Breaking News

ಸಂಚಾರ ನಿಯಮ ಉಲ್ಲಂಘನೆ ದಂಡ ಪಾವತಿಗೆ 50% ರಿಯಾಯಿತಿ 15 ದಿನ ವಿಸ್ತರಣೆ

Spread the love

ಸಂಚಾರ ನಿಯಮ ಉಲ್ಲಂಘನೆ ದಂಡ ಪಾವತಿಗೆ 50% ರಿಯಾಯಿತಿ 15 ದಿನ ವಿಸ್ತರಣೆ

ಯುವ ಭಾರತ ಸುದ್ದಿ ಬೆಂಗಳೂರು :
ಸಂಚಾರ ನಿಯಮ ಉಲ್ಲಂಘನೆಯ ದಂಡ ಬಾಕಿ ಉಳಿಸಿಕೊಂಡಿರುವ ವಾಹನ ಸವಾರರಿಗೆ ನೀಡಲಾಗಿದ್ದು ರಿಯಾಯಿತಿಯನ್ನು ಸಾರಿಗೆ ಇಲಾಖೆ ವಿಸ್ತರಿಸಿದೆ.
ಬಾಕಿ ಇರುವ ದಂಡ ಮೊತ್ತದಲ್ಲಿ ಶೇ. 50ರಷ್ಟು ರಿಯಾಯಿತಿ ಅವಧಿ ವಿಸ್ತರಿಸಿ ಸಾರಿಗೆ ಇಲಾಖೆ ಆದೇಶ ಹೊರಡಿಸಿದ್ದು, ಈ ರಿಯಾಯಿತಿಯು ಮಾರ್ಚ್ 4 ರಿಂದ ಅನ್ವಯವಾಗಲಿದ್ದು 15 ದಿನಗಳ ಕಾಲಾವಕಾಶ ನೀಡಲಾಗಿದೆ.
11-02-2023 ರ ಒಳಗಾಗಿ ಅನ್ವಯವಾಗುವ ಪ್ರಕರಣಗಳಿಗೆ ಮಾತ್ರ ಒಂದು ಬಾರಿಯ ಕ್ರಮವಾಗಿ ಪೊಲೀಸ್ ಇಲಾಖೆಯ ಸಂಚಾರಿ ಇ-ಚಲನ್​ನಲ್ಲಿ ದಾಖಲಾಗಿರುವ ಬಾಕಿ ಪ್ರಕರಣಗಳ ದಂಡದ ಮೊತ್ತದಲ್ಲಿ ಶೇ 50 ರ ರಿಯಾಯಿತಿ ನೀಡಲಾಗುತ್ತದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಈ ಹಿಂದೆ 5 ದಿನಗಳ ಕಾಲ ಶೇ 50ರ ರಿಯಾಯಿತಿಯೊಂದಿಗೆ ದಂಡ ಪಾವತಿಸಲು ಅವಕಾಶ ನೀಡಲಾಗಿತ್ತು. ಈ ಕೊಡುಗೆಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಆ ಅವಧಿಯಲ್ಲಿ ಸವಾರರು ದಂಡ ಪಾವತಿಸಲು ಮುಗಿಬಿದ್ದಿದ್ದರು. ಆದರೂ ಬಹಳಷ್ಟು ಮಂದಿ ದಂಡ ಪಾವತಿ ಮಾಡಿರಲಿಲ್ಲ. ಹೀಗಾಗಿ ಮತ್ತೊಂದು ರಿಯಾಯಿತಿಯ ಅವಕಾಶ ನೀಡುವಂತೆ ಸಾರ್ವಜನಿಕರಿಂದ ಒತ್ತಾಯ ಕೇಳಿಬಂದಿತ್ತು .


Spread the love

About Yuva Bharatha

Check Also

ಪ್ರಮೋದ್ ಮುತಾಲಿಕ್ ನಿವೃತ್ತಿ, ಶ್ರೀ ರಾಮಸೇನೆ ರಾಷ್ಟ್ರೀಯ ಅಧ್ಯಕ್ಷರಾಗಿ ಸಿದ್ದಲಿಂಗ ಸ್ವಾಮಿ ಆಯ್ಕೆ

Spread the loveಪ್ರಮೋದ್ ಮುತಾಲಿಕ್ ನಿವೃತ್ತಿ, ಶ್ರೀ ರಾಮಸೇನೆ ರಾಷ್ಟ್ರೀಯ ಅಧ್ಯಕ್ಷರಾಗಿ ಸಿದ್ದಲಿಂಗ ಸ್ವಾಮಿ ಆಯ್ಕೆ ಬೆಂಗಳೂರು : ಶ್ರೀ …

Leave a Reply

Your email address will not be published. Required fields are marked *

18 − seventeen =