ಸಿಎಂ ಆಯ್ಕೆ ಪ್ರಕ್ರಿಯೆ ಜೋರು !
ಬೆಂಗಳೂರು:
ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮತ್ತು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಪಟ್ಟಕ್ಕೆ ಪಟ್ಟು ಹಿಡಿದ ಕಾರಣ ಕಾಂಗ್ರೆಸ್ ಶಾಸಕಾಂಗ ಪಕ್ಷದ (ಸಿಎಲ್‌ಪಿ) ನಾಯಕನ ಆಯ್ಕೆಗಾಗಿ ಭಾನುವಾರ ನಡೆದ ಸಭೆಯಲ್ಲಿ ಒಮ್ಮತದ ತೀರ್ಮಾನ ಸಾಧ್ಯವಾಗಿಲ್ಲ. ಹೀಗಾಗಿ, ಆಯ್ಕೆಯನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಬಿಡಲು ನಿರ್ಧರಿಸಲಾಗಿದೆ.
ವಸಂತ ನಗರದಲ್ಲಿರುವ ಶಾಂಗ್ರಿ–ಲಾ ಹೋಟೆಲ್‌ನಲ್ಲಿ ಸಭೆ ನಡೆಯಿತು. ಖರ್ಗೆ ಅವರ ನಿರ್ದೇಶನದಂತೆ ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಸುಶೀಲ್‌ಕುಮಾರ್ ಶಿಂದೆ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಸಿಂಗ್ ಮತ್ತು ಮಾಜಿ ಪ್ರಧಾನ ಕಾರ್ಯದರ್ಶಿ ದೀಪಕ್ ಬಾಬರಿಯಾ ವೀಕ್ಷಕರಾಗಿ ಬಂದಿದ್ದರು.
ಸಭೆಯ ಬಳಿಕ ಮಾತನಾಡಿದ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ, ‘ಶಾಸಕಾಂಗ ಪಕ್ಷದ ನಾಯಕನ ಆಯ್ಕೆಯನ್ನು ಎಐಸಿಸಿ ಅಧ್ಯಕ್ಷರಿಗೆ ಬಿಡುವ ಒಂದು ಸಾಲಿನ ನಿರ್ಣಯವನ್ನು ಸಿದ್ದರಾಮಯ್ಯ ಮಂಡಿಸಿದರು. ಆ ನಿರ್ಣಯವನ್ನು ಶಿವಕುಮಾರ್ ಸೇರಿ ಎಲ್ಲರೂ ಅನುಮೋದಿಸಿದರು’ ಎಂದರು.
‘ಎಐಸಿಸಿ ವೀಕ್ಷಕರು ಎಲ್ಲ ಶಾಸಕರಿಂದ ವೈಯಕ್ತಿಕವಾಗಿ ಅಭಿಪ್ರಾಯ ಸಂಗ್ರಹಿಸಲಿದ್ದಾರೆ. ಆ ವರದಿಯನ್ನು ಮಲ್ಲಿಕಾರ್ಜುನ ಖರ್ಗೆ ಅವರಿಗೆ ವೀಕ್ಷಕರು ಸೋಮವಾರ ಸಲ್ಲಿಸಲಿದ್ದಾರೆ’ ಎಂದೂ ಅವರು ಹೇಳಿದರು.
ಸಿಎಲ್‌ಪಿ ನಾಯಕ ಹುದ್ದೆಗೆ ಸಿದ್ದರಾಮಯ್ಯ ಮತ್ತು ಶಿವಕುಮಾರ್ ಇಬ್ಬರ ಪರವೂ ಶಾಸಕರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಆದರೆ, ಮುಂದಿನ ಐದು ವರ್ಷಗಳ ಸುಗಮ ಆಡಳಿತಕ್ಕೆ ಆಂತರಿಕವಾಗಿ ಸಿದ್ಧಪಡಿಸಿಕೊಂಡ ‘ಸೂತ್ರ’ದಂತೆ ಶಾಸಕಾಂಗ ಪಕ್ಷದ ನಾಯಕನಾಗಿ ಸಿದ್ದರಾಮಯ್ಯ ಅವರನ್ನು ವರಿಷ್ಠರು ಆಯ್ಕೆ ಮಾಡುವ ಸಾಧ್ಯತೆ ಹೆಚ್ಚಿದೆ ಎಂದು ಕಾಂಗ್ರೆಸ್ ಮೂಲಗಳು ಹೇಳಿವೆ.
