ಕೋಡಿಮಠ ಶ್ರೀಗಳ ಭವಿಷ್ಯ ಏನಾಗಬಹುದು ?

ಯುವ ಭಾರತ ಸುದ್ದಿ ಹಾಸನ :
ಎರಡು ತಿಂಗಳ ಹಿಂದೆ ರಾಜ್ಯದ ರಾಜಕೀಯ ಭವಿಷ್ಯದ ಬಗ್ಗೆ ಕೋಡಿಮಠ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮಿಜಿ ನೀಡಿದ್ದ ಹೇಳಿಕೆ ಈಗ ಮತ್ತೆ ಮುನ್ನೆಲೆಗೆ ಬಂದಿದೆ. ರಾಜ್ಯದಲ್ಲಿ ಒಂದು ಪಕ್ಷ ಮಾತ್ರ ಅಧಿಕಾರಕ್ಕೆ ಬರುತ್ತದೆ.
ಸಮ್ಮಿಶ್ರ ಸರ್ಕಾರ ಅಧಿಕಾರ ಮಾಡಲ್ಲ ಎಂದು ಜನವರಿಯಲ್ಲಿ ಶ್ರೀಗಳು ಸ್ಪಷ್ಟ ಮಾತುಗಳಲ್ಲಿ ಹೇಳಿದ್ದರು.
ಎರಡು ಮೂರು ದೊಡ್ಡ ದೊಡ್ಡ ತಲೆಗಳು ಉರುಳುತ್ತವೆ ಎಂದೂ ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಭವಿಷ್ಯ ನುಡಿದಿದ್ದರು. ರಾಜ್ಯದಲ್ಲಿ ರಾಜಕೀಯ ಅಸ್ಥಿರತೆ ಇದೆ. ಚುನಾವಣೆವರೆಗೂ ಪಕ್ಷಾಂತರಗಳು ಇರುತ್ತವೆ. ಪಕ್ಷಗಳು ಕೂಡಿ ಹೋಗುವುದು ಕಷ್ಟ . ಚುನಾವಣೆವರೆಗೂ ಏನು ಹೇಳುವುದಕ್ಕೆ ಆಗುವುದಿಲ್ಲ . ಎಲ್ಲ ಡಿವೈಡ್ ಆಗುವ ಲಕ್ಷಣ ಇದೆ . ಆದರೂ ಒಂದು ಪಕ್ಷ ಅಧಿಕಾರಕ್ಕೆ ಬರುತ್ತದೆ ಎಂದು ಬಾಗಲಕೋಟೆ ಜಿಲ್ಲೆ ಜಮಖಂಡಿಯಲ್ಲಿ ಫೆಬ್ರವರಿಯಲ್ಲಿ ಕೋಡಿಮಠ ಶ್ರೀ ಹೇಳಿದ್ದರು.
YuvaBharataha Latest Kannada News