ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಳಗಾವಿ :
ಬೆಳಗಾವಿ (ಗ್ರಾಮೀಣ) ವ್ಯಾಪ್ತಿಯಲ್ಲಿ ಶಿಶು ಅಭಿವೃದ್ಧಿ ಯೋಜನೆ ಖಾಲಿ ಇರುವ ೧೬ ಅಂಗನವಾಡಿ ಕಾರ್ಯಕರ್ತೆಯರ ಮತ್ತು ೮೯ ಅಂಗನವಾಡಿ ಸಹಾಯಕಿಯರ ಹುದ್ದೆಗಳಿಗಾಗಿ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಜೂನ್ ೧೪ ೨೦೨೩ ರಿಂದ ಜುಲೈ ೧೫ ೨೦೨೩ ರವರೆಗೆ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ ಸುವರ್ಣ ಸೌಧ-೪, ಬಿ-೫ ನೆಲಮಹಡಿ ಬೆಳಗಾವಿ (ಗ್ರಾಮೀಣ) ಇಲ್ಲಿ ಸಂಪರ್ಕಿಸಬಹುದು ಎಂದು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಪ್ರಕಣೆಯಲ್ಲಿ ತಿಳಿಸಿದ್ದಾರೆ.
YuvaBharataha Latest Kannada News