ವಾರದಲ್ಲೇ ವಾಕ್ಸಮರ : ಎಂ.ಬಿ. ಪಾಟೀಲ್ ಹೇಳಿಕೆಗೆ ಡಿಸಿಎಂ ಡಿ ಕೆ ಶಿವಕುಮಾರ್ ತಿರುಗೇಟು

ಬೆಂಗಳೂರು :
ಯಾರಾದರೂ ಏನು ಬೇಕಾದರೂ ಹೇಳಿಕೊಳ್ಳಲಿ. ನಾನು ಆ ಬಗ್ಗೆ ಏನೂ ಮಾತಾಡುವುದಿಲ್ಲ. ಅಧಿಕಾರ ಮತ್ತಿತರ ಪಕ್ಷದ ವಿಚಾರಗಳನ್ನು ನೋಡಿಕೊಳ್ಳಲು ಎಐಸಿಸಿ ಇದೆ. ಕಾಂಗ್ರೆಸ್ ರಾಷ್ಟ್ರೀಯ ಮುಖಂಡರು ಇದ್ದಾರೆ. ರಾಜ್ಯದ ಸರ್ವತೋಮುಖ ಅಭಿವೃದ್ಧಿಗೆ ಮಾತ್ರ ನಮ್ಮ ಆದ್ಯತೆ ಎಂದು ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿ ಕೆ ಶಿವಕುಮಾರ್ ಹೇಳಿದ್ದಾರೆ.
ಸಿದ್ದರಾಮಯ್ಯ ಅವರೇ ಮುಂದಿನ ಐದು ವರ್ಷವೂ ಮುಖ್ಯಮಂತ್ರಿಯಾಗಿ ಮುಂದುವರೆಯಲಿದ್ದಾರೆ, ಸಿಎಂ ಅಧಿಕಾರ ಹಂಚಿಕೆ ಪ್ರಶ್ನೆಯೇ ಇಲ್ಲ. ಈ ಬಗ್ಗೆ ಯಾವುದೇ ಚರ್ಚೆ ಆಗಿಲ್ಲ ಎಂದು ಸಚಿವ ಎಂ ಬಿ ಪಾಟೀಲ್ ಹೇಳಿದ್ದಾರಲ್ಲ ಎಂದು ಮಾಧ್ಯಮದವರು ವಿಧಾನಸೌಧದ ಬಳಿ ಮಾಧ್ಯಮದವರು ಗಮನ ಸೆಳೆದಾಗ ಶಿವಕುಮಾರ್ ಅವರು ಈ ರೀತಿ ಪ್ರತಿಕ್ರಿಯಿಸಿದರು.
YuvaBharataha Latest Kannada News