Breaking News

ದೇಶವನ್ನು ಅಭಿವೃದ್ಧಿ ಪಥದತ್ತ ಕೊಂಡೊಯ್ಯುತ್ತಿರುವ ಪ್ರಧಾನಿ ನರೇಂದ್ರ ಮೋದಿಯವರ ಕೈ ಬಲಪಡಿಸಲು ಬಿಜೆಪಿ ಅಭ್ಯರ್ಥಿಯನ್ನು ಬೆಂಬಲಿಸಿ-ಎಮ್ ಡಿ ಚುನಮರಿ.

Spread the love

ದೇಶವನ್ನು ಅಭಿವೃದ್ಧಿ ಪಥದತ್ತ ಕೊಂಡೊಯ್ಯುತ್ತಿರುವ ಪ್ರಧಾನಿ ನರೇಂದ್ರ ಮೋದಿಯವರ ಕೈ ಬಲಪಡಿಸಲು ಬಿಜೆಪಿ ಅಭ್ಯರ್ಥಿಯನ್ನು ಬೆಂಬಲಿಸಿ-ಎಮ್ ಡಿ ಚುನಮರಿ.


ಗೋಕಾಕ: ದೇಶವನ್ನು ಅಭಿವೃದ್ಧಿ ಪಥದತ್ತ ಕೊಂಡೊಯ್ಯುತ್ತಿರುವ ಪ್ರಧಾನಿ ನರೇಂದ್ರ ಮೋದಿಯವರ ಕೈ ಬಲಪಡಿಸಲು ಈ ಬಾರಿ ವಿಧಾನಸಭಾ ಚುನಾವಣೆಯಲ್ಲಿ ಗೋಕಾಕ ಮಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯನ್ನು ಬೆಂಬಲಿಸುವAತೆ ಲಿಂಗಾಯತ ಸಮಾಜದ ಹಿರಿಯರಾದ ಎಮ್ ಡಿ ಚುನಮರಿ ಹೇಳಿದರು.
ಅವರು, ಶುಕ್ರವಾರದಂದು ನಗರದ ಸಿದ್ಧಿವಿನಾಯಕ ಸಭಾ ಭವನದಲ್ಲಿ ಗೋಕಾಕ ಮತಕ್ಷೇತ್ರದ ಅಖಂಡ ಲಿಂಗಾಯತ ಸಮಾಜದ ಬೃಹತ್ ಸಮಾವೇಶವನ್ನು ನಗರದಲ್ಲಿ ಹಮ್ಮಿಕೊಳ್ಳುವ ಹಿನ್ನಲೆ ಆಯೋಜಿಸಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.
ಈ ಸಭೆಯಲ್ಲಿ ಮುಖಂಡರುಗಳಾದ ಪ್ರಭಾ ಶುರ‍್ಸ ಅಧ್ಯಕ್ಷ ಅಶೋಕ ಪಾಟೀಲ, ಡಾ.ಚನ್ನಯ್ಯ ಹಿರೇಮಠ, ಎಸ್ ಎಮ್ ಗಣಾಚಾರಿ, ಪುಂಡಲಿAಕ ವಣ್ಣೂರ, ಎಸ್ ವಿ ದೇಮಶೆಟ್ಟಿ ಹಾಗೂ ಪುಂಡಲೀಕ ಲಟ್ಟಿ ಮಾತನಾಡಿ ರಾಜ್ಯದಲ್ಲಿ ಮಠಗಳ ಮತ್ತು ಲಿಂಗಾಯತ ಸಮಾಜದ ಅಭಿವೃದ್ಧಿಯಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ಲಿಂಗಾಯತ ಸಮಾಜದ ನಾಯಕ ಬಿ ಎಸ್ ಯಡಿಯೂರಪ್ಪನವರ ಪಾತ್ರ ಮಹತ್ವದ್ದಾಗಿದೆ. ಅವರನ್ನು ಮುಖ್ಯಮಂತ್ರಿ ಮಾಡಲು ರಮೇಶ ಜಾರಕಿಹೊಳಿ ಅವರು ತಮ್ಮ ಅಧಿಕಾರವನ್ನೇ ತ್ಯಾಗ ಮಾಡಿದ್ದನ್ನು ನಾವೆಲ್ಲ ನೆನಪಿಸಿಕೊಳ್ಳಬೇಕು. ಕ್ಷೇತ್ರದಲ್ಲಿ ತಮ್ಮ ಸಮುದಾಯದವರಿಗೆ ರಾಜಕೀಯ ಸ್ಥಾನ ಮಾನ ನೀಡಿ ಸಮಾಜದ ಅಭಿವೃದ್ಧಿಗೆ ಸಹಕಾರ ನೀಡುತ್ತಿದ್ದಾರೆ. ಜಾತ್ಯಾತೀತವಾಗಿ ಕ್ಷೇತ್ರದ ಅಭಿವೃದ್ಧಿಗೆ ಹಲವಾರು ಬೃಹತ್ ಯೋಜನೆಗಳ ಅನುಷ್ಠಾನದೊಂದಿಗೆ ಶ್ರಮಿಸುತ್ತಿದ್ದಾರೆ. ಸುಳ್ಳು ವದಂತಿಗಳಿಗೆ ಕಿವಿಗೊಡದೆ ಸಮಾಜ ಬಾಂಧವರು ಸಂಘಟಿತರಾಗಿ ಗೋಕಾಕ ನಗರದಲ್ಲಿ ನಡೆಯುವ ಸಮಾವೇಶದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಶಾಸಕ ರಮೇಶ ಜಾರಕಿಹೊಳಿ ಅವರಿಗೆ ಬೆಂಬಲಿಸಿ ಲಕ್ಷಕ್ಕಿಂತ ಅಧಿಕ ಮತಗಳಿಂದ ಆಯ್ಕೆಯಾಗಲು ನಾವೆಲ್ಲ ಶ್ರಮಿಸೋಣ ಎಂದರು.


