ಸಿಎಂ ಆದೇಶ : ಗಾಣಿಗ ಅಭಿವೃದ್ಧಿ ನಿಗಮ ಅಸ್ತಿತ್ವಕ್ಕೆ

ಯುವ ಭಾರತ ಸುದ್ದಿ ಬೆಂಗಳೂರು :
ರಾಜ್ಯದ ಬಿಜೆಪಿ ಸರಕಾರ ಕೊನೆಗೂ ಗಾಣಿಗ ಅಭಿವೃದ್ಧಿ ನಿಗಮವನ್ನು ಅಸ್ತಿತ್ವಕ್ಕೆ ತಂದಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಈ ಬಗ್ಗೆ ಅಧಿಕೃತ ಆದೇಶ ಹೊರಡಿಸಿದ್ದಾರೆ. ಕೆಲ ದಿನಗಳ ಹಿಂದಷ್ಟೇ ಗಾಣಿಗ ಸಮುದಾಯದ ಮುಖಂಡರು ಗಾಣಿಗ ಅಭಿವೃದ್ಧಿ ನಿಗಮವನ್ನು ಸ್ಥಾಪಿಸುವಂತೆ ಮುಖ್ಯಮಂತ್ರಿ ಅವರನ್ನು ಭೇಟಿಯಾಗಿ ಒತ್ತಡ ಹೇರಿದ್ದರು. ಕೊನೆಗೂ ಬಿಜೆಪಿ ಸರಕಾರ ಸ್ಪಂದಿಸಿದ್ದು ಮುಂದಿನ ವಿಧಾನಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಗಾಣಿಗ ಅಭಿವೃದ್ಧಿ ನಿಗಮವನ್ನು ಅಸ್ತಿತ್ವಕ್ಕೆ ತರಲು ಆದೇಶ ಹೊರಡಿಸಿದೆ.
YuvaBharataha Latest Kannada News