ವಿಧಾನಸಭೆ ಚುನಾವಣೆಯಲ್ಲಿ 135 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆದ್ದಿದೆ. ಅಲ್ಲದೆ, ಕಾಂಗ್ರೆಸ್ ಬೆಂಬಲಿತ ಕರ್ನಾಟಕ ಸರ್ವೋದಯ ಪಕ್ಷದಿಂದ ಮೇಲುಕೋಟೆ ಕ್ಷೇತ್ರದಿಂದ ಆಯ್ಕೆಯಾದ ದರ್ಶನ್ ಪುಟ್ಟಣ್ಣಯ್ಯ, ಪಕ್ಷೇತರ ಅಭ್ಯರ್ಥಿಯಾಗಿ ಹರಪನಹಳ್ಳಿಯಿಂದ ಗೆದ್ದಿರುವ ಲತಾ ಮಲ್ಲಿಕಾರ್ಜುನ ಮತ್ತು ಗೌರಿಬಿದನೂರು ಕ್ಷೇತ್ರದಿಂದ ಚುನಾಯಿತರಾಗಿರುವ ಪುಟ್ಟಸ್ವಾಮಿಗೌಡ ಅವರು ಕಾಂಗ್ರೆಸ್‌ಗೆ ಬೆಂಬಲ ಘೋಷಿಸಿದ್ದಾರೆ.
ಕಾಂಗ್ರೆಸ್ ಪಾಳಯದಲ್ಲಿ ಭಾನುವಾರ ಇಡೀ ದಿನ ಸರ್ಕಾರ ರಚನೆಗೆ ಕಸರತ್ತು ನಡೆಯಿತು. ಮುಖ್ಯಮಂತ್ರಿ ಗಾದಿಗೆ ಪೈಪೋಟಿಯಲ್ಲಿರುವ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮತ್ತು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಅಧ್ಯಕ್ಷ ಶಿವಕುಮಾರ್ ಅವರ ನಿವಾಸಗಳು ರಾಜಕೀಯ ಚಟುವಟಿಕೆಗಳ ಕೇಂದ್ರಗಳಾದವು.
ಶಾಸಕಾಂಗ ಪಕ್ಷದ ಸಭೆಗೂ ಮೊದಲೇ, ಭಾನುವಾರ ಮಧ್ಯಾಹ್ನ ದೆಹಲಿಗೆ ತೆರಳಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಅಲ್ಲಿಗೆ ತಲುಪುತ್ತಿದ್ದಂತೆ ಸಿಎಲ್‌ಪಿ ನಾಯಕನ ಆಯ್ಕೆಗೆ ಮೂವರು ವೀಕ್ಷಕರನ್ನು ನಿಯೋಜಿಸಿದ್ದರು.
ಸಭೆಗೆ ಹಾಜರಾಗಲು ಶಾಂಗ್ರಿ–ಲಾ ಹೋಟೆಲ್‌ಗೆ ವೀಕ್ಷಕರು ಬರುತ್ತಿದ್ದಂತೆ ಭಾರಿ ಸಂಖ್ಯೆಯಲ್ಲಿ ಸೇರಿದ್ದ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಬೆಂಬಲಿಗರು, ಅಭಿಮಾನಿಗಳು ತಮ್ಮ ನಾಯಕರ ಪರ ಶಕ್ತಿ ಪ್ರದರ್ಶನ ಮಾಡಿದರು. ಅಲ್ಲದೆ, ಭಾವಚಿತ್ರ ಹಿಡಿದು ಮುಖ್ಯಮಂತ್ರಿ ಮಾಡುವಂತೆ ಘೋಷಣೆ ಕೂಗಿದರು.
