ಬೆಳಗಾವಿಗೆ ಇಂದು ಸಂತೋಷ್ ಜಿ

ಯುವ ಭಾರತ ಸುದ್ದಿ ಬೆಳಗಾವಿ :
ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ. ಎಲ್. ಸಂತೋಷ್ ಇಂದು ಬೆಳಗಾವಿಗೆ ಆಗಮಿಸಲಿದ್ದಾರೆ.
ಬೆಳಗ್ಗೆ 11 ಗಂಟೆಗೆ ಹೋಟೆಲ್ ಸಂಕಮ್ ಸಭಾಗ್ರಹದಲ್ಲಿ ಅವರು ಅತ್ರಪ್ತರ ಜೊತೆ ಮಾತುಕತೆ ನಡೆಸಲಿದ್ದಾರೆ. ವಿಧಾನಸಭಾ ಚುನಾವಣೆ ಸಂಬಂಧ ಟಿಕೆಟ್ ವಂಚಿತರಾದವರ ಜೊತೆ ಅವರು ಚರ್ಚಿಸಿ ಬಂಡಾಯ ಶಮನಕ್ಕೆ ಮುಂದಾಗಲಿದ್ದಾರೆ. ನಂತರ ಬಿಜೆಪಿ ಡಿಜಿಟಲ್ ಕಾರ್ಯಕರ್ತರ ಜೊತೆ ಮಾತುಕತೆ ನಡೆಸಲಿದ್ದು ಇಡೀ ದಿನ ಬೆಳಗಾವಿಯಲ್ಲಿ ಬಿಜೆಪಿ ನಾಯಕರ ಜೊತೆ ಚರ್ಚೆ ನಡೆಸಲಿದ್ದಾರೆ.
YuvaBharataha Latest Kannada News