ಸಿದ್ದು ವಿರುದ್ಧ ವಿಜಯೇಂದ್ರ ?

ಯುವ ಭಾರತ ಸುದ್ದಿ ಬೆಂಗಳೂರು :
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಪುತ್ರ ವಿಜಯೇಂದ್ರ ಕಣಕ್ಕೆ ಇಳಿಯುತ್ತಾರಾ ಎಂಬ ಚರ್ಚೆ ಇದೀಗ ಆರಂಭವಾಗಿದೆ.
ಸಿದ್ದರಾಮಯ್ಯ ಅವರಿಗೆ ವರುಣಾದಲ್ಲಿ ಟಿಕೆಟ್ ಘೋಷಣೆಯಾಗಿದೆ. ಈ ನಿಟ್ಟಿನಲ್ಲಿ ಇದೀಗ ಸಿದ್ದರಾಮಯ್ಯ ಪುತ್ರ ಯತೀಂದ್ರ ಅವರು ತಾವು ಪ್ರತಿನಿಧಿಸುತ್ತಿರುವ ವರುಣಾ ಕ್ಷೇತ್ರ ತ್ಯಜಿಸಬೇಕಾಗಿದೆ.
ಯಡಿಯೂರಪ್ಪ ತಾವು ಪ್ರತಿನಿಧಿಸುತ್ತಿರುವ ಶಿಕಾರಿಪುರ ಮತಕ್ಷೇತ್ರವನ್ನು ಪುತ್ರ ವಿಜೇಂದ್ರ ಅವರಿಗೆ ಬಿಟ್ಟುಕೊಡುವುದಾಗಿ ಈಗಾಗಲೇ ಸ್ಪಷ್ಟಪಡಿಸಿದ್ದಾರೆ. ಕಳೆದ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಯತೀಂದ್ರ ವಿರುದ್ಧ ವಿಜಯೇಂದ್ರ ಸ್ಪರ್ಧೆ ನಡೆಸುತ್ತಾರೆ ಎಂಬ ವದಂತಿ ಹರಡಿದ್ದವು. ಆದರೆ, ಬಿಜೆಪಿ ಹೈಕಮಾಂಡ್ ವಿಜಯೇಂದ್ರ ಅವರಿಗೆ ಸ್ಪರ್ಧೆಗೆ ಅವಕಾಶ ನೀಡಿರಲಿಲ್ಲ. ವಿಜಯೇಂದ್ರ ವರುಣಾದಲ್ಲಿ ಸ್ಪರ್ಧೆ ನಡೆಸಿದ್ದರೆ ಹಳೆ ಮೈಸೂರು ಭಾಗದ ಹಲವು ಕ್ಷೇತ್ರಗಳಲ್ಲಿ ಬಿಜೆಪಿಗೆ ಅನುಕೂಲವಾಗುತ್ತಿತ್ತು ಎಂಬ ಮಾತುಗಳು ಕೇಳಿ ಬಂದಿದ್ದವು. ಇದೀಗ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಇನ್ನೊಬ್ಬ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಪುತ್ರ ಸ್ಪರ್ಧೆ ನಡೆಸಿದರೆ ಈ ಮತಕ್ಷೇತ್ರ ರಾಷ್ಟ್ರದ ಗಮನ ಸೆಳೆಯುವುದರಲ್ಲಿ ಯಾವ ಸಂಶಯವು ಇಲ್ಲ.
YuvaBharataha Latest Kannada News