಸಿದ್ದ ಅಬ್ದುಲ್ ನಜೀರ್ ಫೆಬ್ರವರಿ 18, 1983 ರಂದು ವಕೀಲರಾಗಿ ನೋಂದಾಯಿಸಿಕೊಂಡಿದ್ದರು. ಕರ್ನಾಟಕ ಹೈಕೋರ್ಟ್ ನಲ್ಲಿ ಅಭ್ಯಾಸ ಮಾಡಿದ ಅವರು 2003ರ ಮೇ 12 ರಂದು ಹೈಕೋರ್ಟ್ ಹೆಚ್ಚುವರಿ ನ್ಯಾಯಾಧೀಶರಾಗಿ ನೇಮಕಗೊಂಡಿದ್ದರು. ಐತಿಹಾಸಿಕ ಅಯೋಧ್ಯೆ ರಾಮ ಜನ್ಮಭೂಮಿ ತೀರ್ಪು ನೀಡಿದ್ದ ಬೆಂಚ್ ಸದಸ್ಯರಾಗಿದ್ದ ಅಬ್ದುಲ್ ನಜೀರ್ ಜನವರಿ 14ರಂದು ನಿವೃತ್ತರಾಗಿದ್ದರು. ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ನ್ಯಾಯಾಲಯ ಸಂಕೀರ್ಣ ಅಭಿವೃದ್ಧಿಯಲ್ಲಿ ಅವರು ಮಹತ್ವದ ಪಾತ್ರ ವಹಿಸಿದ್ದರು. ಸುಪ್ರೀಂ ಕೋರ್ಟ್ ನಿಂದ ಬೀಳ್ಕೊಡುವ ವೇಳೆ ಸಿಜೆಐ ಚಂದ್ರಚೂಡ್ ನ್ಯಾಯಮೂರ್ತಿ ನಜೀರ್ ಅವರ ಸರಳತೆ ಬಗ್ಗೆ ವಿಶೇಷವಾಗಿ ಪ್ರಸ್ತಾಪಿಸಿದ್ದರು.

ನ್ಯಾಯಮೂರ್ತಿ ನಜೀರ್‌ ಅವರು 1958ರ ಜನವರಿ 5ರಂದು ಜನಿಸಿದರು.
ಬೆಳುವಾಯಿ ಗ್ರಾಮದಲ್ಲಿ ಜನಿಸಿದ ಅಬ್ದುಲ್‌ ನಜೀರ್‌ ಅವರು ಮಹಾವೀರ ಕಾಲೇಜಿನಲ್ಲಿ ಬಿಕಾಂ ಪದವಿ ಪಡೆದಿದ್ದಾರೆ.
ಇವರು ಎಸ್‌ಡಿಎಂ ಕಾನೂನು ಕಾಲೇಜಿನಲ್ಲಿ ಕಾನೂನು ಪದವಿ ಪಡೆದಿದ್ದಾರೆ.

ಮುಖ್ಯಮಂತ್ರಿ ಬೊಮ್ಮಾಯಿ ಹರ್ಷ :
ಎಸ್.ಅಬ್ದುಲ್ ನಜೀರ್ ಅವರು ದಕ್ಷಿಣ ಕನ್ನಡದ ಬೆಳುವಾಯಿ ಮೂಲದವರು. ಇವರ ನೇಮಕಕ್ಕೆ ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅಭಿನಂದನೆ ಸಲ್ಲಿಸಿ ಟ್ವೀಟ್‌ ಮಾಡಿದ್ದಾರೆ. “ನೂತನವಾಗಿ ಆಂದ್ರ ಪ್ರದೇಶದ ರಾಜ್ಯಪಾಲರಾಗಿ ನಿಯುಕ್ತಿಗೊಂಡಿರುವ ಹೆಮ್ಮೆಯ ಕನ್ನಡಿಗ ಶ್ರೀ ಎಸ್‌. ಅಬ್ದುಲ್ ನಜೀರ್ ರವರಿಗೆ ಹಾರ್ದಿಕ ಅಭಿನಂದನೆಗಳು. ಮೂಲತಃ ಮಂಗಳೂರಿನ ಬೆಳುವಾಯಿಯವರಾದ ಇವರು ಕರ್ನಾಟಕದ ಉಚ್ಛ ನ್ಯಾಯಾಲಯದಲ್ಲಿ ವಕೀಲರಾಗಿ ಸೇವೆ ಸಲ್ಲಿಸಿ, ನಂತರ ಸುಪ್ರಿಂ ಕೋರ್ಟ್ ನಲ್ಲಿ ನ್ಯಾಯಮೂರ್ತಿಯಾಗಿ ನಿವೃತ್ತರಾಗಿದ್ದರು” ಎಂದು ಸಿಎಂ ಬಸವರಾಜ ಬೊಮ್ಮಾಯಿ ಟ್ವೀಟ್‌ ಮಾಡಿದ್ದಾರೆ.

