Breaking News

ವೀರ ಸಾವರ್ಕರಗೆ ಅವಮಾನ ಮಾಡಿದ್ರೆ ಸಹಿಸಲ್ಲ, ಇದು ಮುಂದುವರಿದ್ರೆ ಮೈತ್ರಿಯಲ್ಲಿ ಬಿರುಕು : ರಾಹುಲ್ ಗಾಂಧಿಗೆ ಎಚ್ಚರಿಕೆ ನೀಡಿದ ಉದ್ಧವ್ ಠಾಕ್ರೆ

Spread the love

ವೀರ ಸಾವರ್ಕರಗೆ ಅವಮಾನ ಮಾಡಿದ್ರೆ ಸಹಿಸಲ್ಲ, ಇದು ಮುಂದುವರಿದ್ರೆ ಮೈತ್ರಿಯಲ್ಲಿ ಬಿರುಕು : ರಾಹುಲ್ ಗಾಂಧಿಗೆ ಎಚ್ಚರಿಕೆ ನೀಡಿದ ಉದ್ಧವ್ ಠಾಕ್ರೆ

ಯುವ ಭಾರತ ಸುದ್ದಿ ಮಾಲೆಗಾಂವ್(ಮಹಾರಾಷ್ಟ್ರ) : ವಿನಾಯಕ ಸಾವರ್ಕರ್ (ವೀರ್‌) ಅವರನ್ನು ಅವಮಾನಿಸಬೇಡಿ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಎಚ್ಚರಿಕೆ ನೀಡಿರುವ ಶಿವಸೇನೆ (ಯುಬಿಟಿ) ನಾಯಕ ಉದ್ಧವ್ ಠಾಕ್ರೆ ಅವರು ಸಾವರ್ಕರ್ ಅವರನ್ನು ಅವಹೇಳನ ಮಾಡಿದರೆ ವಿಪಕ್ಷಗಳ ಮೈತ್ರಿಯಲ್ಲಿ ಬಿರುಕು ಮೂಡಲಿದೆ ಎಂದು ಭಾನುವಾರ ಎಚ್ಚರಿಸಿದ್ದಾರೆ.
ಮಾಲೆಗಾಂವ್‌ನಲ್ಲಿ ರ್ಯಾಲಿಯಲ್ಲಿ ಮಾತನಾಡಿದ ಅವರು, ಉದ್ಧವ್ ಠಾಕ್ರೆ ಅವರು ಹಿಂದುತ್ವ ಸಿದ್ಧಾಂತವಾದಿ ವೀರ್‌ ಸಾವರ್ಕರ್ ಅವರನ್ನು ತಮ್ಮ ಆರಾಧ್ಯ ದೈವವೆಂದು ಪರಿಗಣಿಸುವುದಾಗಿ ಅವರು ಹೇಳಿದ್ದಾರೆ ಮತ್ತು ಅವರನ್ನು ಅವಮಾನಿಸಲು ಹೋಗಬೇಡಿ ಎಂದು ಕಾಂಗ್ರೆಸ್ ನಾಯಕರಿಗೆ ಹೇಳಿದ್ದಾರೆ.
ಸಾವರ್ಕರ್ ಅವರು 14 ವರ್ಷಗಳ ಕಾಲ ಅಂಡಮಾನ್ ಸೆಲ್ಯುಲಾರ್ ಜೈಲಿನಲ್ಲಿ ಊಹಿಸಲಾಗದ ಚಿತ್ರಹಿಂಸೆ ಅನುಭವಿಸಿದರು. ಇದು ತ್ಯಾಗದ ಒಂದು ರೂಪವಾಗಿದೆ. ಸಾವರ್ಕರ್ ಅವರ ಅವಮಾನವನ್ನು ನಾವು ಸಹಿಸುವುದಿಲ್ಲ ಎಂದು ಉದ್ಧವ್ ಠಾಕ್ರೆ ಎಚ್ಚರಿಸಿದ್ದಾರೆ. ರಾಹುಲ್ ಗಾಂಧಿಯವರು ಸಾವರ್ಕರ್ ಅವರನ್ನು ಅವಹೇಳನ ಮಾಡುವುದನ್ನು ಮುಂದುವರಿಸಿದರೆ ಪ್ರತಿಪಕ್ಷಗಳ ಮೈತ್ರಿಯಲ್ಲಿ ಬಿರುಕುಗಳು ಉಂಟಾಗುತ್ತವೆ ಎಂದೂ ಅವರು ಹೇಳಿದರು.

