Breaking News

ಯಡಿಯೂರಪ್ಪ ಮನೆಯಲ್ಲಿ ಉಪಾಹಾರ : ಅಮಿತ್ ರಹಸ್ಯ !

Spread the love

ಯಡಿಯೂರಪ್ಪ ಮನೆಯಲ್ಲಿ ಉಪಾಹಾರ : ಅಮಿತ್ ರಹಸ್ಯ !

ಬೆಂಗಳೂರು :
ಸಾರ್ವತ್ರಿಕ ಚುನಾವಣೆಗೆ ವಾರಗಳ ಮೊದಲು, ಕೇಂದ್ರ ಗೃಹ ಸಚಿವ ಮತ್ತು ಭಾರತೀಯ ಜನತಾ ಪಕ್ಷದ ಚುನಾವಣಾ ತಂತ್ರಜ್ಞ ಅಮಿತ್ ಶಾ ಅವರು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಬೆಂಗಳೂರಿನ ನಿವಾಸಕ್ಕೆ ಶುಕ್ರವಾರ ಬೆಳಿಗ್ಗೆ ಉಪಾಹಾರ ಸಭೆಗೆ ಭೇಟಿ ನೀಡಿದ್ದು, ಇದು ಮಹತ್ವ ಪಡೆದುಕಂಡಿದೆ.
ಕರ್ನಾಟಕದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಗೆ ಮುನ್ನ, ಯಡಿಯೂರಪ್ಪ ಅವರ ಮನೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಉಪಹಾರ ಸಭೆಯು ಪಕ್ಷದೊಳಗೆ ಹಾಗೂ ಹೊರಗೆ ಬಲವಾದ ಸಂದೇಶವನ್ನು ಕಳುಹಿಸುತ್ತದೆ ಎಂಬುದು ರಾಜಕೀಯ ವಿಶ್ಲೇಷಕರ ಅಭಿಪ್ರಾಯ. ಯಡಿಯೂರಪ್ಪ ಅವರನ್ನು ಪಕ್ಷದಲ್ಲಿ ಬದಿಗಿಡಲು ಅಥವಾ ಅವಮಾನಿಸಲು ಸಾಧ್ಯವಿಲ್ಲ ಮತ್ತು ಅವರು ರಾಜ್ಯದಲ್ಲಿ ಇನ್ನೂ ಪ್ರಸ್ತುತತೆಯನ್ನು ಹೊಂದಿದ್ದಾರೆ ಎಂದು ಇದನ್ನು ಅರ್ಥೈಸಲಾಗುತ್ತಿದೆ.

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಮತ್ತು ಯಡಿಯೂರಪ್ಪ ಅವರ ಪುತ್ರ ವಿಜಯೇಂದ್ರ ನಡುವೆ ವಾಗ್ವಾದ ನಡೆದ ಕೆಲವೇ ದಿನಗಳಲ್ಲಿ ಅಮಿತ್‌ ಶಾ ಅವರು ಯಡಿಯೂರಪ್ಪ ಇಂದು ಶುಕ್ರವಾರ ಬೆಳಿಗ್ಗೆ ಯಡಿಯೂರಪ್ಪ ಮನೆಗೆ ಭೇಟಿ ನೀಡಿ ಸಭೆ ನಡೆಸಿದ್ದಾರೆ.
ಅಮಿತ್‌ ಶಾ ಅವರೊಂದಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕರ್ನಾಟಕ ಉಸ್ತುವಾರಿ ಅರುಣ್ ಸಿಂಗ್, ಬಿಜೆಪಿ ರಾಜ್ಯಾಧ್ಯಕ್ಷ ನಳಿನಕುಮಾರ ಕಟೀಲು, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ಸಚಿವ ಗೋವಿಂದ ಕಾರಜೋಳ ಹಾಗೂ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಇದ್ದರು.

