ರಾಮದುರ್ಗದಲ್ಲಿ ಚಿಕ್ಕರೇವಣ್ಣರನ್ನು ಗೆಲ್ಲಿಸಿ

ಯುವ ಭಾರತ ಸುದ್ದಿ ರಾಮದುರ್ಗ :
ರಾಮದುರ್ಗದಲ್ಲಿ ಭಾನುವಾರ ಬಿಜೆಪಿ ಅಭ್ಯರ್ಥಿ ಚಿಕ್ಕ ರೇವಣ್ಣ ಪರ ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಭರ್ಜರಿ ರೋಡ್ ಶೋ ನಡೆಸಿ ಮತಯಾಚಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಹಾಲುಮತ ಸಮಾಜದ ವ್ಯಕ್ತಿಯನ್ನು ಗುರುತಿಸಿ ಪಕ್ಷ ಟಿಕೆಟ್ ನೀಡಿದೆ. ಎಲ್ಲರೂ ಒಗ್ಗಟ್ಟಾಗಿ ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸುವಂತೆ ಮನವಿ ಮಾಡಿದರು.
ರಾಮದುರ್ಗದಲ್ಲಿ ಈ ಮೊದಲು ಹಾಲುಮತ ಸಮಾಜಕ್ಕೆ ಮನ್ನಣೆ ಸಿಕ್ಕಿಲ್ಲ. ಬಿಜೆಪಿ ಮಾತ್ರ ಇದೀಗ ಹಾಲುಮತ ಸಮಾಜಕ್ಕೆ ಆದ್ಯತೆ ನೀಡಿದೆ. ಎಲ್ಲರೂ ಒಂದಾಗಿ ಚಿಕ್ಕ ರೇವಣ್ಣ ಅವರನ್ನು ಗೆಲ್ಲಿಸುವ ಮೂಲಕ ಮೋದಿ ಅವರ ಕೈ ಬಲಪಡಿಸಬೇಕು ಎಂದು ಮನವಿ ಮಾಡಿದರು.
ಕೇಂದ್ರ ಮತ್ತು ರಾಜ್ಯದ ಬಿಜೆಪಿ ಆಡಳಿತ ನಡೆಸುತ್ತಿದ್ದು ಡಬಲ್ ಇಂಜಿನ್ ಸರ್ಕಾರದ ಜನಪರ ಯೋಜನೆ ಜನತೆಗೆ ತಿಳಿಸಿ ಮತ ಯಾಚಿಸುವಂತೆ ಕಾರ್ಯಕರ್ತರಿಗೆ ತಿಳಿಸಿದರು.
ಬಿಜೆಪಿ ಅಭ್ಯರ್ಥಿ ಚಿಕ್ಕ ರೇವಣ್ಣ ಮಾತನಾಡಿ,
ಕೊರೊನಾ ಹಾಗೂ ನೆರೆ ಹಾವಳಿ ಸಂದರ್ಭದಲ್ಲಿ ಮಾಡಿದ ಸೇವೆ ಗುರುತಿಸಿ ಬಿಜೆಪಿ ಈ ಬಾರಿ ನನಗೆ ಅವಕಾಶ ನೀಡಿದೆ. ಕ್ಷೇತ್ರದ ಜನರ ಸೇವೆಗೆ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಮತದಾನ ಮಾಡಿ ನನ್ನನ್ನು ಗೆಲ್ಲಿಸಿ ಎಂದು ಮನವಿ ಮಾಡಿದರು
YuvaBharataha Latest Kannada News