BIG BREAKING NEWS ಕರ್ನಾಟಕ ಚುನಾವಣೆ ಘೋಷಣೆ !

ಯುವ ಭಾರತ ಸುದ್ದಿ ದೆಹಲಿ :
ಕರ್ನಾಟಕ ಚುನಾವಣೆ ಇಂದು ಘೋಷಣೆ ಮಾಡಲಾಗಿದೆ.
ದೆಹಲಿಯಲ್ಲಿ ಚುನಾವಣಾ ಆಯೋಗದ ಮುಖ್ಯ ಆಯುಕ್ತ ರಾಜೀವ ಕುಮಾರ್ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ್ದಾರೆ.
ಮೇ 24 ಕ್ಕೆ ಕರ್ನಾಟಕ ವಿಧಾನಸಭೆಯ ಅವಧಿ ಮುಕ್ತಾಯವಾಗುತ್ತಿದೆ. ಚುನಾವಣೆ ನಡೆಯಲಿದೆ.
ಮೊದಲ ಬಾರಿಗೆ ಮನೆಯಿಂದಲೇ ಮತದಾನಕ್ಕೆ ಅವಕಾಶವಿದೆ. 80 ವರ್ಷ ಮೇಲ್ಪಟ್ಟವರಿಗೆ ಮನೆಯಿಂದಲೇ ಮತದಾನ ಮಾಡಲು ಅವಕಾಶ ಕಲ್ಪಿಸಲಾಗಿದೆ.
ಮತದಾನಕ್ಕೆ ಅಧಿಕಾರಿಗಳು ಮನೆಗೆ ಆಗಮಿಸಲಿದ್ದಾರೆ.
ಚುನಾವಣೆ ದಿನಾಂಕ :
ಚುನಾವಣೆ ಅಧಿಸೂಚನೆ ಏಪ್ರಿಲ್ 13 ರಂದು ಹೊರಡಿಸಲಾಗುತ್ತದೆ. ನಾಮಪತ್ರ ಪರಿಶೀಲನೆ ಎಪ್ರಿಲ್ 21ರಂದು ನಡೆಯಲಿದೆ ನಾಮಪತ್ರ ಹಿಂಪಡೆಯಲು ಏಪ್ರಿಲ್ 24 ಕೊನೆಯ ದಿನ.
ಮತ ಎಣಿಕೆ ಮೇ 13 ರಂದು ನಡೆಯಲಿದೆ ಒಂದೇ ಹಂತದಲ್ಲಿ ವಿಧಾನಸಭಾ ಚುನಾವಣೆ ನಡೆಯುತ್ತಿದೆ.
ಮೇ 10 ರಂದು ಚುನಾವಣೆ ನಡೆಯಲಿದೆ.
YuvaBharataha Latest Kannada News