13 ರಾಜ್ಯಗಳಿಗೆ ನೂತನ ರಾಜ್ಯಪಾಲರು :
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಬಿಹಾರ, ಅಸ್ಸಾಂ, ಹಿಮಾಚಲ ಪ್ರದೇಶ, ಜಾರ್ಖಂಡ್ ಮತ್ತು ಛತ್ತೀಸ್‌ಗಢ ಸೇರಿದಂತೆ ಹಲವು ರಾಜ್ಯಗಳಿಗೆ ಗವರ್ನರ್ ಹುದ್ದೆಗೆ ಹೊಸ ನೇಮಕಾತಿಗಳನ್ನು ಮಾಡಿದ್ದಾರೆ.
ಹೊಸ ನೇಮಕಾತಿಗಳ ಪಟ್ಟಿ ಇಲ್ಲಿದೆ.
* ಅರುಣಾಚಲ ಪ್ರದೇಶದ ರಾಜ್ಯಪಾಲರಾಗಿ ನಿವೃತ್ತ ಲೆಫ್ಟಿನೆಂಟ್ ಜನರಲ್ ಕೈವಲ್ಯ ತ್ರಿವಿಕ್ರಮ್ ಪರ್ನಾಯಕ್ ನೇಮಕ
* ಸಿಕ್ಕಿಂ ರಾಜ್ಯಪಾಲರಾಗಿ ಲಕ್ಷ್ಮಣ ಪ್ರಸಾದ ಆಚಾರ್ಯ ನೇಮಕ
* ಜಾರ್ಖಂಡ್‌ನ ರಾಜ್ಯಪಾಲರಾಗಿ ಸಿ.ಪಿ. ರಾಧಾಕೃಷ್ಣನ್ ನೇಮಕ
* ಹಿಮಾಚಲ ಪ್ರದೇಶದ ರಾಜ್ಯಪಾಲರಾಗಿ ಶಿವಪ್ರತಾಪ್ ಶುಕ್ಲಾ ನೇಮಕ
* ಅಸ್ಸಾಂನ ರಾಜ್ಯಪಾಲರಾಗಿ ಗುಲಾಬ್ ಚಂದ್ ಕಟಾರಿಯಾ ನೇಮಕ
* ಆಂಧ್ರಪ್ರದೇಶದ ರಾಜ್ಯಪಾಲರಾಗಿ ನ್ಯಾಯಮೂರ್ತಿ (ನಿವೃತ್ತ) ಎಸ್. ಅಬ್ದುಲ್ ನಜೀರ್ ನೇಮಕ
* ಆಂಧ್ರಪ್ರದೇಶದ ರಾಜ್ಯಪಾಲರಾಗಿದ್ದ ಬಿಸ್ವ ಭೂಷಣ ಹರಿಚಂದನ್ ಅವರನ್ನು ಛತ್ತೀಸ್‌ಗಢದ ರಾಜ್ಯಪಾಲರನ್ನಾಗಿ ನೇಮಕ
* ಛತ್ತೀಸ್‌ಗಢದ ರಾಜ್ಯಪಾಲರಾಗಿದ್ದ ಅನುಸೂಯಾ ಉಯಿಕ್ಯೆ ಅವರನ್ನು ಮಣಿಪುರದ ರಾಜ್ಯಪಾಲರನ್ನಾಗಿ ನೇಮಕ
* ಮಣಿಪುರದ ರಾಜ್ಯಪಾಲರಾಗಿದ್ದ ಲಾ. ಗಣೇಶನ್ ಅವರನ್ನು ನಾಗಾಲ್ಯಾಂಡ್‌ನ ರಾಜ್ಯಪಾಲರನ್ನಾಗಿ ನೇಮಕ
* ಬಿಹಾರದ ರಾಜ್ಯಪಾಲರಾಗಿದ್ದ ಫಗು ಚೌಹಾಣ್ ಅವರನ್ನು ಮೇಘಾಲಯದ ರಾಜ್ಯಪಾಲರನ್ನಾಗಿ ನೇಮಕ
* ಹಿಮಾಚಲ ಪ್ರದೇಶದ ರಾಜ್ಯಪಾಲರರಾಗಿದ್ದ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ಅವರನ್ನು ಬಿಹಾರದ ರಾಜ್ಯಪಾಲರನ್ನಾಗಿ ನೇಮಕ
* ಜಾರ್ಖಂಡ್‌ನ ರಾಜ್ಯಪಾಲರಾಗಿದ್ದ ರಮೇಶ್ ಬೈಸ್ ಅವರನ್ನು ಮಹಾರಾಷ್ಟ್ರದ ರಾಜ್ಯಪಾಲರನ್ನಾಗಿ ನೇಮಕ
* ಅರುಣಾಚಲ ಪ್ರದೇಶದ ರಾಜ್ಯಪಾಲರಾಗಿದ್ದ ಬ್ರಿಗ್. (ಡಾ.) ಬಿ.ಡಿ ಮಿಶ್ರಾ (ನಿವೃತ್ತ) ಅವರನ್ನು ಲಡಾಖ್‌ನ ಲೆಫ್ಟಿನೆಂಟ್ ಗವರ್ನರ್ ಆಗಿ ನೇಮಕ
ಮೇಲಿನ ನೇಮಕಾತಿಗಳು ಅವರು ತಮ್ಮ ತಮ್ಮ ಕಚೇರಿಗಳ ಉಸ್ತುವಾರಿ ವಹಿಸಿಕೊಂಡ ದಿನಾಂಕದಿಂದ ಜಾರಿಗೆ ಬರುತ್ತವೆ” ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.