ಎರಡು ದಿನಗಳ ಚುನಾವಣಾ ಪ್ರವಾಸದಲ್ಲಿರುವ ಅಮಿತ್ ಶಾ ಅವರನ್ನು ಶುಕ್ರವಾರ, ಮಾರ್ಚ್ 24 ರಂದು ಬೆಂಗಳೂರಿನಲ್ಲಿರುವ ತಮ್ಮ ನಿವಾಸಕ್ಕೆ ಆಗಮಿಸಿದಾಗ ಯಡಿಯೂರಪ್ಪ ಅವರು ಅಮಿತ್‌ ಶಾ ಅವರನ್ನು ಸ್ವಾಗತಿಸಿದರು. ಯಡಿಯೂರಪ್ಪ ಶಾ ಅವರನ್ನು ಸ್ವಾಗತಿಸಿ ಪುಷ್ಪಗುಚ್ಛ ನೀಡಲು ಬಂದಾಗ ಅದನ್ನು ಯಡಿಯೂರಪ್ಪ ಪುತ್ರ ಹಾಗೂ ಬಿಜೆಪಿ ರಾಜ್ಯ ಉಪಾಧ್ಯಕ್ಷ ವಿಜಯೇಂದ್ರ ಅವರಿಗೆ ನೀಡುವಂತೆ ಅಮಿತ್‌ ಶಾ ಹೇಳಿದರು. ವಿಜಯೇಂದ್ರ ಅವರು ಪಕ್ಷಕ್ಕೆ ನೀಡಿದ ಕೊಡುಗೆಯನ್ನು ಶಾ ಒಪ್ಪಿಕೊಂಡಿದ್ದಾರೆ ಮತ್ತು ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಅವರು ಸ್ಪರ್ಧಿಸಬಹುದು ಎಂಬುದಾಗಿ ಪಕ್ಷದೊಳಗಿನ ಕೆಲವರು ಇದನ್ನು ನೋಡುತ್ತಿದ್ದಾರೆ.
ಮೇ ತಿಂಗಳೊಳಗೆ ಕರ್ನಾಟಕದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯ ದಿನಾಂಕವನ್ನು ಚುನಾವಣಾ ಆಯೋಗವು ಮುಂದಿನ ಕೆಲವೇ ದಿನಗಳಲ್ಲಿ ಪ್ರಕಟಿಸುವ ನಿರೀಕ್ಷೆಯಿದ್ದು, ಚುನಾವಣೆಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸುವ ಪ್ರಕ್ರಿಯೆಯ ಸಮಯದಲ್ಲಿ ಅಮಿತ್‌ ಶಾ ಹಾಗೂ ಯಡಿಯೂರಪ್ಪ ಭೇಟಿ ಹಾಗೂ ನಾಯಕರ ನಡುವಿನ ಸಭೆ ಮಹತ್ವ ಪಡೆದುಕೊಂಡಿದೆ. ಪಕ್ಷದ ಸಂಸದೀಯ ಮಂಡಳಿಯ ಸದಸ್ಯರೂ ಆಗಿರುವ ಯಡಿಯೂರಪ್ಪ, ಇತ್ತೀಚಿನ ವಾರಗಳಲ್ಲಿ ‘ವಿಜಯ ಸಂಕಲ್ಪ ಯಾತ್ರೆ’ಯ ಭಾಗವಾಗಿ ರಾಜ್ಯಾದ್ಯಂತ ಪ್ರವಾಸ ಕೈಗೊಂಡಿದ್ದರು.