ಶಾಸಕಾಂಗ ಸಭೆಗೂ ಮೊದಲು ಸಿದ್ದರಾಮಯ್ಯ ಮತ್ತು ಶಿವಕುಮಾರ್ ತಮ್ಮ ಆಪ್ತ ಶಾಸಕರ ಜೊತೆ ಪ್ರತ್ಯೇಕವಾಗಿ ಸಮಾಲೋಚನೆ ನಡೆಸಿದರು. ಶಾಸಕರಾದ ಎಂ.ಬಿ. ಪಾಟೀಲ, ಕೆ.ಜೆ. ಜಾರ್ಜ್, ಆರ್.ವಿ. ದೇಶಪಾಂಡೆ, ಬೈರತಿ ಸುರೇಶ್ ಮುಂತಾದವರ ಜೊತೆ ಸಿದ್ದರಾಮಯ್ಯ ಚರ್ಚೆ ನಡೆಸಿದರು.
ಕಾಂಗ್ರೆಸ್ ಪಾಳಯದಲ್ಲಿ ಭಾನು ವಾರ ಇಡೀ ದಿನ ಸರ್ಕಾರ ರಚನೆಗೆ ಕಸರತ್ತು ನಡೆಯಿತು. ಮುಖ್ಯಮಂತ್ರಿ ಗಾದಿಗೆ ಪೈಪೋಟಿಯಲ್ಲಿರುವ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮತ್ತು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಅಧ್ಯಕ್ಷ ಶಿವಕುಮಾರ್ ಅವರ ನಿವಾಸಗಳು ರಾಜಕೀಯ ಚಟುವಟಿಕೆಗಳ ಕೇಂದ್ರಗಳಾದವು.
ಶಾಸಕಾಂಗ ಪಕ್ಷದ ಸಭೆಗೂ ಮೊದಲೇ, ಭಾನುವಾರ ಮಧ್ಯಾಹ್ನ ದೆಹಲಿಗೆ ತೆರಳಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಅಲ್ಲಿಗೆ ತಲುಪುತ್ತಿದ್ದಂತೆ ಸಿಎಲ್‌ಪಿ ನಾಯಕನ ಆಯ್ಕೆಗೆ ಮೂವರು ವೀಕ್ಷಕರನ್ನು ನಿಯೋಜಿಸಿದ್ದರು. ಚುನಾವಣೆಗೂ ಮೊದಲೇ ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ನಡುವೆ ಮುಖ್ಯಮಂತ್ರಿ ಹುದ್ದೆಗೆ ಭಾರಿ ಪೈಪೋಟಿ ನಡೆದಿತ್ತು. ಇಬ್ಬರನ್ನು ಸಮಾಧಾನಪಡಿಸಿದ್ದ ಕಾಂಗ್ರೆಸ್ ವರಿಷ್ಠರು, ಒಗ್ಗಟ್ಟಿನಿಂದ ಚುನಾವಣೆ ಎದುರಿಸುವಂತೆ ಮಾಡುವಲ್ಲಿ ಯಶಸ್ವಿಯಾಗಿದ್ದರು.
ಡಿಕೆಶಿ, ಸಿದ್ದರಾಮಯ್ಯ ಪರ ಘೋಷಣೆ: ಸಭೆಗೆ ಹಾಜರಾಗಲು ಶಾಂಗ್ರಿ–ಲಾ ಹೋಟೆಲ್‌ಗೆ ವೀಕ್ಷಕರು ಬರುತ್ತಿದ್ದಂತೆ ಭಾರಿ ಸಂಖ್ಯೆಯಲ್ಲಿ ಸೇರಿದ್ದ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಬೆಂಬಲಿಗರು, ಅಭಿಮಾನಿಗಳು ತಮ್ಮ ನಾಯಕರ ಪರ ಶಕ್ತಿ ಪ್ರದರ್ಶನ ಮಾಡಿದರು. ಅಲ್ಲದೆ, ಭಾವಚಿತ್ರ ಹಿಡಿದು ಮುಖ್ಯಮಂತ್ರಿ ಮಾಡುವಂತೆ ಘೋಷಣೆ ಕೂಗಿದರು.
