ಕಾಡ ಸಿದ್ದೇಶ್ವರ ಸ್ವಾಮೀಜಿ ಕಾರು ಅಪಘಾತ : ಇಬ್ಬರು ಸಾವು, ಸ್ವಾಮೀಜಿಯವರಿಗೂ ಗಂಭೀರ ಗಾಯ

ಬೆಳಗಾವಿ :
ರಾಜ್ಯ ಸರ್ಕಾರ ಮತಾಂತರ ನಿಷೇಧ ಕಾಯ್ದೆ ವಾಪಸ್ ಪಡೆದಿರುವುದನ್ನು ಖಂಡಿಸಿ ವಿಶ್ವ ಹಿಂದೂ ಪರಿಷತ್ ಶನಿವಾರ ಬೆಳಗಾವಿಯಲ್ಲಿ ಹಮ್ಮಿಕೊಂಡಿದ್ದ ಪ್ರತಿಭಟನೆಗೆ ಆಗಮಿಸುತ್ತಿದ್ದ ಶಿವಾಪುರ ಗ್ರಾಮದ ಮುಪ್ಪಿನ ಕಾಡ ಸಿದ್ದೇಶ್ವರ ಮಠದ ಶ್ರೀ ಕಾಡಸಿದ್ದೇಶ್ವರ ಸ್ವಾಮೀಜಿಗಳ ಕಾರು ಭೀಕರ ಅಪಘಾತ ಸಂಭವಿಸಿದೆ. ಕಾರಲ್ಲಿದ್ದ ಇಬ್ಬರು ಮೃತಪಟ್ಟಿದ್ದು ಸ್ವಾಮೀಜಿ ಸೇರಿದಂತೆ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಬೆಳಗಾವಿ ಬಳಿಯ ರಾಷ್ಟ್ರೀಯ ಹೆದ್ದಾರಿ ನಾಲ್ಕರ ಕಾಕತಿ ಗ್ರಾಮದ ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಹೊನಗಾ-ಬೆನ್ನಾಳ್ಳಿ ಸೇತುವೆ ಸನಿಹ ಎರಡು ಲಾರಿ ಮತ್ತು ಕಾರು ಅಪಘಾತ ಸಂಭವಿಸಿದೆ. ಶಿವಾಪುರ ಗ್ರಾಮದ ಮುಪ್ಪಿನ ಕಾಡ ಸಿದ್ದೇಶ್ವರ ಮಠದ ಶ್ರೀ ಕಾಡಸಿದ್ದೇಶ್ವರ ಸ್ವಾಮೀಜಿಯವರಿಗೆ ಗಂಭೀರವಾಗಿ ಗಾಯವಾಗಿದ್ದು, ಅವರನ್ನು ಬೆಳಗಾವಿ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ವಾಹನದಲ್ಲಿದ್ದ ಸ್ವಾಮೀಜಿಯ ಇಬ್ಬರು ಸೇವಕರು ಮೃತಪಟ್ಟಿದ್ದಾರೆ. ಕಾಕತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
YuvaBharataha Latest Kannada News