Breaking News

ರಾಷ್ಟ್ರೀಯ ಆರೋಗ್ಯ ಅಭಿಯಾನ ಗುತ್ತಿಗೆ ನೌಕರರಿಗೆ ಸಿಹಿ ಸುದ್ದಿ : ಶೇ.15 ರಷ್ಟು ವೇತನ ಹೆಚ್ಚಿಸಿ ಸರ್ಕಾರದ ಆದೇಶ

Spread the love

ರಾಷ್ಟ್ರೀಯ ಆರೋಗ್ಯ ಅಭಿಯಾನ ಗುತ್ತಿಗೆ ನೌಕರರಿಗೆ ಸಿಹಿ ಸುದ್ದಿ : ಶೇ.15 ರಷ್ಟು ವೇತನ ಹೆಚ್ಚಿಸಿ ಸರ್ಕಾರದ ಆದೇಶ

ಯುವ ಭಾರತ ಸುದ್ದಿ ಬೆಂಗಳೂರು :
ರಾಷ್ಟ್ರೀಯ ಆರೋಗ್ಯ ಅಭಿಯಾನದ ಗುತ್ತಿಗೆ ನೌಕರರ ಸಂಭಾವನೆಯನ್ನು ಶೇ.15 ರಷ್ಟು ಹೆಚ್ಚಳ ಮಾಡಲಾಗಿದೆ.
ಈ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆದೇಶ ಹೊರಡಿಸಿದ್ದು, ಆರೋಗ್ಯ ಇಲಾಖೆ ಸಚಿವ ಡಾ.ಸುಧಾಕರ ಟ್ವೀಟ್‌ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ.
ಈ ಕುರಿತು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ ಹೊರಡಿಸಿದ್ದು, ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಕರ್ತವ್ಯ ನಿರ್ವಹಿಸುತ್ತಿರವ ಗುತ್ತಿಗೆ ನೌಕರರಿಗೆ ಸಂಭಾವನೆನ್ನು ದಿನಾಂಕ 01-04-2023ರಿಂದ ಜಾರಿಗೆ ಬರುವಂತೆ ಶೇ.15ರಷ್ಟು ಹೆಚ್ಚಿಸಿದೆ ಎಂದು ತಿಳಿಸಿದ್ದಾರೆ. ಈ ವೇತನ ಹೆಚ್ಚಳ ಒಳಗುತ್ತಿಗೆ, ಗುತ್ತಿಗೆ ನೌಕರರಿಗೆ ಮಾತ್ರ ಅನ್ವಯವಾಗಲಿದ್ದು, ಹೊರ ಗುತ್ತಿಗೆ ನೌಕರರಿಗೆ ಅನ್ವಯವಾಗುವುದಿಲ್ಲ.

 

ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಕೆಲಸ ಮಾಡುವ ಗುತ್ತಿಗೆ ನೌಕರರಿಗೆ ವೇತನ ಹೆಚ್ಚಳ ಮಾಡುವ ಆಗ್ರಹಕ್ಕೆ ಸ್ಪಂದಿಸಿದ್ದ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ, ಸರ್ಕಾರದ ಮಟ್ಟದಲ್ಲಿ ಚರ್ಚೆ ನಡೆಸಿ ವೇತನ ಹೆಚ್ಚಳ ಮಾಡಲು ಕ್ರಮ ವಹಿಸುವ ಬಗ್ಗೆ ಭರವಸೆ ನೀಡಿದ್ದರು.
ಕೆಲಸಕ್ಕೆ ಸೇರ್ಪಡೆಯಾಗುವ ಸಂದರ್ಭದಲ್ಲಿ 20 ಸಾವಿರ ರೂ. ಗಿಂತ ಕಡಿಮೆ ಸಂಭಾವನೆ ಇರುವ ನೌಕರರಿಗೆ ಶೇ.15 ರಷ್ಟು ಹೆಚ್ಚಳವಾಗಲಿದೆ. 5 ವರ್ಷಕ್ಕಿಂತ ಹೆಚ್ಚು ಕಾಲ ನಿರಂತರವಾಗಿ ಕಾರ್ಯನಿರ್ವಹಿಸಿದ ಎನ್‌ಎಚ್‌ಎಂ ಮೆಡಿಕಲ್‌ ಅಧಿಕಾರಿಗಳಿಗೆ (ಎಂಬಿಬಿಎಸ್‌, ಆಯುಷ್‌, ಆರ್‌ಬಿಎಸ್‌ಕೆ, ದಂತವೈದ್ಯ ಸರ್ಜನ್‌ಗಳು) ಕೂಡ ಶೇ.15 ರಷ್ಟು ಸಂಭಾವನೆ ಹೆಚ್ಚಿಸಲಾಗಿದೆ.

ಎನ್‌ಎಚ್‌ಎಂ ಗುತ್ತಿಗೆ ತಜ್ಞರಿಗೆ, 3-5 ವರ್ಷಗಳ ಸೇವೆಯಲ್ಲಿರುವವರಿಗೆ ಶೇ.5 ಹಾಗೂ 5-10 ವರ್ಷಗಳ ಸೇವೆಯಲ್ಲಿರುವವರಿಗೆ ಶೇ.10, ಮತ್ತು 10 ವರ್ಷಕ್ಕೂ ಅಧಿಕ ಕಾಲ ಸೇವೆಯಲ್ಲಿರುವವರಿಗೆ ಶೇ.15 ರಷ್ಟು ಸಂಭಾವನೆ ಹೆಚ್ಚಳ ಮಾಡಲಾಗಿದೆ.
ನೌಕರರಿಗೆ ಮಾತು ಕೊಟ್ಟಂತೆ ಸರ್ಕಾರ ಕ್ರಮ ಕೈಗೊಂಡಿದೆ. ಸರ್ಕಾರ ನೌಕರರ ಕ್ಷೇಮಾಭಿವೃದ್ಧಿಗೆ ಬದ್ಧವಾಗಿದೆ ಎಂದು ಸಚಿವ ಡಾ.ಕೆ.ಸುಧಾಕರ್‌ ಹೇಳಿದ್ದಾರೆ.


Spread the love

About Yuva Bharatha

Check Also

ಪ್ರಮೋದ್ ಮುತಾಲಿಕ್ ನಿವೃತ್ತಿ, ಶ್ರೀ ರಾಮಸೇನೆ ರಾಷ್ಟ್ರೀಯ ಅಧ್ಯಕ್ಷರಾಗಿ ಸಿದ್ದಲಿಂಗ ಸ್ವಾಮಿ ಆಯ್ಕೆ

Spread the loveಪ್ರಮೋದ್ ಮುತಾಲಿಕ್ ನಿವೃತ್ತಿ, ಶ್ರೀ ರಾಮಸೇನೆ ರಾಷ್ಟ್ರೀಯ ಅಧ್ಯಕ್ಷರಾಗಿ ಸಿದ್ದಲಿಂಗ ಸ್ವಾಮಿ ಆಯ್ಕೆ ಬೆಂಗಳೂರು : ಶ್ರೀ …

Leave a Reply

Your email address will not be published. Required fields are marked *

five + 8 =