Breaking News

ಕಾಂಗ್ರೆಸ್ ಟಿಕೆಟ್ ನನಗೆ ಸಿಗುವ ನಿರೀಕ್ಷೆಯಿದೆ-ಹಿರಿಯ ಪತ್ರಕರ್ತ ಚಂದ್ರಶೇಖರ ಕೊಣ್ಣೂರ!

Spread the love

ಕಾಂಗ್ರೆಸ್ ಟಿಕೆಟ್ ನನಗೆ ಸಿಗುವ ನಿರೀಕ್ಷೆಯಿದೆ-ಹಿರಿಯ ಪತ್ರಕರ್ತ ಚಂದ್ರಶೇಖರ ಕೊಣ್ಣೂರ!

ಗೋಕಾಕ: ಗೋಕಾಕ ಮತಕ್ಷೇತ್ರದಲ್ಲಿ ಸತತ ನಾಲ್ಕು ಬಾರಿ ಅಶೋಕ ಪೂಜಾರಿ ಅವರು ಪರಾಭವಗೊಂಡಿದ್ದು, ಸತತವಾಗಿ ಶಾಸಕ ರಮೇಶ ಜಾರಕಿಹೊಳಿ ಗೆಲವು ಸಾಧಿಸುತ್ತ ಬಂದಿದ್ದಾರೆ. ಕಾಂಗ್ರೇಸ್ ಪಕ್ಷದಲ್ಲಿ ಹೊಸಬರಿಗೆ ಅವಕಾಶ ನೀಡುವಂತೆ ಕಾಂಗ್ರೇಸ್ ಪಕ್ಷದ ಟಿಕೇಟ ಆಕಾಂಕ್ಷಿ ಹಾಗೂ ಹಿರಿಯ ಪತ್ರಕರ್ತ ಚಂದ್ರಶೇಖರ ಕೊಣ್ಣೂರ ಹೇಳಿದರು.

                             

                                                                      ಗೋಕಾಕ ಪತ್ರಿಕಾಗೋಷ್ಠಿಯ ಚಿತ್ರ.

 

ಇನ್ನೊರ್ವ ಕಾಂಗ್ರೇಸ್ ಟಿಕೇಟ್ ಆಕಾಂಕ್ಷಿ ಡಾ.ಮಹಾಂತೇಶ ಕಡಾಡಿ ಮಾತನಾಡಿ, ಗೋಕಾಕ ಮತಕ್ಷೇತ್ರ ಎಲ್ಲ ಕ್ಷೇತ್ರಗಳಲ್ಲಿಯೂ ವಿಭಿನ್ನ ಕ್ಷೇತ್ರ. ಈ ಕ್ಷೇತ್ರದಲ್ಲಿ ಕಳೆದ ಐದು ವರ್ಷಗಳಿಂದ ಸಮಾಜಿಕ ಸೇವೆಯಲ್ಲಿ ತೋಡಗಿದ್ದ ನನಗೆ ಕ್ಷೇತ್ರದಲ್ಲಿಯ ಜನತೆ ಭಯದ ವಾತಾವರಣದಲ್ಲಿರುವದು ಕಂಡು ಬಂದಿದೆ. ಇಲ್ಲಿ ಹಣಬಲ ತೋಳ್ಬಲದಿಂದ ಚುನಾವಣೆ ನಡೆಯುತ್ತ ಬಂದಿದ್ದು, ಕಳೇದ ನಾಲ್ಕು ಚುನಾವಣೆಗಳಿಂದ ಸೂಕ್ತ ಅಭ್ಯರ್ಥಿಗೆ ಟಿಕೇಟ್ ನೀಡದ ಹಿನ್ನಲೆ ಶಾಸಕ ರಮೇಶ ಜಾರಕಿಹೊಳಿ ಸತತವಾಗಿ ಆಯ್ಕೆಯಾಗುತ್ತಿದ್ದು, ಕಾಂಗ್ರೇಸ್ ಪಕ್ಷದಲ್ಲಿ ನಾನು ಸಹ ಟಿಕೇಟ್ ಆಕಾಂಕ್ಷಿಯಾಗಿದ್ದು, ಪಕ್ಷ ಹಿರಿಯ ಪತ್ರಕರ್ತ ಚಂದ್ರಶೇಖರ ಕೊಣ್ಣೂರ ಸೇರಿ ಹೊಸಬರಿಗೆ ಟಿಕೇಟ್ ನೀಡುವಂತೆ ಮನವಿ ಮಾಡಿದರು.

