Breaking News

ಮೋದಗಾ ಶ್ರೀ ಸಿದ್ದೇಶ್ವರ ಜಾತ್ರೆಯಲ್ಲಿ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ : ಕಣ್ಮುಚ್ಚಿ ಕುಳಿತ ಅಧಿಕಾರಿಗಳು

Spread the love

ಮೋದಗಾ ಶ್ರೀ ಸಿದ್ದೇಶ್ವರ ಜಾತ್ರೆಯಲ್ಲಿ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ : ಕಣ್ಮುಚ್ಚಿ ಕುಳಿತ ಅಧಿಕಾರಿಗಳು

ಯುವ ಭಾರತ ಸುದ್ದಿ ಬೆಳಗಾವಿ :
ಬೆಳಗಾವಿ ಗ್ರಾಮೀಣ ಮತ ಕ್ಷೇತ್ರದ ಮೋದಗಾ ಗ್ರಾಮದ ಶ್ರೀ ಸಿದ್ದೇಶ್ವರ ಜಾತ್ರಾ ಮಹೋತ್ಸವ ಮತ್ತು ರಥೋತ್ಸವದಲ್ಲಿ ಕಾಂಗ್ರೆಸ್ ಪಕ್ಷದವರು
ರಾಜಾರೋಷವಾಗಿ ಚುನಾವಣೆ
ನೀತಿ ಸಂಹಿತೆಯನ್ನು ಉಲ್ಲಂಘನೆ ಮಾಡಿದ್ದಾರೆ.

ಜಾತ್ರೋತ್ಸವಕ್ಕೆ ಆಗಮಿಸಿದ್ದ ವಿಧಾನಪರಿಷತ್ ಸದಸ್ಯ ಹಾಗೂ ಬೆಳಗಾವಿ ಗ್ರಾಮೀಣ ಮತಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಲಕ್ಷ್ಮೀ ಹೆಬ್ಬಾಳಕರ ಅವರ ಸಹೋದರ ಚನ್ನರಾಜ ಹಟ್ಟಿಹೊಳಿ ಅವರು ಡಿಜೆ ಹಾಕಿ
ಜನರೊಂದಿಗೆ ಕುಣಿದಾಡಿದ್ದಾರೆ. ಜೊತೆಗೆ ಈ ಬಾರಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿರುವ ಲಕ್ಷ್ಮೀ ಹೆಬ್ಬಾಳಕರ ಅವರಿಗೆ ಮತ ಹಾಕಬೇಕು ಎಂದು ಮನವಿ ಮಾಡಿದ್ದಾರೆ.

ಜಾತ್ರೆಗೆ ಹೆಚ್ಚಿನ ಸಂಖ್ಯೆಯಲ್ಲಿ ಜನ ಆಗಮಿಸುತ್ತಾರೆ ಎಂದು ಗ್ರಹಿಸಿದ್ದ ಚನ್ನರಾಜ ಹಟ್ಟಿಹೊಳಿ ಸಾಗುತ್ತಿರುವ ರಥವನ್ನು ಎಳೆದು ಕೈಮುಗಿದು ಮತಯಾಚಿಸಿದರು.

ಬೆಳಗಾವಿ ಗ್ರಾಮೀಣ ಮತಕ್ಷೇತ್ರದ ಕಾಂಗ್ರೆಸ್ ಶಾಸಕಿ ಹಾಗೂ ಅಭ್ಯರ್ಥಿ ಆಗಿರುವ ಲಕ್ಷ್ಮೀ ಹೆಬ್ಬಾಳ್ಕರ್ ಅವರ ವಿರುದ್ಧ ಈ ಬಾರಿ ದೊಡ್ಡ ಪ್ರಮಾಣದಲ್ಲಿ ವಿರೋಧಿ ಅಲೆ ಇದೆ. ಈ ಹಿನ್ನೆಲೆಯಲ್ಲಿ ಅವರು ಮೇಲಿಂದ ಮೇಲೆ ಜನರನ್ನು ಆಕರ್ಷಿಸಲು ಸ್ಪಷ್ಟವಾಗಿ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಮಾಡುತ್ತಿದ್ದಾರೆ. ಆದರೆ ಚುನಾವಣಾ ಅಧಿಕಾರಿಗಳು ಮಾತ್ರ ಆಟಕ್ಕುಂಟು ಲೆಕ್ಕಕ್ಕಿಲ್ಲ ಎಂಬಂತೆ ವರ್ತಿಸುತ್ತಿದ್ದಾರೆ.

 


Spread the love

About Yuva Bharatha

Check Also

ಬಿಜೆಪಿ ಜಾರಿಗೆ ತಂದಿರುವ ರೈತ ವಿರೋಧಿ ಕೃಷಿ ಕಾಯ್ದೆಗಳ ವಿಚಾರದಲ್ಲಿ ಖಚಿತ ತೀರ್ಮಾನ ಮಾಡ್ತೀವಿ: ಸಿದ್ದರಾಮಯ್ಯ

Spread the love ಬಿಜೆಪಿ ಜಾರಿಗೆ ತಂದಿರುವ ರೈತ ವಿರೋಧಿ ಕೃಷಿ ಕಾಯ್ದೆಗಳ ವಿಚಾರದಲ್ಲಿ ಖಚಿತ ತೀರ್ಮಾನ ಮಾಡ್ತೀವಿ: ಸಿದ್ದರಾಮಯ್ಯ …

Leave a Reply

Your email address will not be published. Required fields are marked *

20 + 17 =