ನಂದಗಡದಲ್ಲಿ 40 ಲಕ್ಷ ರೂ. ಚಿನ್ನಾಭರಣ ವಶ

ಯುವ ಭಾರತ ಸುದ್ದಿ ಬೆಳಗಾವಿ :
ಖಾನಾಪುರ ತಾಲೂಕು ನಂದಗಡ ಚೆಕ್ ಪೋಸ್ಟ್ ನಲ್ಲಿ ಮಂಗಳವಾರ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 40 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಹಳಿಯಾಳದಿಂದ ಕಕ್ಕೇರಿಗೆ ಕಾರಿನಲ್ಲಿ ಚಿನ್ನಾಭರಣ ಮತ್ತು ಬೆಳ್ಳಿ ಆಭರಣ ಸಾಗಿಸಲಾಗುತ್ತಿತ್ತು. 21.25 ಲಕ್ಷ
ರೂ.395ಗ್ರಾಂ ಚಿನ್ನಾಭರಣ, 19 ಲಕ್ಷ ರೂಪಾಯಿ ಮೌಲ್ಯದ 28 ಕೆಜಿ ಬೆಳ್ಳಿ ಆಭರಣ ಮತ್ತು ಕಾರನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
YuvaBharataha Latest Kannada News