 

ಅವರು, ಬುಧವಾರದಂದು ನಗರದ ತಮ್ಮ ಕಾರ್ಯಾಲಯದಲ್ಲಿ ಕರೇದ ಪತ್ರಿಕಾಗೋಷ್ಠಿಯನ್ನು ಉದ್ಧೇಶಿಸಿ ಮಾತನಾಡಿ, ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಗೋಕಾಕ ಕ್ಷೇತ್ರದಿಂದ ಸ್ಪರ್ಧಿಸಲು ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದೇನೆ ಕಳೆದ ಮೂರು ದಶಕಗಳಿಂದ ಪತ್ರಿಕೋದ್ಯಮ, ರಾಜಕೀಯ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತ ಬಂದಿದ್ದು, ಕ್ಷೇತ್ರದ ಜನತೆಯೊಂದಿಗೆ ಉತ್ತಮ ಸಂಪರ್ಕ ಹೊಂದಿದ್ದೇನೆ. ಈ ಬಾರಿ ಕಾಂಗ್ರೆಸ್ ಟಿಕೆಟ್ ನನಗೆ ಸಿಗುವ ನಿರೀಕ್ಷೆಯಿದೆ. ಒಂದು ವೇಳೆ ಬೇರೆಯಾರಿಗಾದರೂ ಟಿಕೆಟ್ ಸಿಕ್ಕರೆ ಅವರ ಪರವಾಗಿ ಪ್ರಚಾರ ಕಾರ್ಯಕೈಗೊಂಡು, ಅವರ ಗೆಲುವಿಗೆ ಶ್ರಮಿಸಲಾಗುವುದು. ಟಿಕೆಟ್ ಹಂಚಿಕೆಯಲ್ಲಿ ಪಕ್ಷದ ತೀರ್ಮಾನಕ್ಕೆ ಬದ್ಧನಿದ್ದೇನೆ ಎಂದು ತಿಳಿಸಿದರು.
ಶಾಸಕ ರಮೇಶ ಜಾರಕಿಹೊಳಿ ಅವರ ಬಣದ ವಿರುದ್ಧ ಮಮದಾಪುರ ಗ್ರಾಪಂ ಸದಸ್ಯನಾಗಿ, ತಾಲೂಕು ಪಂಚಾಯಿತಿ ಸದಸ್ಯನಾಗಿ, ಅಧ್ಯಕ್ಷನಾಗಿ ಸೇವೆ ಸಲ್ಲಿಸಿದ್ದೇನೆ. ಹೋರಾಟದ ಮೂಲಕವೇ ನಾನು ರಾಜಕೀಯ ಕ್ಷೇತ್ರಕ್ಕೆ ಬಂದಿರುವೆ. ನೆರೆಹಾವಳಿ, ಕೋವಿಡ್ ಸಂಕಷ್ಟದ ಸಮಯದಲ್ಲಿ ನಮ್ಮ ಕುಟುಂಬ ಸಂಕಷ್ಟದಲ್ಲಿದ್ದ ಜನತೆಗೆ ನೆರವು ನೀಡಿದೆ. ಆಹಾರ ಧಾನ್ಯ, ಬಟ್ಟೆಗಳನ್ನು ವಿತರಿಸಲಾಗಿದೆ ಎಂದು ಹೇಳಿದರು.
ಈಗಾಗಲೇ ಗೋಕಾಕ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಳಿಯಲು ಕೆಪಿಸಿಸಿಗೆ ನಾನು, ಅಶೋಕ ಪೂಜಾರಿ, ಮಹಾಂತೇಶ ಕಡಾಡಿ, ಭಾಗೋಜಿ ಅರ್ಜಿ ಸಲ್ಲಿಸಿದ್ದೇವೆ. ಟಿಕೆಟ್ ಹಂಚಿಕೆ ವಿಚಾರದಲ್ಲಿ ಪಕ್ಷದ ತೀರ್ಮಾನಕ್ಕೆ ಬದ್ಧರಾಗಿದ್ದೇನೆ ಎಂದರು.


Spread the love

About Yuva Bharatha

Check Also

ಅಕ್ಕಾ ಅಂದ್ರೆ ಅವರೇ ಅಂತ ಯಾಕೆ ತಿಳ್ಕೊತೀರಿ, ಪೆಗ್ ಅಂದ್ರೆ ಎನರ್ಜಿ ಡ್ರಿಂಕ್-ಮಾಜಿ ಶಾಸಕ ಸಂಜಯ ಪಾಟೀಲ.!

Spread the loveನಾನು ಭಾಷಣದಲ್ಲಿ ಹೆಬ್ಬಾಳಕರ ಹೆಸರನ್ನೆ ತಗೊಂಡಿಲ್ಲ. -ಮಾಜಿ ಶಾಸಕ ಸಂಜಯ ಪಾಟೀಲ.! ಯುವಭಾರತ ಸುದ್ದಿ ಬೆಳಗಾವಿ: ನಾನು …

Leave a Reply

Your email address will not be published. Required fields are marked *

20 − 14 =