ರಾಯಬಾಗದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ರಾಜು ಕಿರಣಗಿ ಕಣಕ್ಕೆ
ಯುವ ಭಾರತ ಸುದ್ದಿ ರಾಯಬಾಗ :
ರಾಯಬಾಗ ವಿಧಾನಸಭಾ ಮತಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ರಾಜು ಕಿರಣಗಿ ನಿರ್ಧರಿಸಿದ್ದಾರೆ.
ರಾಯಬಾಗ ವಿಧಾನಸಭಾ ಕ್ಷೇತ್ರದಲ್ಲಿ ಈ ಬಾರಿ ರಾಜು ಕಿರಣಗಿ ಅವರು ಬಿಜೆಪಿ ಟಿಕೆಟ್ ಅಪೇಕ್ಷಿತರಾಗಿದ್ದರು. ಜನ ಹಾಗೂ ಬಿಜೆಪಿ ಕಾರ್ಯಕರ್ತರು ಬದಲಾವಣೆ ಬಯಸಿದ್ದರು. ಆದರೆ, ಬಿಜೆಪಿ ಹೊಸಬರಿಗೆ ಅವಕಾಶ ಕಲ್ಪಿಸಿಲ್ಲ. ಇದರಿಂದ ನೊಂದಿರುವ ನಾನು ಕಾರ್ಯಕರ್ತರ ಅಭಿಪ್ರಾಯ ಸಂಗ್ರಹಿಸಿ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ಮುಂದಾಗಿರುವುದಾಗಿ ಅವರು ತಿಳಿಸಿದ್ದಾರೆ.
ಬಿಜೆಪಿ ನನಗೆ ಈ ಸಲ ಟಿಕೆಟ್ ನೀಡದೇ ಇರುವುದರಿಂದ ಅಪಾರ ಕಾರ್ಯಕರ್ತರು ನಿರಾಸೆಗೊಂಡಿದ್ದಾರೆ. ದಶಕಗಳಿಂದ ದುಡಿಯುತ್ತ ಬಂದಿರುವ ಕಾರ್ಯಕರ್ತರಿಗೆ ಬೆಲೆ ಇಲ್ಲದಂತಾಗಿದೆ. ಕಾರ್ಯಕರ್ತರನ್ನು ಕಡೆಗಣಿಸಿರುವುದು ಸರಿಯಲ್ಲ. ಈ ಹಿನ್ನೆಲೆಯಲ್ಲಿ ಬಿಜೆಪಿ ಕಾರ್ಯಕರ್ತರು ನಾವು ನಿಮ್ಮ ಜೊತೆಗಿದ್ದೇವೆ ಎಂದು ಅಭಯ ನೀಡಿದ್ದಾರೆ. ಯಾವುದೇ ಕಾರಣಕ್ಕೂ ಚುನಾವಣೆಯಿಂದ ದೂರ ಸರಿಯುವುದು ಬೇಡ ಎಂದು ಒತ್ತಾಯಿಸುತ್ತಿದ್ದಾರೆ. ಹೀಗಾಗಿ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದು ಶತಃಸಿದ್ಧ. ಮುಂದಿನ ಎರಡು ಅಥವಾ ಮೂರು ದಿನದಲ್ಲಿ ಸ್ಪಷ್ಟ ನಿರ್ಧಾರ ತೆಗೆದುಕೊಂಡು ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದು ನಾಮಪತ್ರ ಸಲ್ಲಿಸುವುದಾಗಿ ಅವರು ತಿಳಿಸಿದ್ದಾರೆ.