Breaking News

ರಮೇಶ್ ಜಾರಕಿಹೊಳಿ ಅವರ ಗುರ್ತು ಕಮಲ ಎಂದು ತಾಯಂದಿರಿಗೆ ತಿಳಿಹೇಳಬೇಕು-ರಮೇಶ ಜಾರಕಿಹೊಳಿ.!

Spread the love

ರಮೇಶ್ ಜಾರಕಿಹೊಳಿ ಅವರ ಗುರ್ತು ಕಮಲ ಎಂದು ತಾಯಂದಿರಿಗೆ ತಿಳಿಹೇಳಬೇಕು-ರಮೇಶ ಜಾರಕಿಹೊಳಿ.!


ಗೋಕಾಕ: ತಾಲೂಕಿನ ಬೆಣಚಿನಮರಡಿ ಗ್ರಾಮದಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ ಜಾರಕಿಹೊಳಿ ಅವರು ೭ನೇ ಬಾರಿ ಆಯ್ಕೆ ಬಯಸಿ ತಮ್ಮ ಚುನಾವಣಾ ಪ್ರಚಾರವನ್ನು ಪಾದಯಾತ್ರೆ ಮಾಡುವ ಮೂಲಕ ಮತಯಾಚನೆ ಮಾಡಿದರು.
ಶಾಸಕ ರಮೇಶ ಜಾರಕಿಹೊಳಿ ಅವರನ್ನು ನೂರಾರು ಗ್ರಾಮಸ್ಥರು ಪಾಲ್ಗೊಂಡು ಶಾಸಕರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಶಾಸಕರು ಸಂಗೋಳ್ಳಿ ರಾಯಣ್ಣ ಮೂರ್ತಿಗೆ ಮಾಲಾರ್ಪಣೆ ಮಾಡಿ ನಮನ ಸಲ್ಲಿಸಿದರು. ನಂತರ ಗ್ರಾಮದ ವಿವಿಧ ಓಣಿಗಳಲ್ಲಿ ಸಂಚರಿಸಿ ಈ ಬಾರಿಯೂ ನನ್ನನ್ನು ಆರ್ಶಿವಧಿಸಿ ದಾಖಲೆಯ ಅಂತರದಿAದ ಗೆಲ್ಲಿಸುವಂತೆ ಮತದಾರರಲ್ಲಿ ಮನವಿ ಮಾಡಿಕೊಂಡರು.
ಈ ಸಂದರ್ಭದಲ್ಲಿ ಮತದಾರರನ್ನು ಉದ್ದೇಶಿಸಿ ಮಾತನಾಡಿದ ಶಾಸಕ ರಮೇಶ ಜಾರಕಿಹೊಳಿ ಅವರು ಈ ಬಾರಿಯ ಚುನಾವಣೆಯಲ್ಲಿ ಕಾರ್ಯಕರ್ತರೆ ಅಭ್ಯರ್ಥಿ ಎಂದು ಭಾವಿಸಿ ಕೆಲಸ ಮಾಡಬೇಕು. ರಮೇಶ್ ಜಾರಕಿಹೊಳಿ ಅವರ ಗುರ್ತು ಕಮಲ ಎಂದು ತಾಯಂದಿರಿಗೆ ತಿಳಿಹೇಳಬೇಕು ಎಂದು ತಿಳಿಸಿದರು.
ಕಾಂಗ್ರೆಸ್ ಪಕ್ಷದ ಸುಳ್ಳು ಭರವಸೆಗಳಿಗೆ ಕಿವಿಕೊಡದೆ ಬಿಜೆಪಿ ಪಕ್ಷಕ್ಕೆ ಮತ ನೀಡಬೇಕು. ನನ್ನ ಅಭಿವೃದ್ಧಿ ಕಾಮಗಾರಿಗಳನ್ನು ಗಮನಿ ಈ ಸಾರಿ ನನಗೆ ಹೆಚ್ಚಿನ ಮತಗಳ ಅಂತರದಿAದ ಗೆಲ್ಲಿಸಬೇಕು. ನೀರಾವರಿ, ಆರೋಗ್ಯ, ಶಿಕ್ಷಣಕ್ಕೆ ಮಹತ್ವ ನೀಡಿ ರಾಜ್ಯದಲ್ಲಿ ಗೋಕಾಕ ಮತಕ್ಷೇತ್ರದವನ್ನು ಅಭಿವೃದ್ಧಿ ಪಡಿಸೋಣ. ಚಹಾ ಮಾರಿ ಕಷ್ಟಪಟ್ಟು ಇಂದು ಮೋದಿ ಅವರು ದೇಶದ ಪ್ರಧಾನಿಯಾಗಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಬಾರತವನ್ನು ಗುರುತಿಸುವ ಕಾರ್ಯಮಾಡಿದ್ದಾರೆ. ೨೦೨೩ರಲ್ಲಿ ರಾಜ್ಯದಲ್ಲಿ ಬಿಜೆಪಿ ಗೆಲ್ಲಿಸಿ, ಜನಸಾಮಾನ್ಯರ ಕಷ್ಟಗಳನ್ನು ಅರಿತ ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನಿಯನ್ನಾಗಿ ಮಾಡೋಣ ಎಂದ ಅವರು ಲಕ್ಷ್ಮಣ ಸವದಿ, ಶೆಟ್ಟರ್ ಅವರು ಪಕ್ಷ ಬಿಟ್ಟಿದ್ದು, ಪಕ್ಷಕ್ಕೆ ಯಾವುದೇ ಹಾನಿ ಆಗುವುದಿಲ್ಲ. ಡಿಕೆಶಿ ಅವರ ಷಡ್ಯಂತ್ರ ಮಾಡುತ್ತಿದ್ದಾರೆ. ನಾನು ವಾಲ್ಮೀಕಿ ಸಮಾಜದಲ್ಲಿ ಹುಟ್ಟಿದರೂ ಸಹ ಎಲ್ಲ ಸಮುದಾಯಗಳ ಜನರ ಪ್ರತಿನಿಧಿಯಾಗಿ ಕಾರ್ಯಾಮಾಡುತ್ತೇನೆ ನನಗೆ ಈ ಬಾರಿ ಆರ್ಶಿವದಿಸಿಬೇಕು ಎಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಟಿ.ಆರ್.ಕಾಗಲ, ಮಡೆಪ್ಪ ತೋಳಿನವರ, ಬಿಜೆಪಿ ಗ್ರಾಮೀಣ ಅಧ್ಯಕ್ಷ ರಾಜೇಂದ್ರ ಗೌಡಪ್ಪಗೋಳ, ನಗರ ಅಧ್ಯಕ್ಷ ಭೀಮಶಿ ಭರಮನ್ನವರ, ಲಕ್ಕಪ್ಪ ಮಾಳಗಿ, ಲಕ್ಷ್ಮಣ ಕಿಲಾರಿ, ಹನುಮಂತಗೌಡ ಪಾಟೀಲ, ಪ್ರಕಾಶ ವಡ್ಡರ, ಮುತ್ಯೆಪ್ಪಾ ಕಿಲಾರಿ, ವಿಠಲ ಗುಂಡಿ, ಬಿಜೆಪಿ ಗ್ರಾಮೀಣ ಪ್ರಧಾನ ಕಾರ್ಯದರ್ಶಿ ಬಾಳೇಶ ಗಿಡ್ನವರ ಸೇರಿದಂತೆ ನೂರಾರು ಬಿಜೆಪಿ ಕಾರ್ಯಕರ್ತರು ಮುಖಂಡರು ಉಪಸ್ಥಿತರಿದ್ದರು.