ಪ್ರತ್ಯೇಕ ಸಭೆ: ಶಾಸಕಾಂಗ ಸಭೆಗೂ ಮೊದಲು ಸಿದ್ದರಾಮಯ್ಯ ಮತ್ತು ಶಿವಕುಮಾರ್ ತಮ್ಮ ಆಪ್ತ ಶಾಸಕರ ಜೊತೆ ಪ್ರತ್ಯೇಕವಾಗಿ ಸಮಾಲೋಚನೆ ನಡೆಸಿದರು. ಶಾಸಕರಾದ ಎಂ.ಬಿ. ಪಾಟೀಲ, ಕೆ.ಜೆ. ಜಾರ್ಜ್, ಆರ್.ವಿ. ದೇಶಪಾಂಡೆ, ಬೈರತಿ ಸುರೇಶ್ ಮುಂತಾದವರ ಜೊತೆ ಸಿದ್ದರಾಮಯ್ಯ ಚರ್ಚೆ ನಡೆಸಿದರು.
ಸಿಎಲ್‌ಪಿ ಸಭೆ ಆರಂಭಕ್ಕೂ ಮೊದಲು ವೀಕ್ಷಕರ ಜೊತೆ ರಣದೀಪ್ ಸಿಂಗ್ ಸುರ್ಜೇವಾಲಾ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮತ್ತು ಸಿದ್ದರಾಮಯ್ಯ ಮಾತುಕತೆ ನಡೆಸಿದರು. ಈ ವೇಳೆ ಮುಖ್ಯಮಂತ್ರಿ ಆಯ್ಕೆ ಬಿಕ್ಕಟ್ಟಿನ ಕುರಿತು ನಾಯಕರು ಚರ್ಚೆ ನಡೆಸಿದ್ದು ಈ ವಿಷಯವನ್ನು ಹೈಕಮಾಂಡ್‌ಗೆ ಬಿಡಲು ನಿರ್ಧರಿಸಿದರು ಎಂದೂ ಮೂಲಗಳು ತಿಳಿಸಿವೆ. ಕೆಲವೇ ಗಂಟೆಗಳಲ್ಲಿ ಸಿಎಲ್‌ಪಿ ಸಭೆ ಅಂತ್ಯವಾಗಿದೆ.
ಡಿಕೆಶಿ ಪರ ಒಕ್ಕಲಿಗ ಮಠಾಧೀಶರ ಒತ್ತಡ ಡಿ.ಕೆ.ಶಿವಕುಮಾರ್ ಅವರನ್ನೇ ಮುಖ್ಯಮಂತ್ರಿ ಮಾಡಬೇಕು ಎಂದು ಒಕ್ಕಲಿಗ ಮಠಾಧೀಶರು ಮತ್ತು ಒಕ್ಕಲಿಗರ ಸಂಘದ ಪದಾಧಿಕಾರಿಗಳು ಒತ್ತಾಯಿಸಿದ್ದಾರೆ. ಭಾನುವಾರ ಆದಿಚುಂಚನಗಿರಿ ಮಠದ ಸಭಾಂಗಣದಲ್ಲಿ ಒಕ್ಕಲಿಗರ ಸಂಘದ ಪದಾಧಿಕಾರಿಗಳು ಆಯೋಜಿಸಿದ್ದ ಸಭೆಯಲ್ಲಿ ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ನಿರ್ಮಲಾನಂದನಾಥ ಸ್ವಾಮೀಜಿ ಪಟ್ಟನಾಯಕನಹಳ್ಳಿಯ ಸ್ಫಟಿಕಪುರಿ ಸಂಸ್ಥಾನ ಮಠದ ನಂಜಾವಧೂತ ಸ್ವಾಮೀಜಿ ಅವರು ‘ಪಕ್ಷವನ್ನು ಅಧಿಕಾರಕ್ಕೆ ತರಲು ಹಗಲಿರುಳು ಶ್ರಮಿಸಿರುವ ಶಿವಕುಮಾರ್‌ಗೆ ಮುಖ್ಯಮಂತ್ರಿ ಸ್ಥಾನ ನೀಡಬೇಕು’ ಎಂದು ಒತ್ತಾಯಿಸಿದರು.