Breaking News

ಶುಕ್ರವಾರದಂದು ಸಂಜೆ ಗೋಕಾಕ ಮತಕ್ಷೇತ್ರದ ವೀರಶೈವ ಲಿಂಗಾಯತ ಸಮಾಜದ ಬೃಹತ್ ಸಮಾವೇಶ.!

Spread the love

ಶುಕ್ರವಾರದಂದು ಗೋಕಾಕ ಮತಕ್ಷೇತ್ರದ ವೀರಶೈವ ಲಿಂಗಾಯತ ಸಮಾಜದ ಬೃಹತ್ ಸಮಾವೇಶ.!


ಗೋಕಾಕ: ಗೋಕಾಕ ಮತಕ್ಷೇತ್ರದ ವೀರಶೈವ ಲಿಂಗಾಯತ ಸಮಾಜದ ಬೃಹತ್ ಸಮಾವೇಶ ಶುಕ್ರವಾರದಂದು ನಡೆಯಲಿದೆ ಎಂದು ನಗರಸಭೆ ಅಧ್ಯಕ್ಷ ಜಯಾನಂದ ಹುಣಚ್ಯಾಳಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಗುರುವಾರದಂದು ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿರುವ ಅವರು, ದಿ.24 ಶುಕ್ರವಾರದಂದು ಸಂಜೆ 5ಗಂಟೆಗೆ ನಗರದ ನ್ಯೂ ಇಂಗ್ಲೀಷ ಶಾಲೆಯ ಆವರಣದಲ್ಲಿ ಸಮಾವೇಶ ಜರುಗಲಿದ್ದು, ದಿವ್ಯ ಸಾನಿಧ್ಯವನ್ನು ಶೂನ್ಯ ಸಂಪಾದನ ಮಠದ ಶ್ರೀ ಮುರುಘರಾಜೇಂದ್ರ ಸ್ವಾಮಿಜಿ, ಕುಂದರಗಿ ಅಡವಿಸಿದ್ಧೇಶ್ವÀರ ಮಠದ ಶ್ರೀ ಅಮರಸಿದ್ಧೇಶ್ವರ ಸ್ವಾಮಿಜಿ, ತವಗದ ಬಾಳಯ್ಯ ಮಠದ ಶ್ರೀ ಸಿದ್ದಲಿಂಗ ಸ್ವಾಮಿಜಿ, ಮುಪ್ಪಯ್ಯನ ಮಠದ ಶ್ರೀ ರಾಚೋಟೇಶ್ವರ ಸ್ವಾಮಿಜಿ, ಅರಭಾವಿ ಮಠದ ಶ್ರೀ ದುರದುಂಡೇಶ್ವರ ಸ್ವಾಮಿಜಿ, ಮಮದಾಪೂರ ಶ್ರೀ ಚರಮೂರ್ತೆಶ್ವರ ಸ್ವಾಮಿಜಿ, ಹುಲಿಕಟ್ಟಿ ಶಿವಲಿಂಗೇಶ್ವರ ಮಠದ ಶ್ರೀ ಕುಮಾರ ದೇವರು ವಹಿಸಲಿದ್ದಾರೆ.
ಮಾಜಿ ಸಚಿವ, ಶಾಸಕ ರಮೇಶ ಜಾರಕಿಹೊಳಿ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು, ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಅವರ ನೇತ್ರತ್ವದಲ್ಲಿ  ಗೋಕಾಕ ಮತಕ್ಷೇತ್ರದ ವೀರಶೈವ ಲಿಂಗಾಯತ ಸಮುದಾಯದ ಮುಖಂಡರುಗಳು ಆಗಮಿಸಲಿದ್ದಾರೆ. ಹೀಗಾಗಿ ವೀರಶೈವ ಲಿಂಗಾಯತ ಸಮುದಾಯ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಮನವಿ ಮಾಡಿದ್ದಾರೆ.


Spread the love

About Yuva Bharatha

Check Also

ವಿಬಿ- ಜೀ ರಾಮ್ ಜೀ ಯೋಜನೆಯನ್ನು ಜಾರಿ ಮಾಡಿದ್ದರಿಂದ ಕಾಂಗ್ರೆಸ್ಸಿಗರು ಅಪಪ್ರಚಾರ ಮಾಡುತ್ತಿದ್ದಾರೆ.- ಸುಭಾಸ ಪಾಟೀಲ

Spread the love ಗೋಕಾಕ: ವಿಕಸಿತ ಭಾರತ ನಿರ್ಮಾಣಕ್ಕೆ ಪಣ ತೊಟ್ಟಿರುವ ಪ್ರಧಾನಿ ನರೇಂದ್ರ ಮೋದಿಯವರು ವಿಬಿ- ಜೀ ರಾಮ್ …

Leave a Reply

Your email address will not be published. Required fields are marked *

nineteen − 12 =