ಈ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷ ಜಯಾನಂದ ಹುಣಚ್ಯಾಳ, ಪ್ರೋ ಜಿ ಎಮ್ ಅಂದಾನಿ, ಚಂದ್ರಕಾAತ ಕುರಬೇಟ, ಅರ್ಬನ್ ಬ್ಯಾಂಕ ಅಧ್ಯಕ್ಷ ಬಸವರಾಜ ಕಲ್ಯಾಣಶೆಟ್ಟಿ, ಬಸವರಾಜ ಗೌಡರ, ಸಿದ್ದಪ್ಪ ಹಡಪದ, ರವಿ ಮಡಿವಾಳರ, ಅಡಿವೆಪ್ಪ ನಾವಲಗಟ್ಟಿ, ಶಂಕರಗೌಡ ಪಾಟೀಲ, ಶಿವನಗೌಡ ಪಾಟೀಲ, ರಮೇಶ ಚಿಕ್ಕೋಡಿ, ಶಿವಲಿಂಗಯ್ಯ ಕುಳ್ಳೂರಮಠ, ಮಲ್ಲಪ್ಪ ಹಿತ್ತಲಮನಿ, ಅಪ್ಪು ವಾಲಿ ಸೇರಿದಂತೆ ಅನೇಕರು ಇದ್ದರು.


Spread the love

About Yuva Bharatha

Check Also

ಬೋರಗಾಂವ ಪಟ್ಟಣದ ಶ್ರೀ ಅರಿಹಂತ ಕೋ,ಆಪ್ ಸೌಹಾರ್ಧ ಸಹಕಾರಿ ಬ್ಯಾಂಕ ವಿರುದ್ಧ ರೈತರ ಪ್ರತಿಭಟನೆ ಬ್ಯಾಂಕ ವ್ಯವಸ್ಥಾಪಕರಿಗೆ ಮನವಿ ಸಲ್ಲಿಕೆ.!

Spread the loveಬೋರಗಾಂವ ಪಟ್ಟಣದ ಶ್ರೀ ಅರಿಹಂತ ಕೋ,ಆಪ್ ಸೌಹಾರ್ಧ ಸಹಕಾರಿ ಬ್ಯಾಂಕ ವಿರುದ್ಧ ರೈತರ ಪ್ರತಿಭಟನೆ ಬ್ಯಾಂಕ ವ್ಯವಸ್ಥಾಪಕರಿಗೆ …

Leave a Reply

Your email address will not be published. Required fields are marked *

7 + ten =