Breaking News

ಬೆಳಗಾವಿ ಗೆಲ್ಲಲು ಸಾಹುಕಾರ್ ಚಾಣಕ್ಯ ತಂತ್ರ !

Spread the love

ಬೆಳಗಾವಿ ಗೆಲ್ಲಲು ಸಾಹುಕಾರ್ ಚಾಣಕ್ಯ ತಂತ್ರ !

ಯುವ ಭಾರತ ಸುದ್ದಿ ಬೆಳಗಾವಿ :
ಬೆಳಗಾವಿ ಜಿಲ್ಲೆಯ ಎಲ್ಲಾ 18 ವಿಧಾನಸಭಾ ಮತಕ್ಷೇತ್ರಗಳಲ್ಲಿ ಬಿಜೆಪಿಗೆ ಗೆಲುವು ತಂದುಕೊಡಲು ಮಾಜಿ ಸಚಿವ ಹಾಗೂ ಗೋಕಾಕ ಬಿಜೆಪಿ ಶಾಸಕ ರಮೇಶ ಜಾರಕಿಹೊಳಿ ಅವರು ರಣತಂತ್ರ ಹೆಣದಿದ್ದಾರೆ. ಈ ಬಗ್ಗೆ ಅಭ್ಯರ್ಥಿಗಳ ಗೆಲ್ಲಿಸಲು ಎಲ್ಲಾ ಅಧಿಕಾರ ನೀಡಿದರೆ ಎಲ್ಲಾ ಕ್ಷೇತ್ರಗಳಲ್ಲೂ ಬಿಜೆಪಿ ಜಯಭೇರಿ ಬಾರಿಸಲು ಶಕ್ತಿಮೀರಿ ಪ್ರಯತ್ನಿಸುವುದಾಗಿ ಈಗಾಗಲೇ ಮನವರಿಕೆ ಮಾಡಿಕೊಟ್ಟಿದ್ದಾರೆ.

ಸಮ್ಮಿಶ್ರ ಸರಕಾರದ ವಿರುದ್ಧ ಈ ಹಿಂದೆ ಸಿಡಿದೆದ್ದ ಸಾಹುಕಾರ್ ಕೊನೆಗೂ ಶತಃಪ್ರಯತ್ನದ ಮೂಲಕ ಸರಕಾರದ ಪತನಕ್ಕೆ ಕಾರಣರಾಗಿದ್ದರು. ಈ ಮೂಲಕ ತಾವು ಹಿಡಿದ ಹಟವನ್ನು ಸಾಧಿಸಿ ತಾವೊಬ್ಬ ಛಲದಂಕ ಮಲ್ಲ ಎಂದು ನಾಡಿನ ಜನತೆಗೆ ತೋರಿಸಿಕೊಟ್ಟವರು. ಬಿಜೆಪಿ ಸರಕಾರ ಅಧಿಕಾರಕ್ಕೆ ಬರಲು ನೇರ ಕಾರಣಕರ್ತರಾಗಿದ್ದ ರಮೇಶ ಜಾರಕಿಹೊಳಿ ಅವರು ಇದೀಗ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಶಕ್ತಿ -ಸಾಮರ್ಥ್ಯವನ್ನು ಮತ್ತೆ ಓರೆಗಲ್ಲಿಗೆ ಹಚ್ಚಿದ್ದಾರೆ.

ಜಿಲ್ಲೆಯ ಪ್ರತಿಯೊಬ್ಬ ಅಭ್ಯರ್ಥಿಯನ್ನು ಗೆಲ್ಲಿಸುವ ಮೂಲಕ ಬಿಜೆಪಿ ವರಿಷ್ಠರಿಗೆ ತಮ್ಮ ಶಕ್ತಿ ತೋರಿಸುವ ಹವಣಿಕೆಯಲ್ಲಿದ್ದಾರೆ. ಕರ್ನಾಟಕದಲ್ಲಿ ಅತಿ ಹೆಚ್ಚು ವಿಧಾನಸಭಾ ಮತಕ್ಷೇತ್ರಗಳನ್ನು ಹೊಂದಿರುವ ಎರಡನೇ ದೊಡ್ಡ ಜಿಲ್ಲೆಯನ್ನು ಬಿಜೆಪಿ ಮಡಿಲಿಗೆ ಒಪ್ಪಿಸುವ ಮೂಲಕ ರಾಜ್ಯದಲ್ಲಿ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರಲು ಸಂಕಲ್ಪಿಸಿದ್ದಾರೆ.

