Breaking News

ಬ್ರೀಟಿಷರು ನಡೆಸಿದ ಒಡೆದು ಆಳುವ ನೀತಿಯನ್ನು ಕಾಂಗ್ರೇಸ್ ಪಕ್ಷ ಅನುಸರಿಸಿಕೊಂಡು ಬಂದಿದೆ-ರಮೇಶ ಜಾರಕಿಹೊಳಿ

Spread the love

ಬ್ರೀಟಿಷರು ನಡೆಸಿದ ಒಡೆದು ಆಳುವ ನೀತಿಯನ್ನು ಕಾಂಗ್ರೇಸ್ ಪಕ್ಷ ಅನುಸರಿಸಿಕೊಂಡು ಬಂದಿದೆ-ರಮೇಶ ಜಾರಕಿಹೊಳಿ


ಗೋಕಾಕ: ಕಾಂಗ್ರೇಸ್ ಪಕ್ಷ ಜಾತಿ ಜಾತಿಗಳ ನಡುವೆ ಜಗಳ ಹಚ್ಚುವ ಮೂಲಕ ನಿಜವಾದ ಕೋಮುವಾದಿ ಪಕ್ಷವಾಗಿದೆ. ಈ ಹಿಂದೆ ಬ್ರೀಟಿಷರು ನಡೆಸಿದ ಒಡೆದು ಆಳುವ ನೀತಿಯನ್ನು ಕಾಂಗ್ರೇಸ್ ಪಕ್ಷ ಅನುಸರಿಸಿಕೊಂಡು ಬಂದಿದ್ದು ದಲಿರ ಅಲ್ಪಸಂಖ್ಯಾತರ ಅಭಿವೃದ್ಧಿಗೆ ಶ್ರಮಿಸಿಲ್ಲ. ಎಲ್ಲ ಸಮುದಾಯಗಳ ಅಭಿವೃದ್ಧಿಗೆ ಶ್ರಮಿಸುತ್ತಿರುವ ಬಿಜೆಪಿ ಪಕ್ಷವನ್ನು ಬೆಂಬಲಿಸುವAತೆ ಶಾಸಕ, ಬಿಜೆಪಿ ಅಭ್ಯರ್ಥಿ ರಮೇಶ ಜಾರಕಿಹೊಳಿ ಹೇಳಿದರು.
ಅವರು, ಸೋಮವಾರದಂದು ಗೋಕಾಕ ಮತಕ್ಷೇತ್ರದ ಅಂಕಲಗಿ ಪಟ್ಟಣದಲ್ಲಿ ಮತಯಾಚನೆ ನಡೆಸಿ ಮಾತನಾಡಿ, ನನ್ನ ಅಧಿಕಾರವಧಿಯಲ್ಲಿ ಎಲ್ಲ ಸಮುದಾಯಗಳನ್ನು ಸಮಾನ ದೃಷ್ಟಿಯಿಂದ ನೋಡುತ್ತ ಅವರ ಅಭಿವೃದ್ಧಿಗೆ ಶ್ರಮಿಸಿದ್ದೇನೆ. ಕ್ಷೇತ್ರದ ಜನತೆಗೆ ಎಲ್ಲ ರೀತಿಯ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಿ ಸೌಹಾರ್ದಯುತವಾದ ವಾತಾವರಣವನ್ನು ಕ್ಷೇತ್ರದಲ್ಲಿ ನಿರ್ಮಿಸಿದ್ದೇನೆ ಎಂದು ತಿಳಿಸಿದರು.
ಶಿಸ್ತುಬದ್ಧ ಹಾಗೂ ನುಡಿದಂತೆ ನಡೆದು ರಾಜ್ಯ ಹಾಗೂ ರಾಷ್ಟçದ ಅಭಿವೃದ್ಧಿಗೆ ಶ್ರಮಿಸುತ್ತಿರುವ ಬಿಜೆಪಿ ಪಕ್ಷಕ್ಕೆ ತಾವುಗಳ ಬೆಂಬಲಿಸಬೇಕು. ಕಾಂಗ್ರೇಸ್ ಪಕ್ಷ ಮುಳುಗುತ್ತಿದ್ದು, ಕೇವಲ ಸುಳ್ಳು ಭರವಸೆಗಳನ್ನು ನೀಡಿ ಮತದಾರರನ್ನು ಮೋಸಗೊಳಿಸುವ ಪಕ್ಷಕ್ಕೆ ಮಾರುಹೋಗದೇ ಬಿಜೆಪಿ ಪಕ್ಷಕ್ಕೆ ತಮ್ಮ ಮತವನ್ನು ನೀಡಿ, ಮತ್ತೊಮ್ಮೆ ಬಿಜೆಪಿ ಸರಕಾರ ರಾಜ್ಯದಲ್ಲಿ ಅಧಿಕಾರಕ್ಕೆ ತರಲು ಸಹಕರಿಸುವಂತೆ ಮನವಿ ಮಾಡಿದರು.
