ಮುಂದಿನ ಸೋಮವಾರ ಬೆಳಗಾವಿಗೆ ಪ್ರಧಾನಿ ನರೇಂದ್ರ ಮೋದಿ ?

ಬೆಳಗಾವಿ : ಪ್ರಧಾನಿ ನರೇಂದ್ರ ಮೋದಿ ಬೆಳಗಾವಿಗೆ ಸದ್ಯವೇ ಭೇಟಿ ನೀಡುವ ಸಾಧ್ಯತೆ ಇದೆ. ಫೆಬ್ರವರಿ 27ರಂದು ಸಂಜೆ ಸುಮಾರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಬೆಳಗಾವಿಗೆ ಭೇಟಿ ನೀಡುವ ನಿರೀಕ್ಷೆ ಇದೆ. ಬೆಳಗಾವಿಯ ಜಿಲ್ಲಾ ಕ್ರೀಡಾಂಗಣ ಅವರು ಸಾರ್ವಜನಿಕ ಸಭೆ ಉದ್ದೇಶಿಸಿ ಮಾತನಾಡುವ ಸಾಧ್ಯತೆ ಇದೆ. ಬೆಳಗಾವಿಯಲ್ಲಿ ನಿರ್ಮಾಣವಾಗಿರುವ ರೈಲ್ವೆ ನಿಲ್ದಾಣದ ನೂತನ ಕಟ್ಟಡದ ಉದ್ಘಾಟನೆಗೆ ಅವರು ಆಗಮಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಫೆಬ್ರವರಿ 27ರಂದು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಹುಟ್ಟುಹಬ್ಬ. ಅಂದೇ ಶಿವಮೊಗ್ಗದಲ್ಲಿ ನೂತನ ವಿಮಾನ ನಿಲ್ದಾಣ ಉದ್ಘಾಟನೆಯಾಗಲಿದೆ. ಈ ಕಾರ್ಯಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಲಿದ್ದು ಅಂದೇ ಬೆಳಗಾವಿ ಕಾರ್ಯಕ್ರಮ ನಡೆಯಲಿದೆ ಎಂದು ಗೊತ್ತಾಗಿದೆ.
YuvaBharataha Latest Kannada News