Breaking News

ಸದ್ಯವೇ ಸಂಪುಟ ವಿಸ್ತರಣೆ ?

Spread the love

ಸದ್ಯವೇ ಸಂಪುಟ ವಿಸ್ತರಣೆ ?

ಬೆಂಗಳೂರು :
ಸಚಿವ ಸಂಪುಟ ವಿಸ್ತರಣೆ ಕುರಿತು ಚರ್ಚೆ ನಡೆಸಲು ಮುಖ್ಯಮಂತ್ರಿ ಸಿದ್ದರಾಮಯ್ಯ , ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರು ಬುಧವಾರ ಸಂಜೆ ದೆಹಲಿಗೆ ಪ್ರಯಾಣ ಬೆಳಸಲಿದ್ದಾರೆ ಎಂದು ವರದಿಯಾಗಿದೆ.

ಸಂಜೆ 6 ಗಂಟೆ ಸುಮಾರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಒಟ್ಟಾಗಿಯೇ ವಿಮಾನದ ಮೂಲಕ ದೆಹಲಿಗೆ ತೆರಳಲಿದ್ದು, ಹೈಕಮಾಂಡ್ ನಾಯಕರ ಜೊತೆ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ ನಡೆಸಲಿದ್ದಾರೆ ಎಂದು ಎನ್ನಲಾಗಿದೆ.

ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಜೊತೆಗೆ ಮೊದಲ ಹಂತದಲ್ಲಿ 8 ಮಂದಿ ಸಚಿವರು ಪ್ರಮಾಣ ವಚನ ಸ್ವೀಕರಿಸಿದ್ದಾರೆ.ಮೇ 20ರ ಶನಿವಾರ ಪ್ರಮಾಣ ವಚನ ಸ್ವೀಕಾರ ಮಾಡಿದ ಸಚಿವರಿಗೆ ಇನ್ನೂ ಖಾತೆ ಹಂಚಿಕೆಯಾಗಿಲ್ಲ. ಶಾಸಕರು ಸಂಪುಟ ವಿಸ್ತರಣೆ ಯಾವಾಗ ಎಂದು ಕಾಯುತ್ತಿದ್ದಾರೆ. ಸಚಿವರಾದವರು ಯಾವ ಖಾತೆ ಸಿಗಲಿದೆ ಎಂದು ಕಾದು ಕುಳಿತಿದ್ದಾರೆ. ಬಾಕಿ ಇರುವ 24 ಸಚಿವ ಸ್ಥಾನಗಳಿಗೆ ಶಾಸಕರನ್ನು ಆಯ್ಕೆ ಮಾಡಿಕೊಳ್ಳಲು ತೀವ್ರ ಪೈಪೋಟಿ ನಡೆದಿದೆ.

ಮೊದಲ ಹಂತದ ಸಂಪುಟ ರಚನೆಯಲ್ಲಿ ಸಿದ್ದರಾಮಯ್ಯ ಅವರ ಕೈ ಮೇಲಾಗಿದೆ. ಹೈಕಮಾಂಡ್ ಹಾಗೂ ಡಿ.ಕೆ.ಶಿವಕುಮಾರ್ ಬಣದಿಂದ ನಾಲ್ಕು ಮಂದಿ ಸಂಪುಟದಲ್ಲಿದ್ದರೆ ಸಿದ್ದರಾಮಯ್ಯ ಅವರ ಆಪ್ತರು ನಾಲ್ಕು ಮಂದಿ ಸೇರ್ಪಡೆಯಾಗಿದ್ದಾರೆ. ಪ್ರಬಲ ವಿರೋಧದ ಬಳಿಕವೂ ಜಮೀರ್ ಅಹಮ್ಮದ್ ಅವರು ಸಂಪುಟದಲ್ಲಿ ಅವಕಾಶ ಪಡೆದಿದ್ದಾರೆ.
ಆದರೆ ಮೂಲಗಳ ಪ್ರಕಾರ ಇಬ್ಬರೂ ನಾಯಕರು ತಮ್ಮವರಿಗೆ ಹೆಚ್ಚಿನ ಅವಕಾಶ ನೀಡಬೇಕೆಂದು ಸಂಭವನೀಯ ಪಟ್ಟಿಯನ್ನು ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಿಗೆ ತಲುಪಿಸಿದ್ದಾರೆ ಎನ್ನಲಾಗಿದೆ. ಎರಡೂ ಬಣದಿಂದಲೂ ಕನಿಷ್ಠ 20 ಮಂದಿಯ ಹೆಸರುಗಳು ಹೈಕಮಾಂಡ್ ಅಂಗಳಕ್ಕೆ ತಲುಪಿವೆ. ಅದರಲ್ಲಿ ಹಿರಿಯರು, ಕಿರಿಯರು, ಪ್ರಾದೇಶಿಕ ಆದ್ಯತೆಯನ್ನು ಪರಿಗಣಿಸಲಾಗಿದೆ.


Spread the love

About Yuva Bharatha

Check Also

ಪ್ರಮೋದ್ ಮುತಾಲಿಕ್ ನಿವೃತ್ತಿ, ಶ್ರೀ ರಾಮಸೇನೆ ರಾಷ್ಟ್ರೀಯ ಅಧ್ಯಕ್ಷರಾಗಿ ಸಿದ್ದಲಿಂಗ ಸ್ವಾಮಿ ಆಯ್ಕೆ

Spread the loveಪ್ರಮೋದ್ ಮುತಾಲಿಕ್ ನಿವೃತ್ತಿ, ಶ್ರೀ ರಾಮಸೇನೆ ರಾಷ್ಟ್ರೀಯ ಅಧ್ಯಕ್ಷರಾಗಿ ಸಿದ್ದಲಿಂಗ ಸ್ವಾಮಿ ಆಯ್ಕೆ ಬೆಂಗಳೂರು : ಶ್ರೀ …

Leave a Reply

Your email address will not be published. Required fields are marked *

11 − five =