ಕೇಂದ್ರ ಸಚಿವೆ ಪ್ರಯಾಣಿಸುತ್ತಿದ್ದ ಕಾರು ಅಪಘಾತ
ಯುವ ಭಾರತ ಸುದ್ದಿ ವಿಜಯಪುರ :
ಕೇಂದ್ರ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣಾ ಖಾತೆ ರಾಜ್ಯ ಸಚಿವೆ ಸಾದ್ವಿ ನಿರಂಜನಾ ಜ್ಯೋತಿ ಅವರು ತೆರಳುತ್ತಿದ್ದ ಕಾರಿಗೆ ಕ್ಯಾಂಟರ್ ಡಿಕ್ಕಿ ಹೊಡೆದಿದೆ. ಅವರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು ಯಾವುದೇ ಅಪಾಯ ಸಂಭವಿಸಿಲ್ಲ.
ಕೇಂದ್ರ ಸಚಿವೆ ಗುರುವಾರ ನಾಗಠಾಣದಲ್ಲಿ ಮಹಿಳಾ ಮೋರ್ಚಾ ಕಾರ್ಯಕ್ರಮ ಮುಗಿಸಿ ಬಾಗಲಕೋಟೆಗೆ ಪ್ರಯಾಣಿಸುತ್ತಿದ್ದರು. ವಿಜಯಪುರ ತಾಲೂಕಿನ ಜುಮನಾಳ ಬಳಿ ವಿಜಯಪುರ- ಹುಬ್ಬಳ್ಳಿ ರಾಷ್ಟ್ರೀಯ ಹೆದ್ದಾರಿ 50 ರಲ್ಲಿ ಕಾರಿನಲ್ಲಿ ಪ್ರಯಾಣಿಸುವಾಗ ಕ್ಯಾಂಟರ್ ಡಿಕ್ಕಿ ಹೊಡೆದಿದೆ. ಸಚಿವೆ ಹಾಗೂ ಅವರ ಕಾರು ಚಾಲಕರಗೆ ಸಣ್ಣಪುಟ್ಟ ಗಾಯವಾಗಿದ್ದು ಚಿಕಿತ್ಸೆ ನೀಡಲಾಗಿದೆ.