ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾಗಿ ಸಿದ್ದರಾಮಯ್ಯ ಆಯ್ಕೆ

ಯುವ ಭಾರತ ಸುದ್ದಿ ಬೆಂಗಳೂರು:
ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾಗಿ ನಿರೀಕ್ಷೆಯಂತೆ ಸಿದ್ದರಾಮಯ್ಯ ಆಯ್ಕೆಯಾಗಿದ್ದಾರೆ.
ಗುರುವಾರ ಬೆಂಗಳೂರಿನ ಕ್ವಿನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ನಡೆದ ಶಾಸಕಾಂಗ ಪಕ್ಷದ ಸಭೆಯಲ್ಲಿ, ಈ ತೀರ್ಮಾನ ತೆಗೆದುಕೊಳ್ಳಲಾಯಿತು.
ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್ ಅವರು ಸಿಎಲ್‌ಪಿ ನಾಯಕರಾಗಿ ಸಿದ್ದರಾಮಯ್ಯ ಅವರ ಹೆಸರನ್ನು ಪ್ರಸ್ತಾಪಿಸಿದರು.
ಶಾಸಕರಾದ ಡಾ. ಪರಮೇಶ್ವರ್, ಆರ್.ವಿ ದೇಶಪಾಂಡೆ, ಎಚ್.ಕೆ ಪಾಟೀಲ, ಎಂ.ಬಿ ಪಾಟೀಲ ಹಾಗೂ ಲಕ್ಷ್ಮೀ ಹೆಬ್ಬಾಳಕರ್, ತನ್ವೀರ್ ಸೇಠ್, ಕೆ.ಎಚ್ ಮುನಿಯಪ್ಪ ಸೇರಿದಂತೆ ಹಲವು ಶಾಸಕರು ಅನುಮೋದಿಸಿರು.
ಈ ಪ್ರಸ್ತಾವಕ್ಕೆ ಶಾಸಕಾಂಗ ಪಕ್ಷವು ಅನುಮೋದನೆ ನೀಡಿತು.
YuvaBharataha Latest Kannada News