ಇದೊಂದು ಶ್ರೇಷ್ಠ ಬಜೆಟ್ : ರಮೇಶ ಜಾರಕಿಹೊಳಿ

ಯುವ ಭಾರತ ಸುದ್ದಿ ಗೋಕಾಕ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಡಿಸಿರುವ ಬಜೆಟ್ ಅತ್ಯಂತ ಶ್ರೇಷ್ಠವಾಗಿದೆ ಎಂದು ಗೋಕಾಕ ಶಾಸಕ ರಮೇಶ ಜಾರಕಿಹೊಳಿ ಬಣ್ಣಿಸಿದ್ದಾರೆ.
ಎಲ್ಲಾ ಕ್ಷೇತ್ರದ ಸರ್ವತೋಮುಖ ಬೆಳವಣಿಗೆ ಗಮನದಲ್ಲಿಟ್ಟುಕೊಂಡು ಬಸವರಾಜ ಬೊಮ್ಮಾಯಿ ಬಜೆಟ್ ಮಂಡಿಸಿದ್ದಾರೆ. ಮೂಲಭೂತ ಸೌಲಭ್ಯಗಳಿಂದ ಹಿಡಿದು ಪ್ರತಿಯೊಂದು ಕ್ಷೇತ್ರವನ್ನು ಅತ್ಯಂತ ಸೂಕ್ಷ್ಮವಾಗಿ ಗಮನದಲ್ಲಿಟ್ಟುಕೊಂಡು ಅಚ್ಚುಕಟ್ಟು ಹಾಗೂ ಸಾಕಷ್ಟು ಮುಂದಾಲೋಚನೆಗಳಿಂದ ರೂಪಿತವಾದ ಬಜೆಟ್ ಇದಾಗಿದೆ. ಬಜೆಟನ್ನು ಸೂಕ್ಷ್ಮವಾಗಿ ಗಮನಿಸಿದರೆ ಎಲ್ಲಾ ವರ್ಗದ ಜನರ ಹಿತ ಕಾಯುವ ಅದರಲ್ಲೂ ರೈತರು, ವಿದ್ಯಾರ್ಥಿಗಳು, ಕಾರ್ಮಿಕರ ಅಭಿವೃದ್ಧಿ ಕೊಂಡೊಯ್ಯುವ ನಿಟ್ಟಿನಲ್ಲಿ ಮುಖ್ಯಮಂತ್ರಿಗಳು ಯೋಚಿಸಿರುವುದು ಕಂಡು ಬರುತ್ತದೆ. ಭವಿಷ್ಯದ ದೃಷ್ಟಿಯಲ್ಲಿ ಅತ್ಯಂತ ಯೋಗ್ಯ ಬಜೆಟ್ ಇದಾಗಿದೆ ಎಂದು ಅವರು ಪ್ರತಿಕ್ರಿಯಿಸಿದ್ದಾರೆ.
YuvaBharataha Latest Kannada News