ಸಿದ್ದರಾಮಯ್ಯ ವಿರುದ್ಧ ಸ್ಪರ್ಧೆ ನಡೆಸೆನು : ಸಚಿವ ಸೋಮಣ್ಣ

ಯುವ ಭಾರತ ಸುದ್ದಿ ಬೆಂಗಳೂರು :
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಸ್ಪರ್ಧಿಸುವುದಿಲ್ಲ ಎಂದು ಸಚಿವ ಸೋಮಣ್ಣ ಸ್ಪಷ್ಟಪಡಿಸಿದ್ದಾರೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ವರುಣಾದಲ್ಲಿ ನಾನು ವಿಧಾನಸಭಾ ಚುನಾವಣೆಗೆ ಸ್ಪರ್ಧಿಸುವುದಿಲ್ಲ. ಸಿದ್ದರಾಮಯ್ಯ ಅವರ ವಿರುದ್ಧ ಸ್ಪರ್ಧಿಸುತ್ತೇನೆ ಎಂಬ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ. ಆದರೆ, ಬಿಜೆಪಿ ವರಿಷ್ಠರು ಹೇಳುವ ಕಡೆ ಸ್ಪರ್ಧೆ ನಡೆಸುವುದಾಗಿ ತಿಳಿಸಿದ್ದಾರೆ.
ವರುಣಾ ಮತಕ್ಷೇತ್ರದಲ್ಲಿ ಸಿದ್ದರಾಮಯ್ಯ ಅವರಿಗೆ ಪೈಪೋಟಿ ನೀಡಲು ಸೋಮಣ್ಣ ಅವರ ಹೆಸರನ್ನು ಮುನ್ನಲೆಗೆ ತರಲಾಗಿತ್ತು. ಇದೀಗ ಸ್ವತಃ ಅವರೇ ತಾವು ವರುಣದಿಂದ ಸ್ಪರ್ಧೆ ನಡೆಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
YuvaBharataha Latest Kannada News