Spread the love

About Yuva Bharatha

Check Also

ಶ್ರೀ ಉಜ್ಜಯಿನಿ ಸದ್ಧರ್ಮ ಪೀಠದ ಪ್ರಸ್ತುತ ಪರಮ ಪೀಠಾಚಾರ್ಯರಾದ ಶ್ರೀ ಜಗದ್ಗುರು ಸಿದ್ಧಲಿಂಗ ರಾಜದೇಶಿಕೇಂದ್ರ ಶಿವಾಚಾರ್ಯ ಭಗವತ್ಪಾದರರ ಸಾನ್ನಿಧ್ಯದಲ್ಲಿ ಜಾತ್ರಾ ಮಹೋತ್ಸವ

Spread the loveಸಾಮಾಜಿಕ ಸೌಹಾರ್ದತೆ ಸಾರುವ ಶ್ರೀ ಉಜ್ಜಯಿನಿ ಮರುಳಸಿದ್ಧೇಶ್ವರ ಜಾತ್ರಾ ಮಹೋತ್ಸವ.! ಶ್ರೀ ಉಜ್ಜಯಿನಿ ಸದ್ಧರ್ಮ ಪೀಠದ ಪ್ರಸ್ತುತ …

Leave a Reply

Your email address will not be published. Required fields are marked *

1 + 13 =