ತಮ್ಮ ರಾಜಕೀಯ ವಾರಸುದಾರರೆಂದು ಪರಿಗಣಿಸಲ್ಪಟ್ಟಿರುವ ವಿಜಯೇಂದ್ರ ಅವರಿಗೆ ಪಕ್ಷದಲ್ಲಿ ಯಾವುದೇ “ಪ್ರಮುಖ ಸ್ಥಾನ” ನೀಡದ ಕಾರಣ ಯಡಿಯೂರಪ್ಪ ಅಸಮಾಧಾನಗೊಂಡಿದ್ದಾರೆ ಮತ್ತು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದ ನಂತರ ಅವರನ್ನು ಎಂಎಲ್‌ಸಿ ಮಾಡುವ ಮೂಲಕ ಸಂಪುಟಕ್ಕೆ ಸೇರಿಸಿಕೊಳ್ಳಲಿಲ್ಲ ಎಂಬ ವರದಿಗಳು ಈ ಹಿಂದೆ ಇದ್ದವು.
ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಘೋಷಿಸಿದ ಯಡಿಯೂರಪ್ಪ, ಹೈಕಮಾಂಡ್ ಒಪ್ಪಿಗೆ ನೀಡಿದರೆ ಶಿಕಾರಿಪುರ ವಿಧಾನಸಭಾ ಕ್ಷೇತ್ರದಿಂದ ವಿಜಯೇಂದ್ರ ಸ್ಪರ್ಧಿಸಲು ಅದನ್ನು ತೆರವು ಮಾಡುವುದಾಗಿ ಹೇಳಿದ್ದರು. ವಿಜಯೇಂದ್ರ ಅವರ ಹಿರಿಯ ಸಹೋದರ ಬಿ ವೈ ರಾಘವೇಂದ್ರ ಶಿವಮೊಗ್ಗದ ಬಿಜೆಪಿ ಸಂಸದ.
ಬಿಜೆಪಿಯು ತನ್ನ ಅನುಭವಿ ನಾಯಕ ಯಡಿಯೂರಪ್ಪ ಅವರನ್ನು ಪ್ರಮುಖ ಚುನಾವಣಾ ಮುಖವಾಗಿ ಮಾಡುವುದರ ಮೇಲೆ ಒಲವು ತೋರಿದಂತೆ ಕಂಡುಬರುತ್ತಿದೆ. ಯಡಿಯೂರಪ್ಪ ಅವರಿಗೆ ಪ್ರಚಾರದ ವೇಳೆ ಏಕೆ ಪ್ರಾಮುಖ್ಯತೆ ನೀಡಲಾಗಿದೆ ಎಂಬುದಕ್ಕೆ ಕಾರಣಗಳು ದೂರವಿಲ್ಲ; ಪಕ್ಷವನ್ನು ತಳಮಟ್ಟದಿಂದ ಕಟ್ಟಿದ ನಾಲ್ಕು ಬಾರಿಯ ಮುಖ್ಯಮಂತ್ರಿಯಾಗಿದ್ದ, ವಿಶೇಷವಾಗಿ ಪ್ರಭಾವಿ ನಾಯಕ ಹಾಗೂ ಕರ್ನಾಟಕದ ಉದ್ದಗಲಕ್ಕೂ ಎಲ್ಲ ಸಮುದಾಯಗಳಲ್ಲಿ ಜನ ಸಂಪರ್ಕವನ್ನು ಹೊಂದಿದ್ದಾರೆ. ಈ ವರ್ಚಸ್ಸು ರಾಜ್ಯದ ಉಳಿದ ಬಿಜೆಪಿ ನಾಯಕರಲ್ಲಿ ಕಾಣುತ್ತಿಲ್ಲ.


Spread the love

About Yuva Bharatha

Check Also

ಪ್ರಮೋದ್ ಮುತಾಲಿಕ್ ನಿವೃತ್ತಿ, ಶ್ರೀ ರಾಮಸೇನೆ ರಾಷ್ಟ್ರೀಯ ಅಧ್ಯಕ್ಷರಾಗಿ ಸಿದ್ದಲಿಂಗ ಸ್ವಾಮಿ ಆಯ್ಕೆ

Spread the loveಪ್ರಮೋದ್ ಮುತಾಲಿಕ್ ನಿವೃತ್ತಿ, ಶ್ರೀ ರಾಮಸೇನೆ ರಾಷ್ಟ್ರೀಯ ಅಧ್ಯಕ್ಷರಾಗಿ ಸಿದ್ದಲಿಂಗ ಸ್ವಾಮಿ ಆಯ್ಕೆ ಬೆಂಗಳೂರು : ಶ್ರೀ …

Leave a Reply

Your email address will not be published. Required fields are marked *

16 − six =