ಉರಿಗೌಡ-ನಂಜೇಗೌಡ ಸಿನಿಮಾ : ಗೊಂದಲಕ್ಕೆ ತೆರೆ ಎಳೆದ ಸಚಿವ ಮುನಿರತ್ನ

ಯುವ ಭಾರತ ಸುದ್ದಿ ಬೆಂಗಳೂರು:
ಉರಿಗೌಡ–ನಂಜೇಗೌಡ ಸಿನಿಮಾ ನಿರ್ಮಾಣ ಮಾಡಲ್ಲ ಎಂದು ತೋಟಗಾರಿಕಾ ಸಚಿವ ಮುನಿರತ್ನ ಹೇಳಿದ್ದಾರೆ.
ಸೋಮವಾರ ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಶ್ರೀ ಭೇಟಿಯಾದ ಬಳಿಕ ಸುದ್ದಿಗಾರರ ಜೊತೆ ಮಾತನಾಡಿರುವ ಅವರು, ಕಥೆಯಲ್ಲಿ ಸಾಕಷ್ಟು ಗೊಂದಲಗಳಿವೆ. ಸದ್ಯ ಈ ಚಿತ್ರವನ್ನು ಕೈ ಬಿಡಲಾಗಿದೆ. ಚಿತ್ರ ಮಾಡುವುದಿಲ್ಲ ಎಂದು ಶ್ರೀಗಳಿಗೆ ತಿಳಿಸಿದ್ದೇನೆ ಎಂದು ಹೇಳಿದ್ದಾರೆ.
ಉರಿಗೌಡ– ನಂಜೇಗೌಡ ಸಿನಿಮಾ ನಿರ್ಮಾಣಕ್ಕೆ ಮುಂದಾಗಿದ್ದ ನಿರ್ಮಾಪಕ ಮುನಿರತ್ನ ಅವರನ್ನು ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿ ಸೋಮವಾರ ಮಾತುಕತೆಗೆ ಕರೆದಿದ್ದರು.
ಉರಿಗೌಡ ಮತ್ತು ನಂಜೇಗೌಡ ವಿಚಾರ ರಾಜಕೀಯವಾಗಿ ಚರ್ಚೆಗೆ ಕಾರಣವಾಗಿರುವ ಬೆನ್ನಲ್ಲೇ ಮುನಿರತ್ನ ಅವರು ಈ ಹೆಸರನ್ನು ನೋಂದಣಿ ಮಾಡಿಸಿ, ಚಲನಚಿತ್ರ ಮಾಡುವುದಾಗಿ ಘೋಷಿಸಿ, ಮುಹೂರ್ತದ ದಿನಾಂಕವನ್ನೂ ನಿಗದಿ ಮಾಡಿದ್ದರು.
ಇದೀಗ ಚಲನಚಿತ್ರ ನಿರ್ಮಾಣ ಮಾಡುವುದಿಲ್ಲ ಎಂದಿರುವುದರಿಂದ ಈ ಬಗೆಗಿನ ಗೊಂದಲಗಳಿಗೆ ಕೊನೆಗೂ ತೆರೆ ಎಳೆದಂತಾಗಿದೆ.
YuvaBharataha Latest Kannada News