ಗೋಕಾಕ ಮತಕ್ಷೇತ್ರದ ಅಭಿವೃದ್ಧಿಗೆ ನಾನು ಬದ್ಧನಿದ್ದು ಬರುವ ಮೇ ೧೦ರಂದು ಬಿಜೆಪಿಗೆ ಮತ ನೀಡುವ ಮೂಲಕ ನನ್ನನ್ನು ಶಾಸಕನನ್ನಾಗಿ ಏಳನೇ ಬಾರಿಗೆ ಆಯ್ಕೆ ಮಾಡಿ ತಮ್ಮ ಸೇವೆ ಮಾಡುವ ಅವಕಾಶ ನೀಡುವಂತೆ ಕೋರಿದರು.
ಗೋಕಾಕ ಮತಕ್ಷೇತ್ರದ ಹನಮಾಪೂರ, ಹುಲಿಕಟ್ಟಿ, ಕೊಳವಿ, ತವಗ, ಕನಸಗೇರಿ, ಬೆಣಚಿನಮರ್ಡಿ(ಉ), ಶಿಗಿಹೋಳಿ, ಗಡ್ಡಿಹೊಳಿ, ಕುಂದರಗಿ, ದಾಸನಟ್ಟಿ ಡುಮ್ಮಉರುಬಿನಹಟ್ಟಿ ಗ್ರಾಮಗಳಲ್ಲಿ ಮನೆ ಮನೆಗೆ ಮತಯಾಚನೆ ಮಾಡಿದರು. ಬಿಜೆಪಿ ಅಭ್ಯರ್ಥಿ ರಮೇಶ ಜಾರಕಿಹೊಳಿ ಅವರು ಗ್ರಾಮಕ್ಕೆ ಆಗಮಿಸುತ್ತಿದ್ದಂತೆ ಮಹಿಳೆಯರು ಸ್ವಯಂ ಪ್ರೇರಿತರಾಗಿ ಆರತಿ ಬೆಳಗಿ ಹೂಮಳೆ ಗೈದು ಸ್ವಾಗತಿಸಿದರು.
ಈ ಸಂದರ್ಭದಲ್ಲಿ ಪಟ್ಟಣ ಪಂಚಾಯತ ಅಧ್ಯಕ್ಷರು-ಸದಸ್ಯರು, ಗ್ರಾಮ ಪಂಚಾಯತ-ಅಧ್ಯಕ್ಷರು ಸದಸ್ಯರು ಜನಪ್ರತಿನಿಧಿಗಳು, ಗ್ರಾಮಗಳ ಹಿರಿಯರು, ಬಿಜೆಪಿ ಕಾರ್ಯಕರ್ತರು, ರಮೇಶ ಜಾರಕಿಹೊಳಿ ಅಭಿಮಾನಿಗಳು ಹಾಗು ಗ್ರಾಮಸ್ಥರು ಉಪಸ್ಥಿತರಿದ್ದರು.


Spread the love

About Yuva Bharatha

Check Also

ಬೋರಗಾಂವ ಪಟ್ಟಣದ ಶ್ರೀ ಅರಿಹಂತ ಕೋ,ಆಪ್ ಸೌಹಾರ್ಧ ಸಹಕಾರಿ ಬ್ಯಾಂಕ ವಿರುದ್ಧ ರೈತರ ಪ್ರತಿಭಟನೆ ಬ್ಯಾಂಕ ವ್ಯವಸ್ಥಾಪಕರಿಗೆ ಮನವಿ ಸಲ್ಲಿಕೆ.!

Spread the loveಬೋರಗಾಂವ ಪಟ್ಟಣದ ಶ್ರೀ ಅರಿಹಂತ ಕೋ,ಆಪ್ ಸೌಹಾರ್ಧ ಸಹಕಾರಿ ಬ್ಯಾಂಕ ವಿರುದ್ಧ ರೈತರ ಪ್ರತಿಭಟನೆ ಬ್ಯಾಂಕ ವ್ಯವಸ್ಥಾಪಕರಿಗೆ …

Leave a Reply

Your email address will not be published. Required fields are marked *

5 − 2 =