ವೀರ್ ಸಾವರ್ಕರ್ ನಮ್ಮ ದೇವರು ಮತ್ತು ಅವರಿಗೆ ಯಾವುದೇ ಅಗೌರವವನ್ನು ಸಹಿಸಲಾಗುವುದಿಲ್ಲ. ನಾವು ಹೋರಾಡಲು ಸಿದ್ಧರಿದ್ದೇವೆ, ಆದರೆ ನಮ್ಮ ದೇವರನ್ನು ಅವಮಾನಿಸುವುದನ್ನು ನಾವು ಸಹಿಸುವುದಿಲ್ಲ ಎಂದು ಉದ್ಧವ್‌ ಠಾಕ್ರೆ ಹೇಳಿದ್ದಾರೆ.
ಉದ್ಧವ್ ಬಣ, ಕಾಂಗ್ರೆಸ್ ಮತ್ತು ಎನ್‌ಸಿಪಿಯ ಮೈತ್ರಿ ಪ್ರಜಾಪ್ರಭುತ್ವವನ್ನು ರಕ್ಷಿಸಲು ಮಾಡಲ್ಪಟ್ಟಿದೆ ಮತ್ತು ನಾವು ಒಗ್ಗಟ್ಟಿನಿಂದ ಕೆಲಸ ಮಾಡಬೇಕಾಗಿದೆ. ರಾಹುಲ್ ಗಾಂಧಿಯನ್ನು ಉದ್ದೇಶಪೂರ್ವಕವಾಗಿ ಪ್ರಚೋದಿಸಲಾಗುತ್ತಿದೆ. ಆದರೆ ನಾವು ಇದರಲ್ಲಿ ಸಮಯ ವ್ಯರ್ಥ ಮಾಡಿದರೆ, ಪ್ರಜಾಪ್ರಭುತ್ವ ಅಸ್ತಿತ್ವದಲ್ಲಿರುವುದಿಲ್ಲ ಎಂದು ಉದ್ಧವ್ ಠಾಕ್ರೆ ಹೇಳಿದರು.
ಉದ್ಧವ್ ಠಾಕ್ರೆ ಅವರು ರಾಹುಲ್ ಗಾಂಧಿಯವರ ಇತ್ತೀಚಿನ ಹೇಳಿಕೆ ಉಲ್ಲೇಖಿಸಿ ಈ ಪ್ರತಿಕ್ರಿಯೆ ನೀಡಿದ್ದಾರೆ.
ನನ್ನ ಹೆಸರು ಸಾವರ್ಕರ್ ಅಲ್ಲ, ನನ್ನ ಹೆಸರು ಗಾಂಧಿ ಮತ್ತು ಗಾಂಧಿ ಯಾರಿಗೂ ಕ್ಷಮೆ ಕೇಳುವುದಿಲ್ಲ ಎಂದು ಮಾನನಷ್ಟ ಮೊಕದ್ದಮೆಯಲ್ಲಿ ಶಿಕ್ಷೆಯ ನಂತರ ಸಂಸದ ಸ್ಥಾನದಿಂದ ಅನರ್ಹಗೊಂಡ ನಂತರ ಶನಿವಾರ ಸುದ್ದಿಗೋಷ್ಠಿಯಲ್ಲಿ ರಾಹುಲ್ ಗಾಂಧಿ ಹೇಳಿದ್ದರು.

ತಮ್ಮ ‘ಮೋದಿ ಉಪನಾಮ’ ಕುರಿತ ಹೇಳಿಕೆಗೆ ಸಂಬಂಧಿಸಿದಂತೆ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ದೋಷಿ ಎಂದು ಸೂರತ್ ನ್ಯಾಯಾಲಯದ ತೀರ್ಪಿನ ನಂತರ ರಾಹುಲ್ ಗಾಂಧಿ ಅವರನ್ನು ಸಂಸತ್ ಸದಸ್ಯತ್ವದಿಂದ ಅನರ್ಹಗೊಳಿಸಲಾಯಿತು.

ಉದ್ಧವ್ ಠಾಕ್ರೆ ಅವರ ಸೇನಾ ಬಣ ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ ಮತ್ತು ಎನ್‌ಸಿಪಿಯ ಮಿತ್ರ ಪಕ್ಷವಾಗಿದೆ.
ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧ ರಾಹುಲ್ ಗಾಂಧಿಯವರ ಟೀಕೆಗೆ ಸಂಬಂಧಿಸಿದಂತೆ ಬಿಜೆಪಿ ವಾದವನ್ನು ತೀವ್ರವಾಗಿ ಟೀಕಿಸಿದ ಉದ್ಧವ್ ಠಾಕ್ರೆ, ಪ್ರಧಾನಿ ನರೇಂದ್ರ
ಮೋದಿ ಭಾರತವಲ್ಲ, ನಮ್ಮ ಸ್ವಾತಂತ್ರ್ಯ ಹೋರಾಟಗಾರರು ಇದಕ್ಕಾಗಿ ಪ್ರಾಣ ತೆರಲಿಲ್ಲವೇ?, ಮೋದಿಯನ್ನು ಪ್ರಶ್ನಿಸುವುದು ಭಾರತವನ್ನು ಅವಮಾನಿಸುವುದು ಹೇಗಾಗುತ್ತದೆ ಎಂದರು.


Spread the love

About Yuva Bharatha

Check Also

ಪ್ರಮೋದ್ ಮುತಾಲಿಕ್ ನಿವೃತ್ತಿ, ಶ್ರೀ ರಾಮಸೇನೆ ರಾಷ್ಟ್ರೀಯ ಅಧ್ಯಕ್ಷರಾಗಿ ಸಿದ್ದಲಿಂಗ ಸ್ವಾಮಿ ಆಯ್ಕೆ

Spread the loveಪ್ರಮೋದ್ ಮುತಾಲಿಕ್ ನಿವೃತ್ತಿ, ಶ್ರೀ ರಾಮಸೇನೆ ರಾಷ್ಟ್ರೀಯ ಅಧ್ಯಕ್ಷರಾಗಿ ಸಿದ್ದಲಿಂಗ ಸ್ವಾಮಿ ಆಯ್ಕೆ ಬೆಂಗಳೂರು : ಶ್ರೀ …

Leave a Reply

Your email address will not be published. Required fields are marked *

nineteen − 15 =