ಉಪಹಾರ ಸೇವಿಸಿದ ವಿದ್ಯಾರ್ಥಿಗಳಿಗೆ ಹೊಟ್ಟೆ ನೋವು ಆಸ್ಪತ್ರೆಗೆ ದಾಖಲು

ಯುವ ಭಾರತ ಸುದ್ದಿ ಬೈಲಹೊಂಗಲ :
ಸಮೀಪದ ಹಾರುಗೊಪ್ಪ ಗ್ರಾಮದ ಹಿಂದುಳಿದ ವರ್ಗಗಳ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯದಲ್ಲಿ ಸೋಮವಾರ ಬೆಳಗ್ಗೆ ಉಪಹಾರ ಸೇವಿಸಿದ ವಿದ್ಯಾರ್ಥಿಗಳಿಗೆ ಹೊಟ್ಟೆ ನೋವು ಕಾಣಿಸಿಕೊಂಡ ಪರಿಣಾಮ ಆಸ್ಪತ್ರೆಗೆ ದಾಖಲಾಗಿದ್ದಾರೆ.
ತಕ್ಷಣ ವಿದ್ಯಾರ್ಥಿಗಳನ್ನು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲು ಮಾಡಿ ಅಗತ್ಯ ಚಿಕಿತ್ಸೆ ನೀಡಲಾಗಿದೆ.
ಒಟ್ಟು 23 ವಿದ್ಯಾರ್ಥಿಗಳನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಎಲ್ಲ ವಿದ್ಯಾರ್ಥಿಗಳು ಎಂದಿನಂತೆ ಸೋಮವಾರ ಮುಂಜಾನೆ ಉಪಹಾರ ಸೇವನೆ ಮಾಡಿದ್ದರು. ಚಪಾತಿ, ಅನ್ನ, ಸಾರು ನೀಡಲಾಗಿತ್ತು. ಸಾರಿನಲ್ಲಿ ಹಲ್ಲಿ ಬಿದ್ದಿದ್ದನ್ನು ಕೆಲವು ಮಕ್ಕಳು ಗಮನಿಸಿದರು. ಕೆಲಕಾಲದ ನಂತರ ಮಕ್ಕಳಿಗೆ ಹೊಟ್ಟೆ ನೋವು ಕಾಣಿಸಿಕೊಂಡಿದೆ. ಸದ್ಯ ಮಕ್ಕಳು ಚೇತರಿಸಿಕೊಳ್ಳುತ್ತಿದ್ದು ಇನ್ನೂ ಕೆಲವರು ಆಸ್ಪತ್ರೆಯಲ್ಲಿ ಇದ್ದಾರೆ.
YuvaBharataha Latest Kannada News