ಕರದಂಟು ನಾಡಿಗೆ ಮಂಗಳವಾರ ನಾಡದೊರೆ !

ಯುವ ಭಾರತ ಸುದ್ದಿ ಗೋಕಾಕ :
ಗೋಕಾಕ ವಿಧಾನಸಭಾ ಮತಕ್ಷೇತ್ರದ ವಿವಿಧ ಕಾಮಗಾರಿಗಳ ಶಂಕುಸ್ಥಾಪನೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾರ್ಚ್ 28 ರಂದು ಮಧ್ಯಾಹ್ನ 1:00 ಗಂಟೆಗೆ ಆಗಮಿಸಲಿದ್ದಾರೆ.
ಗೋಕಾಕ ನಗರದ ಮಹರ್ಷಿ ವಾಲ್ಮೀಕಿ ಕ್ರೀಡಾಂಗಣದಲ್ಲಿ ಅವರು ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ನಂತರ ಬಿಜೆಪಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಗೋಕಾಕ ನಗರಕ್ಕೆ ಆಗಮಿಸುತ್ತಿರುವುದು ಭಾರಿ ನಿರೀಕ್ಷೆ ಹುಟ್ಟಿಸಿದೆ. ಗೋಕಾಕ ವಿಧಾನಸಭಾ ಮತಕ್ಷೇತ್ರದಲ್ಲಿ ಈ ಬಾರಿ ಬಿಜೆಪಿ ಬಹುದೊಡ್ಡ ಅಂತರದಿಂದ ಗೆಲ್ಲಲು ರಣತಂತ್ರ ರೂಪಿಸುತ್ತಿದೆ. ಈ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಆಗಮನ ಗೋಕಾಕ ತಾಲೂಕಿನ ಜನತೆಯಲ್ಲಿ ಹಲವು ನಿರೀಕ್ಷೆಗಳಿಗೆ ಕಾರಣವಾಗಿದೆ. ಈ ಕಾರ್ಯಕ್ರಮಕ್ಕೆ ಗೋಕಾಕ ಮತಕ್ಷೇತ್ರದ ಜನತೆ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವಂತೆ ಕೋರಲಾಗಿದೆ.
ಬೃಹತ್ ನೀರಾವರಿ ಖಾತೆ ಸಚಿವ ಗೋವಿಂದ್ ಕಾರಜೋಳ, ಕೆಎಂಎಫ್ ಅಧ್ಯಕ್ಷ ಹಾಗೂ ಆರಬಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ, ಬೆಳಗಾವಿ ಸಂಸದೆ ಮಂಗಲಾ ಅಂಗಡಿ ಸೇರಿದಂತೆ ಜಿಲ್ಲೆಯ ಜನಪ್ರತಿನಿಧಿಗಳು ಆಗಮಿಸಲಿದ್ದಾರೆ.
YuvaBharataha Latest Kannada News