ತಾವು ಪ್ರತಿನಿಧಿಸುವ ಗೋಕಾಕ ಮತಕ್ಷೇತ್ರದಲ್ಲಿ ಚುನಾವಣೆ ಘೋಷಣೆಗೂ ಮುನ್ನ ಹಳ್ಳಿ ಹಳ್ಳಿಗಳಲ್ಲಿ ಸಮಾವೇಶ ನಡೆಸಿ ಚುನಾವಣೆಯ ಸಿದ್ಧತೆ ನಡೆಸಿದ್ದರು. ಅದೇ ರೀತಿ ಇದೀಗ ಇಡೀ ಜಿಲ್ಲೆಯಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸಿ ತರುವ ಮೂಲಕ ಸಾಹುಕಾರ್ ಮತ್ತೊಂದು ಸವಾಲಿಗೆ ಮುಂದಾಗಿದ್ದಾರೆ.

ಬೆಳಗಾವಿ ಜಿಲ್ಲೆಯಲ್ಲಿ ಸದ್ಯ 13 ಬಿಜೆಪಿ ಶಾಸಕರಿದ್ದಾರೆ. ಆ ಸಂಖ್ಯೆಯನ್ನು ವಿಧಾನಸಭಾ ಚುನಾವಣೆಯಲ್ಲಿ ಇನ್ನಷ್ಟು ಹೆಚ್ಚಿಸುವ ನಿಟ್ಟಿನಲ್ಲಿ ಸಾಹುಕಾರ ತಮ್ಮದೇ ಆದ ರಣತಂತ್ರಗಳನ್ನು ಹೆಣೆದಿದ್ದಾರೆ. ಬಿಜೆಪಿ ವರಿಷ್ಠರು ಒಂದು ವೇಳೆ ತಮ್ಮ ಯೋಜನೆಗಳಿಗೆ ಹಸಿರು ನಿಶಾನೆ ತೋರಿಸಿದರೆ ಎಲ್ಲಾ ಕ್ಷೇತ್ರಗಳಲ್ಲೂ ಬಿಜೆಪಿಯ ಕಮಲ ದ್ವಜವನ್ನು ಹಾರಿಸಲು ಸಾಹುಕಾರ್ ತಂತ್ರಗಾರಿಕೆ ನಡೆಸಿದ್ದು ಒಟ್ಟಾರೆ ಬೆಳಗಾವಿ ಜಿಲ್ಲೆಯಲ್ಲಿ ಅತಿ ಹೆಚ್ಚು ಬಿಜೆಪಿ ಶಾಸಕರನ್ನು ಗೆಲ್ಲಿಸಿಕೊಂಡು ಹೋಗುವ ಮೂಲಕ ಮತ್ತೊಮ್ಮೆ ಇಡೀ ರಾಜ್ಯಕ್ಕೆ ತಮ್ಮ ಶಕ್ತಿ ಪ್ರದರ್ಶಿಸಲು ಶಾಸಕ ರಮೇಶ ಜಾರಕಿಹೊಳಿ ಅವರು ಇದೀಗ ಮತ್ತೆ ಅಣಿಯಾಗಿದ್ದಾರೆ.


Spread the love

About Yuva Bharatha

Check Also

ಬಿಜೆಪಿ ಜಾರಿಗೆ ತಂದಿರುವ ರೈತ ವಿರೋಧಿ ಕೃಷಿ ಕಾಯ್ದೆಗಳ ವಿಚಾರದಲ್ಲಿ ಖಚಿತ ತೀರ್ಮಾನ ಮಾಡ್ತೀವಿ: ಸಿದ್ದರಾಮಯ್ಯ

Spread the love ಬಿಜೆಪಿ ಜಾರಿಗೆ ತಂದಿರುವ ರೈತ ವಿರೋಧಿ ಕೃಷಿ ಕಾಯ್ದೆಗಳ ವಿಚಾರದಲ್ಲಿ ಖಚಿತ ತೀರ್ಮಾನ ಮಾಡ್ತೀವಿ: ಸಿದ್ದರಾಮಯ್ಯ …

Leave a Reply

Your email address will not be published. Required fields are marked *

2 − one =