ಗೆಲ್ಲಿಸುವ ಹೊಣೆ ನನಗೆ ಬಿಡಿ : ಬೆಳಗಾವಿ, ಅಥಣಿ, ಕಾಗವಾಡದಲ್ಲಿ ತಮ್ಮ ಪರಮಾಪ್ತರಿಗೆ ಟಿಕೆಟ್ ನೀಡಿ ಸಾಹುಕಾರ್ !

ಯುವ ಭಾರತ ಸುದ್ದಿ ಬೆಂಗಳೂರು : ಬೆಳಗಾವಿ ಜಿಲ್ಲೆಯ ಅಥಣಿ ಕ್ಷೇತ್ರಕ್ಕೆ ತಮ್ಮ ಪರಮಾಪ್ತ ಮಹೇಶ್ ಕುಮಟಳ್ಳಿಗೆ ಟಿಕೆಟ್ ನೀಡುವುದು ಸೇರಿದಂತೆ ಕೆಲವು ಕ್ಷೇತ್ರಗಳಲ್ಲಿ ತಾವು ಹೇಳಿದವರಿಗೆ ಟಿಕೆಟ್ ನೀಡುವಂತೆ ಶಾಸಕ ರಮೇಶ ಜಾರಕಿಹೊಳಿ ಬಿಜೆಪಿ ಬೆಳಗಾವಿ ಜಿಲ್ಲಾ ಕೋರ್ ಕಮಿಟಿ ಸಭೆಯಲ್ಲಿ ಒತ್ತಾಯಿಸಿದ್ದಾರೆ ಎಂದು ತಿಳಿದು ಬಂದಿದೆ.
ಶನಿವಾರ ನಗರದ ಹೊರವಲಯದ ಖಾಸಗಿ ರೆಸಾರ್ಚ್‌ನಲ್ಲಿ ನಡೆದ ಸಭೆಯಲ್ಲಿ ಬೆಳಗಾವಿ ನಗರ, ಬೆಳಗಾವಿ ಗ್ರಾಮಾಂತರ ಜಿಲ್ಲೆಗಳ ವಿಧಾನಸಭಾ ಕ್ಷೇತ್ರಗಳಿಗೆ ಟಿಕೆಟ್ ನೀಡುವ ಸಂಬಂಧ ಕೋರ್ ಕಮಿಟಿ ಸದಸ್ಯರ ಅಭಿಪ್ರಾಯ ಸಂಗ್ರಹಿಸಲಾಯಿತು. ಈ ವೇಳೆ ರಮೇಶ ಜಾರಕಿಹೊಳಿ ಅವರು ತಮ್ಮ ಬೆಂಬಲಿಗರಿಗೆ ಟಿಕೆಟ್ ನೀಡುವಂತೆ ಆಗ್ರಹಿಸಿದ್ದಾರೆ.
ಅಥಣಿ ಕ್ಷೇತ್ರ ಚರ್ಚೆಗೆ ಬಂದಾಗ ಟಿಕೆಟ್ ಆಕಾಂಕ್ಷಿ ಲಕ್ಷ್ಮಣ ಸವದಿ ಹೆಸರು ಪ್ರಸ್ತಾಪಿಸದೆ ತಮ್ಮ ಬೆಂಬಲಿಗ ಮಹೇಶ ಕುಮಟಳ್ಳಿಗೆ ಟಿಕೆಟ್ ನೀಡಬೇಕು. ಬೆಳಗಾವಿ ಗ್ರಾಮಾಂತರ ಕ್ಷೇತ್ರದಲ್ಲಿ ಕಾಂಗ್ರೆಸ್‌ನ ಲಕ್ಷ್ಮೀ ಹೆಬ್ಬಾಳ್ಕರ್ ಸೋಲಿಸುವ ಹೊಣೆ ತಮ್ಮದು. ಹೀಗಾಗಿ ನಾಗೇಶ್ ಮನ್ನೋಳ್ಕರಗೆ ಹಾಗೂ ಕಾಗವಾಡ ಕ್ಷೇತ್ರದಲ್ಲಿ ಶ್ರೀಮಂತ ಪಾಟೀಲ್ಗೆ ಟಿಕೆಟ್ ನೀಡುವಂತೆ ಜಾರಕಿಹೊಳಿ ಸಭೆಯಲ್ಲಿ ಒತ್ತಾಯಿಸಿದ್ದಾರೆ ಎನ್ನಲಾಗಿದೆ.
YuvaBharataha Latest Kannada News