ನಾಪತ್ತೆಯಾಗಿದ್ದ ಒಂದೇ ಗ್ರಾಮದ ನಾಲ್ವರು ಮಕ್ಕಳು ಹಾಸನದಲ್ಲಿ ಪತ್ತೆ !

ಹಾಸನ:
ತುಮಕೂರು ಜಿಲ್ಲೆಯ ಶಿರಾ ತಾಲೂಕಿನಿಂದ ನಾಪತ್ತೆಯಾಗಿದ್ದ ನಾಲ್ವರು ಮಕ್ಕಳು ಹಾಸನದಲ್ಲಿ ಪತ್ತೆಯಾಗಿದ್ದಾರೆ.
ಮೇ 20ರಂದು ನಾಲ್ವರು ಮಕ್ಕಳು ಹೇಳದೆ ಕೇಳದೆ ಮನೆಬಿಟ್ಟು ಬೆಂಗಳೂರಿಗೆ ಆಗಮಿಸಿದ್ದಾರೆ. ಇತ್ತ ನಮ್ಮ ಮಕ್ಕಳು ಕಾಣಿಸುತ್ತಿಲ್ಲ ಎಂದು ಪೋಷಕರು ಪಟ್ನಾಯಕನಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಪೊಲೀಸರು ಮಿಸ್ಸಿಂಗ್ ಕೇಸ್ ದಾಖಲಿಸಿ ತನಿಖೆ ಆರಂಭಿಸಿದ್ದಾರೆ.
ನಾಲ್ವರು ಮಕ್ಕಳು ಬೆಂಗಳೂರಿಗೆ ಹೋಗಿ ಅಲ್ಲಿ ಸುತ್ತಾಟ ನಡೆಸಿ, ಬಳಿಕ ಬೆಂಗಳೂರಿನಿಂದ ಹಾಸನಕ್ಕೆ ತೆರಳಿದ್ದರು. ಇದೀಗ ಹುಡುಕಾಟ ನಡೆಸುತ್ತಿದ್ದ ಪೊಲೀಸರಿಗೆ ಹಾಸನದ ಬಸ್ ನಿಲ್ದಾಣದಲ್ಲಿ ನಾಲ್ವರು ಮಕ್ಕಳು ಪತ್ತೆಯಾಗಿದ್ದಾರೆ. ಪೊಲೀಸರು ವಿಚಾರಣೆ ನಡೆಸಿದಾಗ ಮಕ್ಕಳು ಶಿರಾದಿಂದ ತಪ್ಪಿಸಿ ಬಂದಿರುವುದಾಗಿ ಬಾಯಿಬಿಟ್ಟಿದ್ದಾರೆ. ಕೂಡಲೇ ಹಾಸನ ಪೊಲೀಸರು ಪಟ್ನಾಯಕನಹಳ್ಳಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಅದರಂತೆ ಹಾಸನಕ್ಕೆ ಆಗಮಿಸಿದ ಪೊಲೀಸರು ಮಕ್ಕಳನ್ನು ವಶಕ್ಕೆ ಪಡೆದು ಶಿರಾಕ್ಕೆ ಕರೆದುಕೊಂಡು ಹೋಗಿದ್ದು, ಸಂಜೆ ಸುಮಾರು 7 ಗಂಟೆ ಹೊತ್ತಿಗೆ ತಲುಪಲಿದ್ದಾರೆ.
YuvaBharataha Latest Kannada News