ಆಂಧ್ರಪ್ರದೇಶ ರಾಜ್ಯಪಾಲರಾಗಿ ಕನ್ನಡಿಗ ಪ್ರಮಾಣವಚನ

ಯುವ ಭಾರತ ಸುದ್ದಿ ವಿಜಯವಾಡ :
ಆಂಧ್ರಪ್ರದೇಶ ನೂತನ ರಾಜ್ಯಪಾಲರಾಗಿ ಸುಪ್ರೀಂಕೋರ್ಟ್ ವಿಶ್ರಾಂತ ನ್ಯಾಯಮೂರ್ತಿ ಅಬ್ದುಲ್ ನಜೀರ್ ಶುಕ್ರವಾರ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ಆಂಧ್ರಪ್ರದೇಶ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ರಾಜಭವನದಲ್ಲಿ ನಡೆದ ಸಮಾರಂಭದಲ್ಲಿ ಪ್ರಮಾಣವಚನ ಬೋಧಿಸಿದ್ದಾರೆ.
ಮೂಡುಬಿದರೆ ಬಳಿಯ ಬೆಳುವಾಯಿಯವರಾದ ಅಬ್ದುಲ್ ನಜೀರ್ ಅವರನ್ನು ಕೆಲ ದಿನಗಳ ಹಿಂದಷ್ಟೇ ಆಂಧ್ರಪ್ರದೇಶದ ರಾಜ್ಯಪಾಲರನ್ನಾಗಿ ನೇಮಕ ಮಾಡಲಾಗಿತ್ತು. ಆಂಧ್ರ ಪ್ರದೇಶದ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ, ಸಚಿವ ಸಂಪುಟ ಸದಸ್ಯರು ಸೇರಿದಂತೆ ಗಣ್ಯರು ಪ್ರಮಾಣವಚನ ಸಂದರ್ಭದಲ್ಲಿ ಉಪಸ್ಥಿತರಿದ್ದರು.
YuvaBharataha Latest Kannada News