ಕಾಂಗ್ರೆಸ್ ಪಕ್ಷದ ನಾಲ್ಕನೇ ಗ್ಯಾರಂಟಿ 3000 ರೂ.ನಿರುದ್ಯೋಗ ಭತ್ಯೆ ಘೋಷಣೆ ಮಾಡಿದ ರಾಹುಲ್ ಗಾಂಧಿ !
ಯುವ ಭಾರತ ಸುದ್ದಿ ಬೆಳಗಾವಿ:
ಕಾಂಗ್ರೆಸ್ ಪಕ್ಷವು ರಾಜ್ಯದಲ್ಲಿ ಅಧಿಕಾರಕ್ಕೆ ಬಂದರೆ ಯುವನಿಧಿ ಹೆಸರಿನಲ್ಲಿ ಪ್ರತಿ ತಿಂಗಳ ನಿರುದ್ಯೋಗ ಭತ್ಯೆಯಾಗಿ ಪದವೀಧರರಿಗೆ 3000, ಡಿಪ್ಲೋಮೋ ಪದವೀಧರರಿಗೆ ಒಂದುವರೆ ಸಾವಿರ ರೂಪಾಯಿ ನೀಡಲಾಗುವುದು ಎಂದು ಕಾಂಗ್ರೆಸ್ ಅಧಿನಾಯಕ ರಾಹುಲ್ ಗಾಂಧಿ ಘೋಷಣೆ ಮಾಡಿದ್ದಾರೆ.
ನಗರದ ಸಿಪಿಎಡ್ ಮೈದಾನದಲ್ಲಿ ನಡೆದ ಯುವ ಕ್ರಾಂತಿ ಸಮಾವೇಶದಲ್ಲಿ ರಾಹುಲ್ ಗಾಂಧಿ ಮತ್ತು ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ನಾಲ್ಕನೇ ಗ್ಯಾರಂಟಿ ಕಾರ್ಡ್ ಬಿಡುಗಡೆಗೊಳಿಸಿದರು.
ವಿಧಾನಸಭೆ ಚುನಾವಣೆ ಹೊತ್ತಲ್ಲಿ ಬೆಳಗಾವಿಯಲ್ಲಿ ಕಾಂಗ್ರೆಸ್ ಯುವ ಸಮಾವೇಶ ನಡೆಸುತ್ತಿದ್ದು, ಕಾಂಗ್ರೆಸ್ 4 ನೇ ಗ್ಯಾರಂಟಿ ಘೋಷಿಸಿದೆ.
ಬೆಳಗಾವಿಯಲ್ಲಿ ಯುವ ಕಾಂಗ್ರೆಸ್ ಸಮಾವೇಶ ನಡೆಸುತ್ತಿದ್ದು, ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಮತ್ತಿತರರಿದ್ದಾರೆ. ಬೆಳಗಾವಿಯ ಸಿಪಿಎಡ್ ಮೈದಾನದಲ್ಲಿ ಯುವ ಕ್ರಾಂತಿ ಸಮಾವೇಶ ನಡೆಯುತ್ತಿದೆ.
ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಇಂದು ರಾಜ್ಯಕ್ಕೆ ಭೇಟಿ ಭೇಟಿ ನೀಡಿದ್ದು, ವಿಶೇಷ ವಿಮಾನದ ಮೂಲಕ ದೆಹಲಿಯಿಂದ ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದಾರೆ. ಬೆಳಗಾವಿಯಲ್ಲಿ ಇಂದು ಕಾಂಗ್ರೆಸ್ ಪಕ್ಷದಿಂದ ಯುವ ಕ್ರಾಂತಿ ಸಮಾವೇಶ ಆಯೋಜನೆಗೊಂಡಿತ್ತು, ಇದನ್ನು ರಾಹುಲ್ ಗಾಂಧಿ ಉದ್ಘಾಟಿಸಿ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ್ದಾರೆ. ಯುವ ಕ್ರಾಂತಿ ಸಮಾವೇಶಕ್ಕಾಗಿ ಬೆಳಗಾವಿ ನಗರದ ಸಿಪಿ ಇಡ್ ಮೈದಾನದಲ್ಲಿ ಬೃಹತ್ ವೇದಿಕೆ ನಿರ್ಮಿಸಲಾಗಿತ್ತು. ವಿಶೇಷ ವಿಮಾನದ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಆಗಮಿಸಿರುವ ರಾಹುಲ್ ಗಾಂಧಿ ಬಳಿಕ ಸಮಾವೇಶದಲ್ಲಿ ಪಾಲ್ಗೊಂಡಿದ್ದಾರೆ.
ಯುವ ಕ್ರಾಂತಿ ಸಮಾವೇಶದಲ್ಲಿ ಪಾಲ್ಗೊಳ್ಳಲು ಬೆಳಗಾವಿ ವಿಮಾನ ನಿಲ್ದಾಣಕ್ಕೆ ಸೋಮವಾರ ಬಂದಿಳಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ವರಿಷ್ಠ ರಾಹುಲ್ ಗಾಂಧಿ ಅವರನ್ನು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಸ್ವಾಗತಿಸಿದರು. ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಕೆ ಸಿ ವೇಣುಗೋಪಾಲ್, ರಣದೀಪ್ ಸಿಂಗ್ ಸುರ್ಜೆವಾಲ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿ ಕೆ ಹರಿಪ್ರಸಾದ್, ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ ಬಿ ಪಾಟೀಲ್, ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಮತ್ತಿತರರು ಇದ್ದರು.