ಬಿಜೆಪಿ ಅಭ್ಯರ್ಥಿ ನಾಗೇಶ ಮನ್ನೋಳ್ಕರ್ ಪರ ಕೇಂದ್ರ ಸಚಿವೆ ಸ್ಮೃತಿ ಇರಾನಿ ಅಬ್ಬರದ ಪ್ರಚಾರ

ಯುವ ಭಾರತ ಸುದ್ದಿ ಬೆಳಗಾವಿ :
ಬೆಳಗಾವಿ ಗ್ರಾಮೀಣ ಬಿಜೆಪಿ ಅಭ್ಯರ್ಥಿ ನಾಗೇಶ ಮನ್ನೋಳ್ಕರ್ ಪರ ಕೇಂದ್ರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಸ್ಮೃತಿ ಇರಾನಿ ಗುರುವಾರ ಅಬ್ಬರದ ಚುನಾವಣಾ ಪ್ರಚಾರ ನಡೆಸಿದರು.
ನಗರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅವರು ಮಹಿಳಾ ಕಾರ್ಯಕರ್ತೆಯರನ್ನು ಉದ್ದೇಶಿಸಿ ಮಾತನಾಡಿದರು. ಕೇಂದ್ರದ ನರೇಂದ್ರ ಮೋದಿ ಸರಕಾರ ಮಹಿಳೆಯರ ಅಭಿವೃದ್ಧಿ ಕಲ್ಯಾಣಗಳಿಗೆ ಜಾರಿಗೊಳಿಸಿದ ಯೋಜನೆಗಳು ಹಾಗೂ ಮೋದಿ ಅವರ ಚಿಂತನೆಗಳನ್ನು ಮನವರಿಕೆ ಮಾಡಿದರು.

ಮಹಿಳೆಯರಿಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಜಾರಿಗೆ ತಂದಿರುವ ಯೋಜನೆಗಳನ್ನು ವಿಧಾನಸಭಾ ಚುನಾವಣೆಯಲ್ಲಿ ಮತದಾರರ ಮುಂದೆ ಇಟ್ಟು ಮತಯಾಚಿಸಬೇಕು ಎಂದು ತಿಳಿಸಿದರು.
ಮೋದಿ ಸರ್ಕಾರದ ಯೋಜನೆಗಳು ಮತ್ತು ಅಭಿವೃದ್ಧಿಯಲ್ಲಿ ಕರ್ನಾಟಕ ಸರ್ಕಾರದ ಪಾತ್ರ ಕುರಿತು ಮಹಾರಾಷ್ಟ್ರ ಬಿಜೆಪಿ ಮಹಿಳಾ ಘಟಕದ ಅಧ್ಯಕ್ಷೆ ಚಿತ್ರಾ ವಾಘ ಮಾತನಾಡಿದರು.

ಬಿಜೆಪಿ ಅಭ್ಯರ್ಥಿ ನಾಗೇಶ ಮನ್ನೋಳ್ಕರ್, ಬಿಜೆಪಿ ಜಿಲ್ಲಾಧ್ಯಕ್ಷ ಸಂಜಯ ಪಾಟೀಲ, ಗ್ರಾಮೀಣ ಪ್ರಭಾರಿ ಕಿರಣ ಜಾಧವ, ಬಿಜೆಪಿ ಮಂಡಲ ಅಧ್ಯಕ್ಷ ಧನಂಜಯ ಜಾಧವ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಯುವರಾಜ್ ಜಾಧವ, ಮಹಿಳಾ ಮೋರ್ಚಾ ಅಧ್ಯಕ್ಷೆ ಭಾಗ್ಯ ಕೋಕಿತ್ಕರ್, ಎಸ್ಸಿ ಮೋರ್ಚಾ ಅಧ್ಯಕ್ಷ ಯಲ್ಲೇಶ್ ಕೋಲ್ಕಾರ, ಉಪ ಮೇಯರ್ ರೇಷ್ಮಾ ಪಾಟೀಲ, ಮಹಾನಗರ ಪಾಲಿಕೆ ಸದಸ್ಯರಾದ ವೀಣಾ ವಿಜಾಪುರೆ, ರೂಪಾ ಚಿಕ್ಕಲದಿನ್ನಿ, ಬಿಜೆಪಿ ಧುರೀಣ ರಾಮಚಂದ್ರ ಮನ್ನೋಳ್ಕರ ಉಪಸ್ಥಿತರಿದ್ದರು. ಬಿಜೆಪಿ ಜಿಲ್ಲಾ ಉಪಾಧ್ಯಕ್ಷೆ ಡಾ.ಸೋನಾಲಿ ಸರ್ನೋಬತ್
ನಿರೂಪಿಸಿದರು. ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.
YuvaBharataha Latest Kannada News