ನಿವೃತ್ತಿ ನಂತರ ರಾಜ್ಯಪಾಲರ ಹುದ್ದೆ :
ಕೇರಳಕ್ಕೆ ಈ ಹಿಂದೆ ಸುಪ್ರೀಂ ಕೋರ್ಟ್ ನಿವೃತ್ತ ಮುಖ್ಯ ನ್ಯಾಯಮೂರ್ತಿ ಪಿ. ಸದಾಶಿವಂ ಅವರನ್ನು ರಾಜ್ಯಪಾಲರನ್ನಾಗಿ ನೇಮಕ ಮಾಡಲಾಗಿತ್ತು. ಇದೀಗ ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ಎಸ್. ಅಬ್ದುಲ್ ನಜೀರ್ ಅವರನ್ನು ಆಂಧ್ರಪ್ರದೇಶಕ್ಕೆ ನೂತನ ರಾಜ್ಯಪಾಲರನ್ನಾಗಿ ನೇಮಕ ಮಾಡಲಾಗಿದೆ.


Spread the love

About Yuva Bharatha

Check Also

ಪ್ರಮೋದ್ ಮುತಾಲಿಕ್ ನಿವೃತ್ತಿ, ಶ್ರೀ ರಾಮಸೇನೆ ರಾಷ್ಟ್ರೀಯ ಅಧ್ಯಕ್ಷರಾಗಿ ಸಿದ್ದಲಿಂಗ ಸ್ವಾಮಿ ಆಯ್ಕೆ

Spread the loveಪ್ರಮೋದ್ ಮುತಾಲಿಕ್ ನಿವೃತ್ತಿ, ಶ್ರೀ ರಾಮಸೇನೆ ರಾಷ್ಟ್ರೀಯ ಅಧ್ಯಕ್ಷರಾಗಿ ಸಿದ್ದಲಿಂಗ ಸ್ವಾಮಿ ಆಯ್ಕೆ ಬೆಂಗಳೂರು : ಶ್ರೀ …

Leave a Reply

Your email address will not be published. Required fields are marked *

2 × 2 =